spot_img
Friday, March 6, 2026
spot_img

2024-2025ನೇ ಸಾಲಿನ ರಾಜ್ಯ ಬಜೆಟ್ : ಕರ್ನಾಟಕ ಪಬ್ಲಿಕ್‌ ಶಾಲೆಗಳಿಗಾಗಿ ಆಯ್ದ ಶಾಲೆಗಳ ಉನ್ನತೀಕರಣ | ಉನ್ನತ ಶಿಕ್ಷಣಕ್ಕೆ ನಿರ್ಧಿಷ್ಟ ಪ್ರಾಶಸ್ತ್ಯ : ಸಿಎಂ

ಜನಪ್ರತಿನಿಧಿ (ಬೆಂಗಳೂರು) : ಮುಖ್ಯಮಂತ್ರಿ ಸಿದ್ದರಾಮಯ್ಯ 2024-2025ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಲಾಗಿದೆ. ಶಾಲಾ ಕಾಲೇಜುಗಳ ಕೊಠಡಿ ನಿರ್ಮಾಣ, ದುರಸ್ತಿ, ಶೌಚಾಲಯ ನಿರ್ಮಾಣದಂತಹ ಕಾಮಗಾರಿಗಳಿಗೆ ಎಂಟುನೂರ ಐವತ್ತು ಕೋಟಿ ರೂ. ಅನುದಾನ ನೀಡಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ದ್ವಿಭಾಷಾ ಮಾಧ್ಯಮ ಶಾಲೆಗಳಿಗಾಗಿ ಎರಡು ಸಾವಿರ ಸರ್ಕಾರಿ ಪ್ರಾಥಮಿಕ ಶಾಲೆಗಳ ಪರಿವರ್ತನೆ ಹಾಗೂ ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ ಮತ್ತು ಅಗತ್ಯ ಮೂಲಸೌಕರ್ಯ ಒದಗಿಸಲು ಸಿ.ಎಸ್.ಆರ್‌ ಅನುದಾನದಡಿ, ಕರ್ನಾಟಕ ಪಬ್ಲಿಕ್‌ ಶಾಲೆಗಳಿಗಾಗಿ ಆಯ್ದ ಶಾಲೆಗಳ ಉನ್ನತೀಕರಣ ಮಾಡಲಾಗುವುದು ಎಂದು ಹೇಳಿದರು.

ಇನ್ನು, ಉನ್ನತ ಶಿಕ್ಷಣಕ್ಕೆ ನಿರ್ಧಿಷ್ಟ ಪ್ರಾಶಸ್ತ್ಯ ನೀಡಲಾಗಿದ್ದು, ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅಗತ್ಯ ಮೂಲಸೌಲಭ್ಯಗಳ ಕಾಮಗಾರಿಗಳಿಗೆ ಇನ್ನೂರೈವತ್ತು ಕೋಟಿ ರೂ. ಅನುದಾನ ಮಾಡಿದ್ದು ಮಾತ್ರವಲ್ಲದೇ, ಸರ್ಕಾರಿ ಪಾಲಿಟೆಕ್ನಿಕ್‌ ಹಾಗೂ ಇಂಜಿನಿಯರಿಂಗ್‌ ಕಾಲೇಜುಗಳ ಕಾಮಗಾರಿಗಳಿಗೆ ನೂರ ಇಪ್ಪತ್ತು ಕೋಟಿ ಅನುದಾನ ಮಾಡಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಅಷ್ಟಲ್ಲದೇ, ರಾಜ್ಯದ ಮೂವತ್ತು ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜುಗಳ ಹಾಗೂ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‌ ಗಳ ಉನ್ನತೀಕರಣಕ್ಕಾಗಿ ಒಟ್ಟು ಮೂವತ್ತು ಕೋಟಿ ರೂ ಅನುದಾನ ಮಾಡಿದ್ದಲ್ಲದೇ, ಐಐಟಿ ಮಾದರಿಯಲ್ಲಿ ಐನೂರು ಕೋಟಿ ರೂ. ವೆಚ್ಚದಲ್ಲಿ ವಿಶ್ವೇಶ್ವರ ಇಂಜಿನಿಯರಿಂಗ್‌ ಕಾಲೇಜು ವಿಶ್ವವಿದ್ಯಾಲಯ ಅಭಿವೃದ್ದಿ ಮಾಡಲಾಗುವುದು ಎಂದು ಅವರು ಬಜೆಟ್‌ ನಲ್ಲಿ ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!