Sunday, September 8, 2024

2024-2025ನೇ ಸಾಲಿನ ರಾಜ್ಯ ಬಜೆಟ್ : ಖ್ಯಾತ ‘ಪತ್ರಕರ್ತ ವಡ್ಡರ್ಸೆ ರಘುರಾಮ ಶೆಟ್ಟಿ’ ಅವರ ಹೆಸರಿನಲ್ಲಿ ಪ್ರಶಸ್ತಿ : ಸಿಎಂ ಸಿದ್ದರಾಮಯ್ಯ ಘೋಷಣೆ

ಜನಪ್ರತಿನಿಧಿ (ಬೆಂಗಳೂರು ) : ಮುಖ್ಯಮಂತ್ರಿ ಸಿದ್ದರಾಮಯ್ಯ 2024-2025ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ಸಂಬಂಧಿಸಿದಂತೆ ಮಹತ್ವದ ಘೋಷಣೆ ಮಾಡಿದ್ದಾರೆ.

ಸಾಮಾಜಿಕ ನ್ಯಾಯದ ಕ್ಷೇತ್ರಕ್ಕೆ ಕೊಡುಗೆ ನೀಡಿರುವ ಪತ್ರಕರ್ತರಿಗೆ ಖ್ಯಾತ ಪತ್ರಕರ್ತ ʼವಡ್ಡರ್ಸೆ ರಘುರಾಮ ಶೆಟ್ಟಿ ಪ್ರಶಸ್ತಿʼ ಸ್ಥಾಪಿಸಿ, ಪ್ರತಿ ವರ್ಷ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್‌ ಪಾಸ್‌ ಸೌಲಭ್ಯವನ್ನು ಪ್ರಾರಂಭಿಸಲಾಗುವುದು ಎಂದರು.

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್‌ ಅಧಿವೇಶನವು ಈ ವರ್ಷ ಶತಮಾನದ ಮೈಲಿಗಲ್ಲನ್ನು ಪೂರ್ಣಗೊಳಿಸುತ್ತಿದೆ. ಮಹಾತ್ಮಗಾಂಧೀಜಿಯವರು ಅಧ್ಯಕ್ಷತೆ ವಹಿಸಿದ್ದ ಏಕೈಕ ಅಧಿವೇಶನ ಇದಾಗಿದೆ. ಈ ಅಧಿವೇಶನದ ಕೊಡುಗೆಯನ್ನು ಸ್ಮರಿಸಲು ಎರಡು ಕೋಟಿ ರೂ. ವೆಚ್ಚದಲ್ಲಿ ಬೆಳಗಾವಿಯಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗುವುದು. ಅಲ್ಲದೇ ಮಹಾತ್ಮ ಗಾಂಧೀಜಿಯವರ ಕರ್ನಾಟಕದಲ್ಲಿ ಭೇಟಿ ನೀಡಿದ ಸ್ಥಳಗಳಲ್ಲಿ ಸ್ಮರಣಾರ್ಥ ಫಲಕಗಳನ್ನು ಅಳವಡಿಸಲಾಗುವುದು ಎಂದು ಹೇಳಿದರು.

ಇನ್ನು, ವಾರ್ತಾ ಇಲಾಖೆ ಪ್ರಕಟಿಸುತ್ತಿರುವ ವಾರ್ತಾ ಜನಪದ ಮತ್ತು ಮಾರ್ಚ್‌ ಆಫ್‌ ಕರ್ನಾಟಕ ಮಾಸ ಪತ್ರಿಕೆಗಳನ್ನು ಡಿಜಿಟೈಸ್‌ ಮಾಡುವ ಮೂಲಕ ಇನ್ನೂ ಹೆಚ್ಚಿನ ಜನರಿಗೆ ತಲುಪಿಸಲು ಕ್ರಮವಹಿಸಲಾಗುವುದು ಎಂದು ಅವರು ಹೇಳಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!