spot_img
Thursday, March 5, 2026
spot_img

ರಾಜ್ಯ ಬಜೆಟ್ : ಗ್ರಾಮೀಣ ಪ್ರದೇಶದ ಜನರಿಗೆ 24×7 ತುರ್ತು ಆರೋಗ್ಯ ಸೇವೆಗೆ ಅನುಕೂಲವಾಗುವಂತೆ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಮೇಲ್ದರ್ಜೆಗೆ : ಸಿಎಂ

ಜನಪ್ರತಿನಿಧಿ (ಬೆಂಗಳೂರು) : ಮುಖ್ಯಮಂತ್ರಿ ಸಿದ್ದರಾಮಯ್ಯ 2024-2025ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಸರ್ವರಿಗೂ ಆರೋಗ್ಯ ಭಾಗ್ಯ ಕಲ್ಪಿಸುವಂತಹ ಯೋಜನೆಗಳನ್ನು ಘೋಷಿಸಿದ್ದಾರೆ.

ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲ ಆಗುವ ಹಾಗೆ ವಾರದ ಎಲ್ಲಾ ದಿನಗಳಲ್ಲೂ ಇಪ್ಪತ್ತನಾಲ್ಕು ಗಂಟೆ ತುರ್ತು ಆರೋಗ್ಯ ಸೇವೆಯನ್ನು ನೀಡಲು ಮುಂದಿನ ಎರಡು ವರ್ಷಗಳಲ್ಲಿ ಮುನ್ನೂರೈವತ್ತು ಕೋಟಿ ರೂ.ಗಳ ವೆಚ್ಚದಲ್ಲಿ ಇಪ್ಪತ್ತೈದು ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಮೇಲ್ದರ್ಜೆಗೆ ಏರಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಇನ್ನೂರಿಪ್ಪತ್ತೊಂದು ಕೋಟಿ ರೂ. ವೆಚ್ಚದಲ್ಲಿ ನಲವತ್ತಾರು ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸ್ಥಾಪನೆ ಮಾಡಲಾಗುವುದೆಂದು ಹೇಳಿದ್ದಾರೆ.

ಇನ್ನು, ಏಳು ಜಿಲ್ಲೆಗಳಲ್ಲಿ ನೂರ ಎಂಬತ್ತೇಳು ಕೋಟಿ. ರೂ ವೆಚ್ಚದಲ್ಲಿ ಕ್ರಿಟಿಕಲ್‌ ಕೇರ್‌ ಬ್ಲಾಕ್‌ ಕಟ್ಟಡ ನಿರ್ಮಾಣ, ಇನ್ನೂರ ಎಂಬತ್ತು ಕೋಟಿ ರೂ. ವೆಚ್ಚದಲ್ಲಿ ಏಳು ತಾಲೂಕುಗಳಲ್ಲಿ ನೂರು ಹಾಸಿಗೆ ಸಾಮರ್ಥ್ಯದ ತಾಲೂಕು ಆಸ್ಪತ್ರೆ ನಿರ್ಮಾಣ ಮಾಡಲಾಗುವುದು ಎಂದು ಅವರು ಬಜೆಟ್‌ ಮಂಡನೆಯಲ್ಲಿ ತಿಳಿಸಿದ್ದಾರೆ.

ಬೆಂಗಳೂರಿನ ಕೆ.ಸಿ ಜನರಲ್‌ ಆಸ್ಪತ್ರೆ ಆವರಣದಲ್ಲಿ ನೂರೈವತ್ತು ಕೋಟಿ. ರೂ ವೆಚ್ಚದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ಹಾಗೂ ಇತರೆ ಮೂಲ ಸೌಕರ್ಯಗಳ ಕಾಮಗಾರಿಗಳಿಗೆ ಕ್ರಮ ವಹಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!