Sunday, September 8, 2024

ಆದಾಯವಿಲ್ಲದ 34,165 ʼಸಿʼ ವರ್ಗದ ಐತಿಹಾಸಿಕ ದೇವಾಲಯಗಳಲ್ಲಿನ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಕ್ರಮ | ʻಸಿʼ ವರ್ಗದ ದೇವಾಲಯಗಳ ಅರ್ಚಕರುಗಳಿಗೆ ಇನ್ಮುಂದೆ ತಸ್ತಿಕ್‌ ಮೊತ್ತ ಬ್ಯಾಂಕ್‌ ಖಾತೆಗೆ ನೇರ ಜಮೆ  : ಸಿಎಂ

ಜನಪ್ರತಿನಿಧಿ (ಬೆಂಗಳೂರು): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-2025ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಧಾರ್ಮಿಕ ದತ್ತಿ ಇಲಾಖೆಗೆ ಸಂಬಂಧಿಸಿದಂತೆ ಮಹತ್ವದ ಘೋಷಣೆ ಮಾಡಿದ್ದಾರೆ.

ಹೊರರಾಜ್ಯಗಳ ಪವಿತ್ರ ಪುಣ್ಯ ಕ್ಷೇತ್ರಗಳಾದ ತಿರುಮಲ, ಶ್ರೀಶೈಲ, ವಾರಣಾಸಿ ಹಾಗೂ ಗುಡ್ಡಾಪುರಕ್ಕೆ ಭೇಟಿ ನೀಡುವ ಕರ್ನಾಟಕದ ಭಕ್ತಾದಿಗಳ ಅನುಕೂಲಕ್ಕೆ ಸುಸಜ್ಜಿತ ವಸತಿ ಸಂಕೀರ್ಣಗಳನ್ನು ನಿರ್ಮಿಸಲಾಗುತ್ತಿದೆ. ತಿರುಮಲದಲ್ಲಿ ಇನ್ನೂರು ಕೋಟಿ ರೂ.ಗಳ ಕಾಮಗಾರಿ ಅಂತಿಮ ಹಂತದಲ್ಲಿದೆ. ಶ್ರೀಶೈಲದಲ್ಲಿ ಎಂಬತ್ತೈದು ಕೋಟಿ ರೂ. ವೆಚ್ಚದಲ್ಲಿ ಮತ್ತು ಗುಡ್ಡಾಪುರದಲ್ಲಿ ಹನ್ನೊಂದು ಕೋಟಿ ರೂ. ವೆಚ್ಚದ ಕಾಮಗಾರಿಗಳು ಪ್ರಗತಿಯಲ್ಲಿವೆ. ಪ್ರಸಕ್ತ ಸಾಲಿನಲ್ಲಿ ವಾರಣಾಸಿಯಲ್ಲಿ ಐದು ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ಸಿಎಂ ಬಜೆಟ್‌ ಮಂಡನೆಯಲ್ಲಿ ತಿಳಿಸಿದ್ದಾರೆ.

ಮಂತ್ರಾಲಯಕ್ಕೆ ಸಂಪರ್ಕ ಕಲ್ಪಿಸಲು ರಾಯಚೂರಿನ ಚಿಕ್ಕಂಚಾಲಿ ಗ್ರಾಮದ ಬಳಿ ಬ್ರಿಡ್ಜ್‌ -ಕಂ- ಬ್ಯಾರೇಜ್‌ ಅನ್ನು ಲೋಕೋಪಯೋಗಿ ಇಲಾಖೆ ವತಿಯಿಂದ ನೂರ ಐವತ್ತೆಂಟು ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಶ್ರೀ ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಹಾಗೂ ಕೊಪ್ಪಳ ಜಿಲ್ಲೆಯ ಹುಲಿಗೆಮ್ಮ ದೇವಾಲಯದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಾಧಿಕಾರಗಳನ್ನು ರಚಿಸಲಾಗುವುದು ಎಂದು ಹೇಳಿದ್ದಾರೆ.

ಇನ್ನು, ಯಾವುದೇ ಆದಾಯವಿಲ್ಲದ 34,165 ʼಸಿʼ ವರ್ಗದ ಐತಿಹಾಸಿಕ ದೇವಾಲಯಗಳಲ್ಲಿನ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಸಮಾಜದ ಗಣ್ಯರು ಹಾಗೂ ಸಂಬಂಧಪಟ್ಟ ಇಲಾಖೆಗಳ ಪ್ರತಿನಿಧಿಗಳನ್ನೊಳಗೊಂಡ ವಿಜ್ಹನ್‌ ಗ್ರೂಪ್ ರಚಿಸಲಾಗುವುದು ಎಂದು ತಿಳಿಸಿದ್ದಲ್ಲದೇ, ಇನಾಂ/ಇನಾಂಯೇತರ ಜಮೀನು ಕಳೆದುಕೊಂಡಂತಹ 29,523 ʻಸಿʼ ವರ್ಗದ ದೇವಾಲಯಗಳ ಅರ್ಚಕರುಗಳಿಗೆ ಇನ್ನು ಮುಂದೆ ತಸ್ತಿಕ್‌ ಮೊತ್ತವನ್ನು ಅರ್ಚಕರುಗಳ ಬ್ಯಾಂಕ್‌ ಖಾತೆಗೆ ಜಮೆ ಮಾಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!