Sunday, September 8, 2024

ಬೈಲೂರು ಶಾಲೆಯಲ್ಲಿ ‘ನಭದ ಕಡೆಗೊಂದು ನೋಟ’ ಆಕಾಶ ವೀಕ್ಷಣೆ ಕಾರ್ಯಕ್ರಮ

ಆಕಾಶ ವೀಕ್ಷಣೆ ಹವ್ಯಾಸ ಮಕ್ಕಳಲ್ಲಿ ಖಗೋಳದ ಬಗ್ಗೆ ಕುತೂಹಲವನ್ನು ಹೆಚ್ಚಿಸುತ್ತದೆ-ಅತುಲ್ ಭಟ್

ಕುಂದಾಪುರ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೈಲೂರು ಕುಂದಾಪುರ ವಲಯ ಇಲ್ಲಿ ಫೆ.15ರ ಸಂಜೆ 6ಗಂಟೆಯಿಂದ ನಡೆದ ‘ನಭದ ಕಡೆಗೊಂದು ನೋಟ’ ಆಕಾಶ ವೀಕ್ಷಣೆ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ಭೌತಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಅತುಲ್ ಭಟ್ ಅವರು ಮಕ್ಕಳಿಗೆ ಆಕಾಶಕಾಯಗಳನ್ನು ಪರಿಚಯಿಸುತ್ತ “ಆಕಾಶ ವೀಕ್ಷಣೆ ಹವ್ಯಾಸ ಮಕ್ಕಳಲ್ಲಿ ಖಗೋಳದ ಬಗ್ಗೆ ಕುತೂಹಲವನ್ನು ಹೆಚ್ಚಿಸುತ್ತದೆ” ಎಂದು ಅಭಿಪ್ರಾಯಪಟ್ಟರು.

ಎಸ್.ಡಿ.ಎಮ್.ಸಿ ಅಧ್ಯಕ್ಷೆ ಶ್ರೀಮತಿ ಶ್ರುತಿ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕುಂದಾಪುರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ರಾಮ ಮೊಗವೀರ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಕುಂದಾಪುರ ಇಲ್ಲಿನ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಮಿಲ್ಟನ್ ರೋಹಿತ್ ಕ್ರಾಸ್ತಾ ಉಪಸ್ಥಿತರಿದ್ದರು.

ನಂತರದಲ್ಲಿ ಸಂಪನ್ಮೂಲ ವ್ಯಕ್ತಿ ಅತುಲ್ ಭಟ್ ಪೂರ್ಣಪ್ರಜ್ಞ ಕಾಲೇಜಿನ ವಿದ್ಯಾರ್ಥಿಗಳಾದ ದಿನೇಶ ಹೆಬ್ಬಾರ್ ಮತ್ತು ಭೂಮಿಕಾ ಇವರ ಸಹಕಾರದೊಂದಿಗೆ ಮಕ್ಕಳಿಗೆ ದೂರದರ್ಶಕದ ಮೂಲಕ ಚಂದ್ರ, ಗುರು ಮತ್ತು ಅದರ ನಾಲ್ಕು ಉಪಗ್ರಹಗಳನ್ನು ತೋರಿಸಿ ಆಕಾಶದ ವಿವಿಧ ನಕ್ಷತ್ರ ಪುಂಜಗಳು ಮತ್ತು ನಕ್ಷತ್ರಗಳನ್ನು ಗುರುತಿಸುವುದನ್ನು ಮಕ್ಕಳಿಗೆ ಪರಿಚಯಿಸಿದರು.

ಈ ಸಂದರ್ಭದಲ್ಲಿ ಎಸ್ ಡಿ ಎಮ್ ಸಿ ಸದಸ್ಯರು, ಪೋಷಕರು, ಹಳೆವಿದ್ಯಾರ್ಥಿಗಳು ಮತ್ತು ಸ್ಥಳೀಯ ಖಗೋಳ ಆಸಕ್ತ ಶಿಕ್ಷಕರು ಭಾಗವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕಿ ಗಿರಿಜಾ ಡಿ ಸ್ವಾಗತಿಸಿದರು. ಕಾರ್ಯಕ್ರಮ ಸಂಯೋಜಿಸಿದ ಆನಂದ ಕುಲಾಲ ಪ್ರಸ್ತಾವನೆಗೈದರು. ಅತಿಥಿ ಶಿಕ್ಷಕಿ ಪ್ರಮೀಳಾ ವಂದಿಸಿದರು. ಸಹಶಿಕ್ಷಕಿ ಸಂಧ್ಯಾ ಕೆ. ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!