spot_img
Thursday, March 5, 2026
spot_img

ಕಾಲ್ತೊಡು ಶಾಲೆಯಲ್ಲಿ ಭಂಡಾರ್ಕಾರ್ಸ್ ಕಾಲೇಜಿನ ವಾರ್ಷಿಕ ವಿಶೇಷ ಶಿಬಿರ

ಬೈಂದೂರು: ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜು ಕುಂದಾಪುರ ಇದರ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭವು ಫೆಬ್ರವರಿ 15ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಾಲ್ತೊಡು ಇಲ್ಲಿ ನೆರವೇರಿತು.
ಎನ್.ಎಸ್ ಗ್ರೂಪ್ ಮತ್ತು ಯುವ ಮನೀಷ್ ಇದರ ಮಾಲಕರಾದ ಜಯಶೀಲ ಶೆಟ್ಟಿ, ಶಿಬಿರವನ್ನು ಉದ್ಘಾಟಿಸಿ ಶಿಬಿರದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿ ಶಿಬಿರಕ್ಕೆ ಶುಭಹಾರೈಸಿದರು.

ತದನಂತರ ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಗೋಪಾಲ ಪೂಜಾರಿಯವರು ಕಾಲ್ತೊಡು ಗ್ರಾಮಪಂಚಾಯತ್ ವತಿಯಿಂದ ಶಾಲೆಗೆ ನೀಡಿದ ಕುಡಿಯುವ ನೀರಿನ ಫಿಲ್ಟರ್ ನ್ನು ಉದ್ಘಾಟಿಸಿದರು.

ಕಾಲ್ತೊಡು ಶಾಲೆಯ ವಿದ್ಯಾರ್ಥಿಗಳಿಗೆ ವಾಹನದ ಸೌಲಭ್ಯಕ್ಕಾಗಿ ಜಯಶೀಲ ಶೆಟ್ಟಿ ಅವರಿಗೆ ಮುಖ್ಯ ಶಿಕ್ಷಕರು ಹಾಗೂ ಶಾಲಾಭಿವೃದ್ಧಿ ಮಂಡಳಿಯ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಮನವಿಯನ್ನು ಸಲ್ಲಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ಇವರು ಎನ್ ಎಸ್ ಎಸ್ ಶಿಬಿರದ ಧ್ಯೇಯೋದ್ದೇಶಗಳನ್ನು ತಿಳಿಸಿ ಶಿಬಿರವನ್ನು ಸದುಪಯೋಗ ಪಡಿಸಿಕೊಳ್ಳುವoತೆ ಹೇಳಿದರು .

ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಿ. ಎಂ. ಗೊಂಡ, ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಸದಾಶಿವ ಶೆಟ್ಟಿ, ಬೊಳ್ಳಂಬಳ್ಳಿ ಪದ್ಮಾವತಿ ದೇವಸ್ಥಾನದ ಧರ್ಮದರ್ಶಿ ಧರ್ಮರಾಜ್ ಜೈನ್, ತಾ.ಪಂ.ಮಾಜಿ ಸದಸ್ಯ ಎಚ್.ವಿಜಯಕುಮಾರ ಶೆಟ್ಟಿ, ಉಪ್ಪುಂದ ಸುಮಖ ಸರ್ಜಿಕಲ್ಸ್ ವ್ಯವಸ್ಥಾಪಕ ನಿರ್ದೇಶಕ ಬಿ. ಎಸ್. ಸುರೇಶ್ ಶೆಟ್ಟಿ, ಉಪ್ಪುಂದದ ಉದ್ಯಮಿ ವಾಜೂರಾಜ್ ಶೆಟ್ಟಿ, ಎಸ್.ಡಿ.ಎಂ.ಸಿ ಅಧ್ಯಕ್ಷ ವಿಜೇಂದ್ರ ಆಚಾರ್ಯ, ಮುಖ್ಯಶಿಕ್ಷಕ ವಿನಾಯಕ್ ಮೇರ್ಟ, ಎನ್.ಎಸ್.ಎಸ್ ಯೋಜನಾಧಿಕಾರಿ ಅರುಣ್ ಎ. ಎಸ್. ಉಪಸ್ಥಿತರಿದ್ದರು.

ಕಾಲ್ತೊಡು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಅಣ್ಣಪ್ಪ ಶೆಟ್ಟಿ ಬಟ್ನಾಡಿ ಸ್ವಾಗತಿಸಿದರು. ಯೋಜನಾಧಿಕಾರಿ ರಾಮಚಂದ್ರ ಆಚಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಿಬಿರಾರ್ಥಿಗಳಾದ ರಶೀಕಾ ವಂದಿಸಿದರು. ಸುನಿಧಿ ಕಾರ್ಯಕ್ರಮ ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!