spot_img
Thursday, March 5, 2026
spot_img

ಈ ಶತಮಾನದ ನಕಲಿ ಅರ್ಥಶಾಸ್ತ್ರಜ್ಞ ಸಿದ್ದರಾಮಯ್ಯ ಅವರು ಕರ್ನಾಟಕವನ್ನು ಸಾಲ ರಾಜ್ಯವನ್ನಾಗಿ ಪರಿವರ್ತಿಸಿದ್ದಾರೆ : ಬಿಜೆಪಿ ಟೀಕೆ

ಜನಪ್ರತಿನಿಧಿ (ಬೆಂಗಳೂರು) : ಸಾಲ- ಶೂಲದ ಹರಿಕಾರ ಸಾಲರಾಮಯ್ಯ ಎಂದು ರಾಜ್ಯ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ದ ಕಿಡಿ ಕಾರಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-2025ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿದ್ದರು. ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಬಜೆಟನ್ನು ತನ್ನ ಅಧಿಕೃತ ʼಎಕ್ಸ್‌ʼ ಖಾತೆಯ ಮೂಲಕ ಟೀಕಿಸಿದ ರಾಜ್ಯ ಬಿಜೆಪಿ, ಸಾಲವೇ ಎಲ್ಲದಕ್ಕೂ ವಾಮಮಾರ್ಗ ಎಂದುಕೊಂಡಿರುವ ಈ ಶತಮಾನದ ನಕಲಿ ಅರ್ಥಶಾಸ್ತ್ರಜ್ಞ ಸಿದ್ದರಾಮಯ್ಯ ಅವರು ಕರ್ನಾಟಕವನ್ನು ಸಾಲ ರಾಜ್ಯವನ್ನಾಗಿ ಪರಿವರ್ತಿಸಿದ್ದಾರೆ ಎಂದು ಟೀಕಿಸಿದೆ.

ಅಧಿಕಾರಕ್ಕೆ ಬಂದು ಕೇವಲ 9 ತಿಂಗಳಲ್ಲಿ ₹1,93,246 ಕೋಟಿ ಸಾಲ‌ ಮಾಡಿದ್ದಾರೆ. ಅಂದರೆ ಪ್ರತಿಯೊಬ್ಬ ಕನ್ನಡಿಗನ ತಲೆ ಮೇಲೆ ₹28 ಸಾವಿರ ಸಾಲ ಹೇರಿದ್ದಾರೆ. ಸಾಲರಾಮಯ್ಯನವರು ಒಂದು ಸಮುದಾಯದ ತುಷ್ಟೀಕರಣಕ್ಕಾಗಿ ಲಕ್ಷಾಂತರ ಕೋಟಿ ಸಾಲ ಮಾಡಿ ಕನ್ನಡಿಗರನ್ನು ಸಂಪೂರ್ಣವಾಗಿ ಮುಳುಗಿಸಿದ್ದಾರೆ. ಸಾಲದ ಸುಳಿಗೆ ಕರುನಾಡು ಸಿಲುಕಿದೆ. ಕರ್ನಾಟಕ ಅಭಿವೃದ್ಧಿಯಲ್ಲಿ 20 ವರ್ಷ ಹಿಂದಕ್ಕೆ ಬಿದ್ದಿದೆ. ಆರ್ಥಿಕತೆ ಹಳ್ಳ ಹಿಡಿದಿದೆ ಎಂದು ತಿವಿದಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!