spot_img
Saturday, June 21, 2025
spot_img

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಭೂಸ್ವಾಧೀನ ಕಾರ್ಯದ ಸರ್ವೆ ಕಾರ್ಯ ಅವೈಜ್ಞಾನಿಕ-ಸಚಿವೆ ಶೋಭಾ ಕರಂದ್ಲಾಜೆ

ಕುಂದಾಪುರ: ಕರಾವಳಿ ಜಂಕ್ಷನ್ ನಿಂದ ಮಲ್ಪೆ ವರೆಗಿನ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಭೂಸ್ವಾಧೀನ ಕಾರ್ಯದ ಸರ್ವೆ ಕಾರ್ಯ ಅವೈಜ್ಞಾನಿಕವಾಗಿದೆ, ನಿಗದಿಪಡಿಸಿರುವ ಪರಿಹಾರದ ಮೊತ್ತದಲ್ಲಿ ತಾರತಮ್ಯ ಉಂಟಾಗಿದೆ ಎಂದು ದೂರುಗಳು ಕೇಳಿ ಬರುತ್ತಿವೆ ಇವುಗಳ ನಿವಾರಣೆಗೆ ಕೂಡಲೇ ಸರಿಪಡಿಸಬೇಕೆಂದು ಅಧಿಕಾರಿಗಳಿಗೆ ಸಚಿವೆ ಶೋಭಾ ಕರಂದ್ಲಾಜೆ ಅವರು ಸೂಚನೆ ನೀಡಿದರು.

ಅವರು ಉಡುಪಿ ಪ್ರವಾಸಿ ಮಂದಿರದ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಉಡುಪಿ ನಗರದ ಕರಾವಳಿ ಜಂಕ್ಷನ್ ನಿಂದ ಮಲ್ಪೆಗೆ ಹೋಗುವ ರಸ್ತೆಯಲ್ಲಿ ಮೀನುಗಾರಿಕೆ ಚಟುವಟಿಕೆ ವಾಹನಗಳು, ಪ್ರವಾಸಿ ಹಾಗೂ ಸಾರ್ವಜನಿಕರ ವಾಹನಗಳು ಹೆಚ್ಚು ಸಂಚರಿ ಸಂಚರಿಸುತ್ತಿರುವ ಹಿನ್ನೆಲೆ ಸಾರ್ವಜನಿಕ ಸುಗಮ ಸಂಚಾರಕ್ಕೆ ಹೆಚ್ಚಿನ ತೊಂದರೆ ಉಂಟಾಗುತ್ತದೆ ಎಂದು ಸಾರ್ವಜನಿಕರಿಂದ ದೂರಗಳು ಕೇಳಿ ಬರುತ್ತಿವೆ, ಅಧಿಕಾರಿಗಳು ಭೂಸ್ವಾಧೀನ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಹೆದ್ದಾರಿ ಕಾಮಗಾರಿಯನ್ನು ಕೂಡಲೇ ಕೈಗೊಳ್ಳಬೇಕೆಂದು ಸೂಚನೆ ನೀಡಿದರು.

ಭೂ ಸ್ವಾಧೀನ ಪ್ರಕ್ರಿಯೆ ಕೈಗೊಳ್ಳುವಾಗ ಜಮೀನಿನ ಅಳತೆಯನ್ನು ನಿಖರವಾಗಿ ಗುರುತಿಸಬೇಕು, ಆ ಜಮೀನಿನಲ್ಲಿರುವ ಕಟ್ಟಡ ತೋಟಗಾರಿಕೆ ಬೆಳೆಗಳು ಸೇರಿದಂತೆ ಮತ್ತಿತರ ವಾಸ್ತವ ಸಂಗಾತಿಗಳನ್ನು ಪರಿಶೀಲಿಸಿ ಮಾರುಕಟ್ಟೆ ಮೌಲ್ಯ ಆಧಾರದ ಮೇಲೆ ನಿಯಮಾನುಸಾರ ನಿಗದಿಪಡಿಸಬೇಕು ಎಂದರು. ಭೂಸೇನೆ ಪ್ರಕ್ರಿಯೆ ತ್ವರಿತವಾಗಿ ಕೈಗೊಳ್ಳಲು ಭೂಸ್ವಾಧೀನ ಅಧಿಕಾರಿಗಳು ,ಕೃಷಿ ತೋಟಗಾರಿಕೆ , ಲೋಕೋಪಯೋಗಿ ಇಲಾಖೆಯವರು ಹಾಗೂ ಸರ್ವೆ ಇಲಾಖೆಯ ಅಧಿಕಾರಿಗಳು ಒಂದು ತಂಡವಾಗಿ ಹೋಗಿ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದರು.

ಸಂತೆಕಟ್ಟೆ ಅಂಡರ್ ಪಾಸ್ ಕಾಮಗಾರಿ ಹಾಗೂ ಹೆಬ್ರಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪ್ರಸಕ್ತ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆದು ಮಾತನಾಡಿ ಕಾಮಗಾರಿಗಳ ವೇಗವನ್ನು ಹೆಚ್ಚಿಸಿ ಮಳೆಗಾಲ ಮುಂಚೆ ಪೂರ್ಣಗೊಳಿಸುವುದು ಒಳಿತು ಎಂದರು.

ಶಾಸಕ ಯಶ್ ಪಾಲ್ ಸುವರ್ಣ ಮಾತನಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಅವಶ್ಯವಿರುವ ಜಾಗವನ್ನು ಸ್ಥಳೀಯ ಜನರು ನೀಡಲು ಮುಂದಾಗಿದ್ದಾರೆ ಆದರೆ ಅವರಿಗೆ ಸರಿಯಾದ ಮಾರುಕಟ್ಟೆ ಬೆಲೆ ನಿಗದಿಯಾಗಿಲ್ಲ ಎಂಬ ದೂರುಗಳು ಕೇಳಿ ಬರುತ್ತಿವೆ ಅಧಿಕಾರಿಗಳು ಜವಾಬ್ದಾರಿವಹಿಸಿ ಭೂಸ್ವಾಧೀನ ಪ್ರಕ್ರಿಯೆಯನ್ನು ಯಾವುದೇ ಗೊಂದಲಗಳು ಇಲ್ಲದಂತೆ ಪೂರ್ಣಗೊಳಿಸಬೇಕು ಎಂದರು.

ಸಾರ್ವಜನಿಕರು ಮಾತನಾಡಿ ಮಲ್ಪೆ ಬಂದರು ಏಷ್ಯಾ ಖಂಡದಲ್ಲಿ ಅತ್ಯಂತ ದೊಡ್ಡ ಬಂದರಾಗಿದ್ದು ನಿತ್ಯ ಮೀನುಗಾರಿಕೆ ಚಟುವಟಿಕೆ ವಾಹನಗಳು ಹೆಚ್ಚು ಸಂಚರಿಸುತ್ತವೆ ಹೆದ್ದಾರಿ ನಿರ್ಮಾಣ ಕಾಮಗಾರಿಯನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು, ಭೂ ಸ್ವಾಧೀನ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ಅನ್ಯಾಯವಾಗದ ರೀತಿಯಲ್ಲಿ ಪರಿಹಾರ ಹಣವನ್ನು ನೀಡಬೇಕೆಂದು ಮನವಿ ಮಾಡಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ, ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ ಎಸ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ ಜಾವೇದ್, ರಾಷ್ಟ್ರೀಯ ಹೆದ್ದಾರಿ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಮಂಜುನಾಥ್ ಕೆ.ವಿ, ಗುತ್ತಿಗೆದಾರರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,400SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!