spot_img
Tuesday, February 18, 2025
spot_img

ಸೇನಾಪುರ ನಿಲ್ದಾಣದಲ್ಲಿ ಎಕ್ಸ್‌ಪ್ರೆಸ್ ರೈಲು ನಿಲುಗಡೆಗೆ ಆಗ್ರಹಿಸಿ ಫೆ.18ರಂದು ಪ್ರತಿಭಟನೆ

ಕುಂದಾಪುರ: ಸೇನಾಪುರ ನಿಲ್ದಾಣದಲ್ಲಿ ಎಕ್ಸ್‌ಪ್ರೆಸ್ ರೈಲು ನಿಲುಗಡೆಗೆ ಆಗ್ರಹಿಸಿ ಫೆ.18 ಭಾನುವಾರ ಮಧ್ಯಾಹ್ನ 3 ಗಂಟೆಗೆ ಪ್ರತಿಭಟನೆ ನಡೆಯಲಿದೆ.

ಕಳೆದ ಅಕ್ಟೋಬರ್‌ನಲ್ಲಿ ನಡೆಸಿದ ಬೃಹತ್ ಹೋರಾಟ ನಡೆದಿತ್ತು. ಜಾತಿ, ಮತ, ಪಂಥಗಳನ್ನು ಮೀರಿ ನಮ್ಮ ಆಸುಪಾಸಿನ ಹಲವಾರು ಗ್ರಾಮಗಳಿಗೆ ಅನುಕೂಲವಾಗುವ ರೀತಿಯಲ್ಲಿ ಎಲ್ಲಾ ಸೌಲಭ್ಯಗಳಿರುವ ಸೇನಾಪುರದ ರೈಲು ನಿಲ್ದಾಣದಲ್ಲಿ ಸ್ಥಳೀಯ ಪ್ರಯಾಣಿಕರಿಗೆ ಉಪಯೋಗವಾಗುವಂತೆ ಎಕ್ಸ್‌ಪ್ರೆಸ್ ರೈಲುಗಳಿಗೆ ನಿಲುಗಡೆ ನೀಡಬೇಕೆಂದು ಹಕ್ಕೊತ್ತಾಯ ಮಂಡಿಸಲಾಗಿತ್ತು. ಮೂರು ತಿಂಗಳ ಗಡುವಿನಲ್ಲಿ ನಮಗೆ ಖಚಿತ ಉತ್ತರ ನೀಡಬೇಕೇಂದು ಒತ್ತಾಯಿಸಲಾಗಿತ್ತು. ಅದಕ್ಕೆ ಯಾವುದೇ ಪ್ರತಿಕ್ರಿಯೆ ಲಭಿಸದ ಹಿನ್ನೆಲೆಯಲ್ಲಿ ಮತ್ತೆ ಹೋರಾಟಕ್ಕೆ ಮುಂದಾಗಲಾಗಿದೆ.

ಸೇನಾಪುರ ನಿಲ್ದಾಣದಲ್ಲಿ ಎಕ್ಸ್‌ಪ್ರೆಸ್ ರೈಲು ನಿಲುಗಡೆ ಆಗಲೇ ಬೇಕಾದುದು ನಮ್ಮ ಅವಶ್ಯಕತೆ ಮತ್ತು ಹಕ್ಕು ಕೂಡಾ ಎನ್ನುವ ಹಕ್ಕೋತ್ತಾಯದೊಂದಿಗೆ ಬೃಹತ್ ಪ್ರತಿಭಟನೆಗೆ ಸೇನಾಪುರ ನಿಲ್ದಾಣದಲ್ಲಿ ಎಕ್ಸ್‌ಪ್ರೆಸ್ ರೈಲು ನಿಲುಗಡೆ ಹೋರಾಟ ಸಮಿತಿ ಸಿದ್ಧವಾಗಿದೆ.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!