spot_img
Wednesday, January 22, 2025
spot_img

ಲಕ್ಷ್ಮೀಸೋಮ ಬಂಗೇರ ಸರಕಾರಿ ಪ್ರಥಮದರ್ಜೆ ಕಾಲೇಜು ಕೋಟ ಪಡುಕರೆ: ವಿಶ್ವಗುರು ಬಸವಣ್ಣನವರ ಭಾವಚಿತ್ರ ಅನಾವರಣ

ಕೋಟ: ಲಕ್ಷ್ಮೀಸೋಮ ಬಂಗೇರ ಸರಕಾರಿ ಪ್ರಥಮದರ್ಜೆ ಕಾಲೇಜು ಕೋಟ ಪಡುಕರೆ ಇಲ್ಲಿ ಫೆ.೧೭ರಂದು ವಿಶ್ವಗುರು ಬಸವಣ್ಣನವರ ಭಾವಚಿತ್ರ ಅನಾವರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಕರ್ನಾಟಕ ಸರ್ಕಾರವು ಬಸವಣ್ಣನವರನ್ನು ’ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ’ ಎಂದು ಘೋಷಣೆ ಮಾಡಿರುವುದನ್ನು ತಿ ಳಿಯಪಡಿಸುತ್ತಾ ಸಾಮಾಜಿಕವಾಗಿ ಹಾಗೂ ಸಾಂಸ್ಕೃತಿಕವಾಗಿ ಬದಲಾವಣೆಯನ್ನು ನಮ್ಮ ಸಮಾಜದಲ್ಲಿ ತರುವಲ್ಲಿ ಕ್ರಾಂತಿಯೋಗಿ ಬಸವೇಶ್ವರರ ಮಹತ್ವದಪಾತ್ರದ ಬಗ್ಗೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸುನೀತ ವಿ ತಿಳಿಸಿದರು.

ಅವರು ಪ್ರತಿಪಾದಿಸಿದ ಜಾತಿ ರಹಿತ ಮತ್ತು ವರ್ಗರಹಿತ ಸಮಾಜದ ಸ್ಥಾ ಪನೆ, ಕಾಯಕವೇ ಕೈಲಾಸ, ಲಿಂಗಸಮಾನತೆ ಮುಂತಾದ ವಿಚಾರಗಳನ್ನು ವಿದ್ಯಾರ್ಥಿಗಳು ತಿಳಿದುಕೊಂಡು ಅದನ್ನು ಅಳವಡಿಸುವ ಅವಶ್ಯಕತೆಯಿದೆ ಎಂದು ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶಂಕರನಾಯ್ಕ ಬಿ ತಿಳಿಸಿದರು.

ಬೋಧಕ-ಬೋಧಕೇತರ ಹಾಗೂ ವಿದ್ಯಾರ್ಥಿಗಳ ಉಪಸ್ಥಿತಿಯಲ್ಲಿ ಬಸವಣ್ಣನವರ ಭಾವಚಿತ್ರವನ್ನು ಅನಾವರಣಗೊಳಿಸಿ ಪುಷ್ಪನಮನ ಸಲ್ಲಿಸಲಾಯಿತು.

ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶಂಕರ ನಾಯ್ಕ ಬಿ, ಸ್ವಾಗತಿಸಿ, ಐ.ಕ್ಯೂ.ಎ.ಸಿ ಸಂಚಾಲಕ ಡಾ. ಸುಬ್ರಮಣ್ಯ ವಂದಿಸಿದರು. ಅರ್ಥಶಾಸ್ತ್ರ ಉಪನ್ಯಾಸಕಿ ಸುಜಾತ ಆರ್ ನಾಯ್ಕ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ವಾಣಿಜ್ಯಶಾಸ್ತ್ರ ಉಪನ್ಯಾಸಕ ಶ್ರೀಕಾಂತ್ ಎ ಪೂಜಾರಿ, ಬೋಧಕೇತರ ಸಿಬ್ಬಂದಿಗಳಾದ ರಘುರಾಮ್, ಸುಜೀಂದ್ರ, ಚೈತ್ರಾ ಹಾಗೂ ಅಕ್ಷತಾ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!