spot_img
Tuesday, March 3, 2026
spot_img

ಹಣ ಅಕ್ರಮ ವರ್ಗಾವರಣೆ ಪ್ರಕರಣ : ಇ.ಡಿ ನಡೆಸುತ್ತಿರುವ ವಿಚಾರಣೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಜರಾಗುವುದಿಲ್ಲ : ಆಪ್‌ ಮಾಹಿತಿ

ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇ.ಡಿ) ನಡೆಸುತ್ತಿರುವ ವಿಚಾರಣೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಜರಾಗುವುದಿಲ್ಲ ಎಂದು ಆಮ್‌ ಆದ್ಮಿ ಪಕ್ಷ ಮಾಹಿತಿ ನೀಡಿದೆ.

ಇ.ಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 6 ಬಾರಿ ಸಮನ್ಸ್‌ ಜಾರಿ ಮಾಡಿದ್ದು, ಇದುವರೆಗೆ ಒಂದೇ ಒಂದು ವಿಚಾರಣೆಗೂ ಮುಖ್ಯಮಂತ್ರಿ ಕೇಜ್ರಿವಾಲ್‌ ಗೈರಾಗುತ್ತಾರೆ. ಸಮನ್ಸ್‌ ಅನ್ನು ಕಾನೂನುಬಾಹಿರ ಎಂದು ಕರೆದಿರುವ ಪಕ್ಷ, ಪದೇ ಪದೇ ಸಮನ್ಸ್ ಕಳುಹಿಸುವ ಬದಲು ನ್ಯಾಯಾಲಯದ ವಿಚಾರಣೆ ಮುಗಿಯುವವರೆಗೆ ಕಾಯಲಿ ಎಂದು ತಿಳಿಸಿದೆ.

ವಿಚಾರಣೆಗೆ ಹಾಜರಾಗದೇ ಇರುವುದರ ವಿರುದ್ಧ ಈ ಹಿಂದೆ ಇ.ಡಿ ನ್ಯಾಯಾಲಯದ ಮೆಟ್ಟಿಲೇರಿತ್ತು. ಈ ಸಂಬಂಧ ಫೆ.17ರಂದು ವಿಚಾರಣೆಗೆ ಹಾಜರಾಗುವಂತೆ ದೆಹಲಿ ನ್ಯಾಯಾಲಯ ಕೇಜ್ರಿವಾಲ್‌ ಅವರಿಗೆ ಆದೇಶಿಸಿತ್ತು.

ಶನಿವಾರ(ಫೆ.17) ವಿಡಿಯೊ ಕಾನ್ಫರೆನ್ಸ್‌ ಮೂಲಕ ವಿಚಾರಣೆಗೆ ಹಾಜರಾದ ಕೇಜ್ರಿವಾಲ್‌, ಬಜೆಟ್ ಅಧಿವೇಶನ ಮತ್ತು ವಿಶ್ವಾಸಮತ ಯಾಚನೆ ನಡೆಯುತ್ತಿರುವುದರಿಂದ ದೈಹಿಕವಾಗಿ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ ಎಂದು ತಿಳಿಸಿದ್ದರು. ವಿಚಾರಣೆ ಆಲಿಸಿದ ನ್ಯಾಯಾಲಯ ಕೇಜ್ರಿವಾಲ್‌ಗೆ ವೈಯಕ್ತಿಕ ಹಾಜರಾತಿಯಿಂದ ನ್ಯಾಯಾಲಯ ವಿನಾಯಿತಿ ನೀಡಿತ್ತು.

ದೆಹಲಿ ವಿಧಾನಸಭೆಯ ಬಜೆಟ್ ಅಧಿವೇಶನವು ಫೆಬ್ರವರಿ 15 ರಂದು ಪ್ರಾರಂಭವಾಗಿದೆ ಮತ್ತು ಮಾರ್ಚ್ ಮೊದಲ ವಾರದವರೆಗೆ ಮುಂದುವರಿಯುತ್ತದೆ ಎಂದು ಕೇಜ್ರಿವಾಲ್ ಅವರ ವಕೀಲರು ಸಲ್ಲಿಸಿದ ಅರ್ಜಿಯಲ್ಲಿ ತಿಳಿಸಲಾಗಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!