Sunday, September 8, 2024

ಫೆಬ್ರವರಿ 21ರ ವರಗೆ ದೆಹಲಿ ಚಲೋಗೆ ವಿರಾಮ : ಕೃಷಿ ತಜ್ಞರು ಹಾಗೂ ಕಾನೂನು ತಜ್ಞರೊಂದಿಗೆ ಸರ್ಕಾರ ನೀಡಿದ ಪ್ರಸ್ತಾವನೆಗಳ ಬಗ್ಗೆ ಚರ್ಚೆ

ಜನಪ್ರತಿನಿಧಿ (ಚಂಡೀಗಢ) : ಪ್ರತಿಭಟನಾ ನಿರತ ರೈತರ ಪ್ರತಿನಿಧಿಗಳು ಹಾಗೂ ಕೇಂದ್ರ ಸರ್ಕಾರದ ನಡುವೆ ನಿನ್ನೆ(ಆದಿತ್ಯವಾರ) ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ನಾಲ್ಕನೇ ಸುತ್ತಿನ ಸಭೆಯ ನಂತರ, ‘ದಿಲ್ಲಿ ಚಲೋ’ ಪ್ರತಿಭಟನೆಗೆ ತಾತ್ಕಾಲಿಕ ಬ್ರೇಕ್ ನೀಡಲಾಗಿದೆ.

ಫೆಬ್ರವರಿ 21ರ ವರಗೆ ದೆಹಲಿ ಚಲೋಗೆ ವಿರಾಮ ನೀಡಲಾಗಿದ್ದು, ಮತ್ತೆ ಬುಧವಾರದಿಂದ ಪ್ರತಿಭಟನೆ ಶಾಂತಿಯುತವಾಗಿ ಮತ್ತೆ ಆರಂಭವಾಗಲಿದೆ. ಸರ್ಕಾರದ ಪ್ರಸ್ತಾವನೆಯನ್ನು ತಜ್ಞರೊಂದಿಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ರೈತ ಮುಖಂಡರು ಇಂದು (ಸೋಮವಾರ) ಹೇಳಿದ್ದಾರೆ.

 ಶಂಭು ಗಡಿ ಭಾಗದಲ್ಲಿ ಮಾಧ್ಯಮ ವರದಿಗಾರರೊಂದಿಗೆ ಮಾತನಾಡಿದ ರೈತ ಮುಖಂಡ ಸರ್ವಾನ್ ಸಿಂಗ್ ಪಂಧೇರ್,  “ನಾವು ಕೃಷಿ ತಜ್ಞರು ಹಾಗೂ ಕಾನೂನು ತಜ್ಞರೊಂದಿಗೆ ಸರ್ಕಾರ ನೀಡಿದ ಪ್ರಸ್ತಾವನೆಗಳ ಬಗ್ಗೆ ಚರ್ಚಿಸುತ್ತೇವೆ ಹಾಗೂ ನಂತರ ಅದರ ಬಗ್ಗೆ ನಮ್ಮ ನಿರ್ಧಾರವನ್ನು ಕೇಂದ್ರಕ್ಕೆ ತಿಳಿಸುತ್ತೇವೆ. ನಮ್ಮ ದೆಹಲಿ ಚಲೋ ಸದ್ಯಕ್ಕೆ ಸ್ಟ್ಯಾಂಡ್‌ಬೈನಲ್ಲಿ ಇರಿಸಿದ್ದೇವೆ. ಆದಾಗ್ಯೂ, ಫೆಬ್ರವರಿ 21 ರಂದು, ನಾವು ನಮ್ಮ ಪ್ರತಿಭಟನಾ ಮೆರವಣಿಗೆಯನ್ನು ಶಾಂತಿಯುತವಾಗಿ ಆರಂಭಿಸುತ್ತೇವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಕೇಂದ್ರ ನೀಡಿರುವ ಪ್ರಸ್ತಾವನೆ ಕುರಿತು ರೈತರು ಚರ್ಚೆ ನಡೆಸಲಿದ್ದಾರೆ ಎಂದು ತಿಳಿಸಿದ್ದಲ್ಲದೇ, ಕನಿಷ್ಠ ಬೆಂಬಲ ಬೆಲೆಯನ್ನು(ಎಂಎಸ್‌ಪಿ) ಖಾತರಿಪಡಿಸುವ ಕಾನೂನು ಜಾರಿಗೆ ತರಬೇಕು ಎಂಬ ಬೇಡಿಕೆಯಿಂದ ರೈತರು ಹಿಂದೆ ಸರಿದಿಲ್ಲ ಹಾಗೂ ಎಂದಿಗೂ ಹಿಂದೆ ಸರಿಯುವುದಿಲ್ಲ ಎಂದು ವರದಿಗಾರರ ಪ್ರಶ್ನೆಯೊಂದಕ್ಕೆ ಪಂಧೇರ್ ಉತ್ತರಿಸಿದ್ದಾರೆ.

ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್, ಕೃಷಿ ಮತ್ತು ರೈತ ಕಲ್ಯಾಣ ಸಚಿವ ಅರ್ಜುನ್ ಮುಂಡಾ ಮತ್ತು ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಭಾನುವಾರ ಚಂಡೀಗಢದಲ್ಲಿ ರೈತ ಮುಖಂಡರೊಂದಿಗೆ ನಾಲ್ಕನೇ ಸುತ್ತಿನ ಮಾತುಕತೆ ನಡೆಸಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!