spot_img
Wednesday, January 22, 2025
spot_img

ಮಾನನಷ್ಟ ಮೊಕದ್ದಮೆ ಪ್ರಕರಣ : ನಾಳೆ ಬೆಳಗ್ಗೆ ಸುಲ್ತಾನ್‌ಪುರ ಜಿಲ್ಲಾ ಸಿವಿಲ್‌ ನ್ಯಾಯಾಲಯಕ್ಕೆ ರಾಗಾ ಹಾಜರು | ನ್ಯಾಯ್‌ ಯಾತ್ರೆಗೆ ಕೊಂಚ ಬ್ರೇಕ್‌

ಜನಪ್ರತಿನಿಧಿ (ರಾಜಧಾನಿ, ನವ ದೆಹಲಿ) : ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಲ್ತಾನ್‌ಪುರ ಜಿಲ್ಲಾ ಸಿವಿಲ್‌ ನ್ಯಾಯಾಲಯಕ್ಕೆ ಹಾಜರಾಗುವಂತೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಗೆ ಸಮನ್ಸ್‌ ಜಾರಿ ಮಾಡಿರುವುದರಿಂದ ನಾಳೆ(ಮಂಗಳವಾರ) ಬೆಳಗ್ಗೆ ಭಾರತ್‌ ಜೋಡೋ ನ್ಯಾಯ್‌ ಯಾತ್ರೆಗೆ ವಿರಾಮ ನೀಡಲಾಗುವುದು ಎಂದು ಕಾಂಗ್ರೆಸ್‌ ಸಂವಹನ ವಿಭಾಗದ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ತಮ್ಮ ಅಧಿಕೃತ ʼಎಕ್ಸ್‌ʼ ತಾಣದಲ್ಲಿ ಪೋಸ್ಟ್‌ ಮಾಡಿರುವ ಜೈರಾಮ್‌ ರಮೇಶ್‌,  ಭಾರತ್ ಜೋಡೋ ನ್ಯಾಯ್ ಯಾತ್ರೆ ಇಂದು 37ನೇ ದಿನಕ್ಕೆ ಕಾಲಿಟ್ಟಿದ್ದು, ನಾಳೆ(ಮಂಗಳವಾರ) ಬೆಳಗ್ಗೆ ಸಣ್ಣ ಬ್ರೇಕ್ ತನೀಡಲಾಗುವುದು ಹಾಗೂ ನಾಳೆ ಮಧ್ಯಾಹ್ನ 2 ಗಂಟೆಗೆ ಅಮೇಥಿಯ ಫರ್ಸತ್‌ಗಂಜ್‌ನಿಂದ ಆರಂಭವಾಗಲಿದೆ ಎಂದು ಪೋಸ್ಟ್‌ ಮಾಡಿದ್ದಾರೆ.

“ಆಗಸ್ಟ್ 4, 2018 ರಂದು ಬಿಜೆಪಿ ನಾಯಕರೊಬ್ಬರು ದಾಖಲಿಸಿದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ  ನಾಳೆ(ಫೆಬ್ರವರಿ 20) ಬೆಳಗ್ಗೆ ಸುಲ್ತಾನ್‌ಪುರದ ಜಿಲ್ಲಾ ಸಿವಿಲ್ ನ್ಯಾಯಾಲಯಕ್ಕೆ ಹಾಜರಾಗುವಂತೆ ರಾಹುಲ್ ಗಾಂಧಿ ಅವರಿಗೆ ಸಮನ್ಸ್ ನೀಡಲಾಗಿದೆ. ಆದ್ದರಿಂದ ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ಅರ್ಧ ದಿನ ಬ್ರೇಕ್ ನೀಡಲಾಗಿದೆ” ಎಂದು ಅವರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದು, ಫೆಬ್ರವರಿ 20 ರಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂಸದ/ಶಾಸಕರ ವಿಶೇಷ ನ್ಯಾಯಾಲಯದ ಮುಂದೆ ವಿಚಾರಣಗೆ ಹಾಜರಾಗಲಿದ್ದಾರೆ.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!