spot_img
Thursday, December 5, 2024
spot_img

ರಾಹುಲ್‌ ಗಾಂಧಿ ನಿರ್ದೇಶನದಂತೆ ರಾಜ್ಯದ ಬೊಕ್ಕಸದಿಂದ ಅಕ್ರಮವಾಗಿ ಹಣ ಮಂಜೂರು : ವಿಜಯೇಂದ್ರ ಆರೋಪ

ಜನಪ್ರತಿನಿಧಿ (ಬೆಂಗಳೂರು) : ಕಾಡಾನೆ ದಾಳಿಯಿಂದ ಮೃತಪಟ್ಟಿದ್ದ ಕೇರಳ ವಯನಾಡು ಮೂಲದ ವ್ಯಕ್ತಿಯ ಕುಟುಂಬಕ್ಕೆ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಸಲಹೆ ಆಧರಿಸಿ ಪರಿಹಾರ ನೀಡಲು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ಟೀಕಿಸಿದ್ದಾರೆ.

ಈ ಸಂಬಂಧಿಸಿದಂತೆ ಇಂದು(ಮಂಗಳವಾರ) ಪತ್ರಿಕಾ ಪ್ರಕಟಣೆ ಹೊರಡಿಸಿರುವ ವಿಜಯೇಂದ್ರ, 15 ಲಕ್ಷ ರೂಪಾಯಿ ಪರಿಹಾರ ನೀಡುವ ಕಾಂಗ್ರೆಸ್ ಸರ್ಕಾರದ ತೀರ್ಮಾನ ಖಂಡನೀಯ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

15 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದ್ದೇವೆಂದು ಅರಣ್ಯ ಸಚಿವರು ಪತ್ರ ಬರೆದಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೂಚನೆ ಬೆನ್ನಲ್ಲೇ ಅರಣ್ಯ ಸಚಿವರು ಪತ್ರ ಬರೆದಿದ್ದಾರೆ. ಮುಖ್ಯಮಂತ್ರಿಗಳ ಸೂಚನೆ ಹಿನ್ನೆಲೆ ಪರಿಹಾರ ನೀಡಲಾಗಿದೆ ಎಂದಿದ್ದಾರೆ. ಮಾನವೀಯ ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಪರಿಹಾರ ನೀಡಲಿ ಎಂದು ವಿಜಯೇಂದ್ರ ಹೇಳಿದ್ದಾರೆ.
ಇನ್ನು, ಪತ್ರಿಕಾ ಪ್ರಕಟಣೆಯನ್ನು ತಮ್ಮ ಅಧಿಕೃತ ʼಎಕ್ಸ್‌ʼ ಖಾತೆಯಲ್ಲಿ ಹಂಚಿಕೊಳ್ಳುವುದರ ಜೊತೆಗೆ ರಾಜ್ಯ ಸರ್ಕಾರವನ್ನು ಟೀಕಿಸಿದ ವಿಜಯೇಂದ್ರ, ಕೇರಳದ ವಯನಾಡು ಜಿಲ್ಲೆಯಲ್ಲಿ ಕಾಡಾನೆ ದಾಳಿಯಿಂದ ವ್ಯಕ್ತಿ ಮೃತಪಟ್ಟಿದ್ದರು. ಮೃತನ ಕುಟುಂಬಕ್ಕೆ ನೆರವಾಗುವಂತೆ ರಾಹುಲ್‌ ಗಾಂಧಿ ಸಲಹೆ ನೀಡಿದ್ದರು. ಅದರ ಮೇರೆಗೆ ಕರ್ನಾಟಕದ ತೆರಿಗೆದಾರರ ಹಣವನ್ನು ದುರುಪಯೋಗಪಡಿಸಿಕೊಂಡಿರುವುದು ಸಂಪೂರ್ಣವಾಗಿ ಅವಮಾನಕರ. ರಾಜ್ಯ ಸರ್ಕಾರ ತನ್ನ ಬೊಕ್ಕಸದಿಂದ ಅಕ್ರಮವಾಗಿ ಹಣ ಮಂಜೂರು ಮಾಡಿದ್ದು ರಾಜ್ಯದ ಜನರಿಗೆ ದ್ರೋಹ ಅಲ್ಲವೇ ಎಂದು ವಿಜಯೇಂದ್ರ ರಾಹುಲ್‌ ಗಾಂಧಿ ಅವರನ್ನು ಪ್ರಶ್ನೆ ಮಾಡಿದ್ದಾರೆ.

ಕಳೆದ ಮುಂಗಾರಿನಲ್ಲಿ ಸಾಕಷ್ಟು ಮಳೆಯಾಗದೆ ಕರ್ನಾಟಕದಲ್ಲಿ ಬರಗಾಲದಿಂದ ನೂರಾರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ, ಸ್ವಲ್ಪವೂ ನಾಚಿಕೆಯಿಲ್ಲದೆ ರಾಜ್ಯದ ತುರ್ತು ಅಗತ್ಯಗಳತ್ತ ಗಮನಹರಿಸುವ ಬದಲು ರಾಹುಲ್ ಗಾಂಧಿಯನ್ನು ಸಂತೋಷಪಡಿಸಲು ಆದ್ಯತೆ ನೀಡುತ್ತಿರುವುದು ಖೇದಕರ ಎಂದು ಅವರಿ ಟೀಕೆ ಮಾಡಿದ್ದಾರೆ. ಕಾಂಗ್ರೆಸ್ ಹೈಕಮಾಂಡ್‌ ಮೆಚ್ಚಿಸಲು ಕರ್ನಾಟಕದ ತೆರಿಗೆದಾರರ ಹಣವನ್ನು ಅನೈತಿಕವಾಗಿ ಬಳಸುತ್ತಿರುವುದಕ್ಕೆ ಸಿಎಂ ಹಾಗೂ ಸಚಿವರು ಹೊಣೆ ಹೊರಬೇಕು ಎಂದು ಅವರು ಆಗ್ರಹಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!