spot_img
Wednesday, March 4, 2026
spot_img

ಪ.ಬಂಗಾಳದಲ್ಲಿ ಪ. ಜಾತಿ, ಪ. ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳ ಜನರ ಆಧಾರ್ ಕಾರ್ಡ್‌ಗಳನ್ನು ನಿಷ್ಕ್ರಿಯಗೊಳಿಸಲಾಗಿದೆ : ದೀದಿ ಆರೋಪ

ಜನಪ್ರತಿನಿಧಿ (ಕೊಲ್ಕತ್ತಾ) : ರಾಜ್ಯದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳ ಜನರ ಆಧಾರ್ ಕಾರ್ಡ್‌ಗಳನ್ನು ನಿಷ್ಕ್ರಿಯಗೊಳಿಸಲಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯುವುದರ ಮೂಲಕ ಆರೋಪಿಸಿದ್ದಾರೆ.

ಈ ಕ್ರಮವು ಸಹಜ ನ್ಯಾಯದ ಸಂಪೂರ್ಣ ಉಲ್ಲಂಘನೆಯಾಗಿದೆ ಎಂದು ಕೂಡ ಮಮತಾ ಬ್ಯಾನರ್ಜಿ ಪತ್ರದಲ್ಲಿ ಉಲ್ಲೇಖಿಸಿ ಆರೋಪಿಸಿದ್ದಾರೆ. ಪಶ್ಚಿಮ ಬಂಗಾಳದ ವಿಶೇಷವಾಗಿ ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು ಹಾಗೂ ಒಬಿಸಿ ಸಮುದಾಯಗಳಿಗೆ ಸೇರಿದ ಜನರ ಆಧಾರ್ ಕಾರ್ಡ್‌ಗಳನ್ನು ನಿರ್ದಾಕ್ಷಿಣ್ಯವಾಗಿ ನಿಷ್ಕ್ರಿಯಗೊಳಿಸುವ ಗಂಭೀರ ಸ್ವರೂಪದ ಹಠಾತ್ ಬೆಳವಣಿಗೆಯನ್ನು ನಿಮ್ಮ ಗಮನಕ್ಕೆ ತರಲು ನಾನು ಬಯಸುತ್ತೇನೆ ಎಂದು ಮಮತಾ ಪತ್ರದಲ್ಲಿ ಬರೆದಿದ್ದಾರೆ. ಈ ಸಮುದಾಯದ ಸದಸ್ಯರಿಗೆ ಯಾವುದೇ ಪೂರ್ವ ಸೂಚನೆ ನೀಡದೆ ಆಧಾರ್ ಕಾರ್ಡ್‌ಗಳನ್ನು ನಿಷ್ಕ್ರಿಯಗೊಳಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ದೆಹಲಿಯಲ್ಲಿರುವ UIDAl ನ ಪ್ರಧಾನ ಕಛೇರಿಯು ಯಾವುದೇ ಕ್ಷೇತ್ರ ವಿಚಾರಣೆ ಅಥವಾ ವ್ಯಕ್ತಿಗಳ ಅಭಿಪ್ರಾಯ, ಅನಿಸಿಕೆ ಕೇಳದೆ, ರಾಜ್ಯ ಸರ್ಕಾರವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ನೇರವಾಗಿ ವ್ಯಕ್ತಿಗಳು ಹಾಗೂ ಕುಟುಂಬ ಸದಸ್ಯರಿಗೆ ಅವರ ಆಧಾರ್ ಕಾರ್ಡ್‌ಗಳನ್ನು ನಿಷ್ಕ್ರಿಯಗೊಳಿಸುವುದರ ಕುರಿತು ನಿಮ್ಮ ಗಮನಕ್ಕೆ ತರುತ್ತಿದ್ದೇನೆ ಎಂದು ಪ್ರಧಾನಿಗಳಿಗೆ ದೀದಿ ಪತ್ರ ಕಳುಹಿಸಿದ್ದಾರೆ.

ರಾಜ್ಯದ ಪ್ರತಿಯೊಬ್ಬ ನಾಗರಿಕರು ಈ ವಿಷಯದ ಬಗ್ಗೆ ಭಯದ ಸ್ಥಿತಿಯಲ್ಲಿದ್ದಾರೆ. ಕಾರಣಗಳನ್ನು ನೀಡದೆ ಆಧಾರ್ ಕಾರ್ಡ್‌ಗಳನ್ನು ನಿಷ್ಕ್ರಿಯಗೊಳಿಸುವ ಇಂತಹ ಹಠಾತ್ ಕ್ರಮಕ್ಕೆ ಕಾರಣಗಳ ಬಗ್ಗೆ ನಾನು ನಿಮ್ಮಿಂದ ತಿಳಿಯಲು ಬಯಸುತ್ತೇನೆ ಎಂದು ಮಮತಾ ಬ್ಯಾನರ್ಜಿ ಪತ್ರದಲ್ಲಿ ಬರೆದಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!