spot_img
Saturday, December 7, 2024
spot_img

ಮುಗಿಯದ ಸೀಟು ಹಂಚಿಕೆಯ ಗೊಂದಲ : ಸಮಾಜವಾದಿ ಪಕ್ಷದ ಭದ್ರಕೋಟೆಗೆ ಬೇಡಿಕೆ ಇಟ್ಟಿತೇ ಕಾಂಗ್ರೆಸ್‌ ?

ಜನಪ್ರತಿನಿಧಿ (ಉತ್ತರ ಪ್ರದೇಶ) : ಅಖಿಲೇಶ್ ಯಾದವ್ ಅವರು ಮೊರಾದಾಬಾದ್, ಬಲ್ಲಿಯಾ ಮತ್ತು ಬಿಜ್ನೋರ್ ಲೋಕಸಭಾ ಕ್ಷೇತ್ರಗಳನ್ನು ಕಾಂಗ್ರೆಸ್‌ಗೆ ಬಿಟ್ಟುಕೊಡಲು ಸಿದ್ಧರಿರಲಿಲ್ಲ. ಆದಾಗ್ಯೂ, ನಿನ್ನೆ(ಸೋಮವಾರ) ತಡರಾತ್ರಿ ನಡೆದ ಲೋಕಸಭೆ ಸೀಟು ಹಂಚಿಕೆ ಮಾತುಕತೆಯಲ್ಲಿ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷಗಳು ಒಪ್ಪಂದಕ್ಕೆ ಬರಲು ವಿಫಲವಾಗಿವೆ ಎಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್ ತನ್ನ ರಾಜ್ಯಾಧ್ಯಕ್ಷ ಅಜಯ್ ರೈಗಾಗಿ ಬಲ್ಲಿಯಾ ಕ್ಷೇತ್ರಕ್ಕೆ ಬೇಡಿಕೆ ಇಟ್ಟಿದೆ ಎಂದು ಮೂಲಗಳು ಹೇಳಿವೆ. ಬಲ್ಲಿಯಾ ಲೋಕಸಭಾ ಕ್ಷೇತ್ರ  ಸಮಾಜವಾದಿ ಪಕ್ಷದ ಭದ್ರಕೋಟೆ ಎಂದು ಪರಿಗಣಿಸಲಾಗುತ್ತದೆ.  

ಸೀಟು ಹಂಚಿಕೆಯ ಮಾತುಕತೆಗಳು ಅಂತಿಮ ಹಂತಕ್ಕೆ ತಲುಪಲು ವಿಫಲವಾದ ಕಾರಣ, ಸಮಾಜವಾದಿ ಪಕ್ಷದ ವರಿಷ್ಠರು ರಾಹುಲ್ ಗಾಂಧಿಯವರ ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಭಾಗಿಯಾಗುವುದಿಲ್ಲ. ಇನ್ನು, ಅಖಿಲೇಶ್ ಯಾದವ್ ಅವರು ಕೂಡ ಕಾಂಗ್ರೆಸ್‌ನೊಂದಿಗೆ ಸೀಟು ಹಂಚಿಕೆ ಅಂತಿಮಗೊಳ್ಳುವವರೆಗೆ ಯಾತ್ರೆಯಲ್ಲಿ ಭಾಗವಹಿಸುವುದಿಲ್ಲ ಎಂದು ಈ ಹಿಂದೆ ಹೇಳಿದ್ದರು. ಸೀಟು ಹಂಚಿಕೆ ಅಂತಿಮಗೊಂಡ ನಂತರ ಸಮಾಜವಾದಿ ಪಕ್ಷ ಕಾಂಗ್ರೆಸ್‌ನ ನ್ಯಾಯ ಯಾತ್ರೆಗೆ ಸೇರಲಿದೆ ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.

2019 ರ ಲೋಕಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷವು ಮೊರಾದಾಬಾದ್ ಕ್ಷೇತ್ರದಲ್ಲಿ ಗೆಲುವು ಸಾಧಿಸಿತು. ಮೊರಾದಾಬಾದ್‌ನಲ್ಲಿ ನಡೆದ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ಎರಡನೇ ಸ್ಥಾನ ಪಡೆದು ಅಲ್ಪ ಮತಗಳ ಅಂತರದಿಂದ ಸೋತಿದೆ. ನಿನ್ನೆ(ಸೋಮವಾರ) ಸಮಾಜವಾದಿ ಪಕ್ಷವು ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ಗೆ 17 ಲೋಕಸಭಾ ಕ್ಷೇತ್ರಗಳನ್ನು ನೀಡುವುದಕ್ಕೆ ಒಪ್ಪಿಕೊಂಡಿತ್ತು, ಆದಾಗ್ಯೂ ಕಾಂಗ್ರೆಸ್‌ ಹಾಗೂ ಸಮಾಜವಾದಿ ಪಕ್ಷದೊಂದಿಗಿನ ಲೋಕಸಭಾ ಸೀಟು ಹಂಚಿಕೆಯ ಒಪ್ಪಂತ ಅಂತಿಮವಾಗಿಲ್ಲ ಎನ್ನುವುದು ಇಲ್ಲಿ ಉಲ್ಲೇಖಾರ್ಹ.

ಮುಂಬರುವ ಸಾರ್ವತ್ರಿಕ ಚುನಾವಣೆಗೆ ಉತ್ತರ ಪ್ರದೇಶದಿಂದ ಇನ್ನೂ 11 ಅಭ್ಯರ್ಥಿಗಳನ್ನು ಘೋಷಿಸಲಾಗಿದೆ, ಇದರಲ್ಲಿ ಡಾನ್-ಟರ್ನ್ಡ್-ರಾಜಕಾರಣಿ ಮುಖ್ತಾರ್ ಅನ್ಸಾರಿ ಅವರ ಸಹೋದರ ಮತ್ತು ಬಿಎಸ್ಪಿ ಸಂಸದ ಅಫ್ಜಲ್ ಅನ್ಸಾರಿ ಸೇರಿದ್ದಾರೆ. ಜನವರಿ 30 ರಂದು ಸಮಾಜವಾದಿ ಪಕ್ಷವು ಉತ್ತರ ಪ್ರದೇಶದ 16 ಲೋಕಸಭಾ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿತು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!