spot_img
Saturday, December 7, 2024
spot_img

2018ರ ಮಾನನಷ್ಠ ಮೊಕದ್ದಮೆ ಕೇಸ್‌ : ರಾಹುಲ್‌ ಗಾಂಧಿಗೆ ಸುಲ್ತಾನ್ ಪುರ ಕೋರ್ಟ್‌ ನಿಂದ ಜಾಮೀನು

ಜನಪ್ರತಿನಿಧಿ (ನವ ದೆಹಲಿ) : ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿರುವ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿಗೆ ಒಂದು ಬಿಗ್‌ ರಿಲೀಫ್‌ ಸಿಕ್ಕಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಪ್ರಕರಣದಲ್ಲಿ ಸುಲ್ತಾನ್ ಪುರ ಕೋರ್ಟ್ ರಾಗಾ ಅವರಿಗೆ ಜಾಮೀನು ನೀಡಿದೆ.

2018ರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ಹೇಳಿಕೆಗಾಗಿ ಭಾರತೀಯ ಜನತಾ ಪಕ್ಷದ ನಾಯಕರೊಬ್ಬರು ಮಾನನಷ್ಟ ಪ್ರಕರಣ ದಾಖಲಿಸಿದ್ದರು. ಇದೇ ಪ್ರಕರಣವನ್ನು ಇಂದು (ಮಂಗಳವಾರ,ಫೆಬ್ರವರಿ 20) ಸುಲ್ತಾನ್‌ಪುರದ ಸಂಸದ-ಶಾಸಕ ನ್ಯಾಯಾಲಯವು ವಿಚಾರಣೆ ನಡೆಸಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಉತ್ತರ ಪ್ರದೇಶದ ಸುಲ್ತಾನ್ಪುರ ನ್ಯಾಯಾಲಯ ಇಂದು ಜಾಮೀನು ಮಂಜೂರು ಮಾಡಿದೆ ಎಂದು  ರಾಷ್ಟ್ರೀಯ ಸುದ್ದಿಸಂಸ್ಥೆ ಎಎನ್‌ಐ ವರದಿ ಮಾಡಿದೆ.

2018 ಮೇ 8 ರಂದು ಬೆಂಗಳೂರಿನಲ್ಲಿ ನಡೆಸಿದ ಸುದ್ದಿಗೋಷ್ಟಿಯೊಂದರಲ್ಲಿ ರಾಹುಲ್‌ ಗಾಂಧಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ದ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದರು ಎಂದು ಆರೋಪಿಸಿ ವಿಜಯ್‌ ಮಿಶ್ರಾ ಎಂಬುವವರು ಆಗಸ್ಟ್‌ 4, 2018ರಂದು ರಾಹುಲ್‌ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ಬಿಜೆಪಿಯು ತಮ್ಮದು ಪ್ರಾಮಾಣಿಕ ಮತ್ತು ಸ್ವಚ್ಛ ರಾಜಕಾರಣದಲ್ಲಿ ನಂಬಿಕೆಯಿಟ್ಟಿರುವ ಪಕ್ಷ ಎಂದು ಹೇಳಿಕೊಳ್ಳುತ್ತದೆ. ಆದರೆ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ವ್ಯಕ್ತಿಯನ್ನು(ಅಮಿತ್ ಶಾ) ಪಕ್ಷದ ಅಧ್ಯಕ್ಷ ಸ್ಥಾನದಲ್ಲಿ ಕೂರಿಸಿದೆ ಎಂದು ರಾಹುಲ್ ಗಾಂಧಿ ಆಗ ಹೇಳಿದ್ದರು.

ಭಾರತ್ ಜೋಡೊ ನ್ಯಾಯ ಯಾತ್ರೆಯಲ್ಲಿ ನಿರತರಾಗಿದ್ದರಿಂದ ಜ.18ರಂದು ನಡೆದ ವಿಚಾರಣೆಯಲ್ಲಿ ರಾಹುಲ್ ಗಾಂಧಿ ಹಾಜರಾಗಿರಲಿಲ್ಲ. ಬಿಜೆಪಿ ಅತಿದೊಡ್ಡ ಪಕ್ಷವಾಗಿದ್ದು, ಪಕ್ಷದ ಪ್ರಮುಖ ನಾಯಕನನ್ನು ಕೊಲೆಗಾರ ಎಂದು ಕರೆಯುವುದು ಸರಿಯಲ್ಲ ಎಂದು ಮಿಶ್ರಾ ನ್ಯಾಯಾಲಯಕ್ಕೆ ಹೇಳಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಮನ್ಸ್‌ ಜಾರಿ ಆಗಿರುವುದರಿಂದ ವಿಚಾರಣೆಯಲ್ಲಿ ಭಾಗವಹಿಸುವುದಕ್ಕಾಗಿ ರಾಹುಲ್‌ ಗಾಂಧಿ ಭಾರತ್‌ ಜೋಡೋ ನ್ಯಾಯ್‌ ಯಾತ್ರೆಗೆ ಇಂದು ಬೆಳಗ್ಗೆ ವಿರಾಮ ಕೊಟ್ಟಿದ್ದರು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!