spot_img
Wednesday, March 4, 2026
spot_img

ಉಪ್ರಳ್ಳಿ ಶ್ರೀ ಕಾಳಿಕಾಂಬಾ ದೇವಸ್ಥಾನ ಪ್ರತಿಷ್ಠಾ ವರ್ಧಂತ್ಯುತ್ಸವ: ಸ್ವರ್ಣ ಮುಖವಾಡ ಸಮರ್ಪಣೆ-ಎನ್.ವಿ.ಕೆ ಸಭಾಂಗಣ ಉದ್ಘಾಟನೆ

ಬೈಂದೂರು: ಕರಸ್ಥಳ ಜಗದ್ಗುರು ಶ್ರೀ ನಾಗಲಿಂಗಸ್ವಾಮಿ ಹಾಗೂ ಶ್ರೀ ವಿಶ್ವಕರ್ಮೇಶ್ವರ ಸಾನಿಧ್ಯವಿರುವ ಶ್ರೀ ಕಾಳಿಕಾಂಬಾ ದೇವಸ್ಥಾನ ಉಪ್ರಳ್ಳಿ ಇಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ, ಸ್ವರ್ಣ ಮುಖವಾಡ ಸಮರ್ಪಣೆ, ಎನ್.ವಿ.ಕೆ ಸಭಾಂಗಣ ಉದ್ಘಾಟನೆ, ತುಲಾಭಾರ ಸೇವೆ, ವಿದ್ಯಾರ್ಥಿವೇತನ ವಿತರಣಾ ಸಮಾರಂಭ ಫೆ.23ರಿಂದ ಫೆ.25ರ ತನಕ ನಡೆಯಲಿದೆ.

ಪೆ.23ರಂದು ಸಂಜೆ 7 ಗಂಟೆಯಿಂದ ವಾಸ್ತು ರಾಕ್ಷೆಘ್ನ, ದೈವಗಳಿಗೆ ಕಲಾ ಹೋಮ ಇತ್ಯಾದಿ, ನೂತನ ಎನ್.ವಿ.ಕೆ ಸಭಾಂಗಣದಲ್ಲಿ ವಾಸ್ತು ರಾಕ್ಷೆಘ್ನ, ಬಲಿ ಇತ್ಯಾದಿ ಧಾರ್ಮಿಕ ಕಾರ್ಯಕ್ರಮಗಳು.

ಫೆ.24ರಂದು ಶನಿವಾರ ಬೆಳಿಗ್ಗೆ 8 ಗಂಟೆಗೆ ಕಲಾಹೋಮ, ಪಂಚಾಮೃತ, ಪವಮಾನ ಕಲಶಾಭಿಷೇಕ, ರುದ್ರಾಭಿಷೇಕ, ಮಹಾಪೂಜೆ, ಮಧ್ಯಾಹ್ನ ಅನ್ನಸಂತರ್ಪಣೆ, ಮಧ್ಯಾಹ್ನ 1.30ರಿಂದ ಓಂಕಾರ್ ಕಲಾವಿದರು ಕನ್ನುಕೆರೆ ತೆಕ್ಕಟ್ಟೆ ಇವರಿಂದ ನಾಟಕ ವಾಚ್ ಮ್ಯಾನ್., ಸಂಜೆ 6 ಗಂಟೆಗೆ ರಂಗಪೂಜೆ, ದೇವರ ಪಲ್ಲಕ್ಕಿ ಉತ್ಸವ, ಪುಷ್ಕರಣಿ ಪ್ರವೇಶ, ಪೂಜೆ ದೈವಗಳ ತಂಬಿಲ ಸೇವೆ, ವಸಂತ ಮಂಟಪದಲ್ಲಿ ಪೂಜೆ, ಪ್ರಸಾದ ವಿತರಣೆ, ಸಂಜೆ 7ರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಫೆ.25ರಂದು ಬೆಳಿಗ್ಗೆ ತುಲಾಭಾರ ಸೇವೆ ನಡೆಯಲಿದೆ.

ಎನ್.ವಿ.ಕೆ ಸಭಾಂಗಣ ಉದ್ಘಾಟನೆ: ದೇವಸ್ಥಾನದಲ್ಲಿ ಸುಮಾರು 2 ಕೋಟಿ ರೂ ವೆಚ್ಚದಲ್ಲಿ ಸುಸಜ್ಜಿತ ಸಭಾಂಗಣ ನಿರ್ಮಿಸಲಾಗಿದ್ದು ಫೆ.24ರಂದು ಮಧಾಹ್ನ 3 ಗಂಟೆಗೆ ಉದ್ಘಾಟನೆ ನಡೆಯಲಿದೆ. ಧಾರ್ಮಿಕ ಸಭೆ ನಡೆಯಲಿದ್ದು ಪರಮಪೂಜ್ಯ ಜಗದ್ಗುರು ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಜಿ, ಆನೆಗುಂದಿ ಮಹಾಸಂಸ್ಥಾನ, ಸರಸ್ವತೀ ಪೀಠ ಬೆಳಗುತ್ತಿಮಠ, ಕಟಪಾಡಿ ಪಡುಕುತ್ಯಾರು ಆಶೀರ್ವಚನ ನೀಡಲಿದ್ದಾರೆ.

ನೂತನ ಸಭಾಂಗಣವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉದ್ಘಾಟಿಸಲಿದ್ದಾರೆ. ಸಂಸದತರಾದ ಬಿ.ವೈ.ರಾಘವೇಂದ್ರ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶ್ರೀ ಕಾಳಿಕಾಂಬಾ ದೇವಸ್ಥಾನ ಉಪ್ರಳ್ಳಿ ಆಡಳಿತ ಮೊಕ್ತೇಸರರಾದ ಚಂದ್ರಯ್ಯ ಆಚಾರ್ಯ ಕಳಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಗುರುರಾಜ್ ಗಂಟಿಹೊಳೆ, ಬಸ್ರೂರು ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಬಿ.ಅಪ್ಪಣ್ಣ ಹೆಗ್ಡೆ, ಮಾಜಿ ಶಾಸಕರಾದ ಬಿ.ಎಂ.ಸುಕುಮಾರ ಶೆಟ್ಟಿ, ಕೆ.ಗೋಪಾಲ ಪೂಜಾರಿ,ಉದ್ಯಮಿ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರು, ಆನೆಗುಂದಿ ಮಹಾಸಂಸ್ಥಾನ, ಸರಸ್ವತೀ ಪೀಠ ಬೆಳಗುತ್ತಿಮಠ, ಕಟಪಾಡಿ ಪಡುಕುತ್ಯಾರು ಇದರ ಅಧ್ಯಕ್ಷರಾದ ಶ್ರೀಧರ ಆಚಾರ್ಯ, ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಎಸ್.ಪ್ರಕಾಶ್ಚಂದ್ರ ಶೆಟ್ಟಿ, ಕೆ.ನವೀನ ಕುಮಾರ್ ಆಚಾರ್ಯ ಕಿರಿಮಂಜೇಶ್ವರ, ಉ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ‌ಅಧ್ಯಕ್ಷರಾದ ರಾಧಾಕೃಷ್ಣ ಭಟ್ ಉಪ್ರಳ್ಳಿ, ಹೇರೂರು ಗ್ರಾ.ಪಂ. ಉಪಾಧ್ಯಕ್ಷ ಶ್ರೀನಿವಾಸ ಪೂಜಾರಿ ಭಾಗವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ರಥಶಿಲ್ಪಿ ರಾಜ್‌ಗೋಪಾಲ ಆಚಾರ್ಯ ಕೋಟೇಶ್ವರ ಅವರನ್ನು ಸನ್ಮಾನಿಸಲಾಗುವುದು.

ವಿದ್ಯಾರ್ಥಿವೇತನ ವಿತರಣೆ:
ಫೆ.25ರಂದು ಬೆಳಿಗ್ಗೆ 10-30ಕ್ಕೆ ಶ್ರೀ ಕಾಳಿಕಾಂಬಾ ಎಜುಕೇಶನ್ ಟ್ರಸ್ಟ್ ವತಿಯಿಂದ 16ನೇ ವರ್ಷದ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ನಡೆಯಲಿದೆ. ಶ್ರೀ ಕಾಳಿಕಾಂಬಾ ಎಜುಕೇಶನ್ ಟ್ರಸ್ಟ್ ರಿ., ಉಪ್ರಳ್ಳಿ ಇದರ ಅಧ್ಯಕ್ಷರಾದ ಯು.ಕೆ.ಎಸ್ ಸೀತಾರಾಮ ಆಚಾರ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ನವಿ ಮುಂಬೈ ಪನ್ವೆಲ್‌ನ ರೇಖಾ ನರಸಿಂಹ ಆಚಾರ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶ್ರೀ ಕಾಳಿಕಾಂಬಾ ದೇವಸ್ಥಾನ ಉಪ್ರಳ್ಳಿ ಆಡಳಿತ ಮೊಕ್ತೇಸರರಾದ ಚಂದ್ರಯ್ಯ ಆಚಾರ್ಯ ಕಳಿ ಶುಭಾಶಂಸನೆಗೈಯಲಿದ್ದಾರೆ. ಅತಿಥಿಗಳಾಗಿ ಬೆಂಗಳೂರು ಹೋಟೆಲ್ ಅಕ್ಷಯ ಔರ ಇದರ ನಿರ್ದೇಶಕ ಸಾವನ್ ವಿಶ್ವನಾಥ ರಾವ್, ಸೈಬರಕಟ್ಟೆ ಶ್ರೀರಂಗ ಕನ್ಸಟ್ರಕ್ಷನ್ ನ ರಾಘವೇಂದ್ರ ಆಚಾರ್ಯ, ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯಕ್ ಭಾಗವಹಿಸಲಿದ್ದಾರೆ.

ಈ ಎಲ್ಲಾ ಕಾರ್ಯಕ್ರಮಗಳಿಗೆ ಭಕ್ತಾಭಿಮಾನಿಗಳು, ಸಮುದಾಯ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಆಡಳಿತ ಮೊಕ್ತೇಸರ ಚಂದ್ರಯ್ಯ ಆಚಾರ್ಯ ಕಳಿ, ೨ನೇ ಮೊಕ್ತೇಸರ ಪ್ರಭಾಕರ ಆಚಾರ್ಯ ಚಿತ್ತೂರು, ೩ನೇ ಮೊಕ್ತೇಸರ ಶ್ರೀಧರ ಆಚಾರ್ಯ ಆಲೂರು, ಪ್ರಧಾನ ಕಾರ್ಯದರ್ಶಿ ಪ್ರಭಾಕರ ಆಚಾರ್ಯ ಕೊಡ್ಲಾಡಿ, ಜೊತೆ ಕಾರ್ಯದರ್ಶಿ ಕರುಣಾಕರ ಆಚಾರ್ಯ ಮರವಂತೆ, ಸ್ವರ್ಣ ಮುಖವಾಡ ಸಮಿತಿ ಕಾರ್ಯದರ್ಶಿ ಉದಯ ಆಚಾರ್ಯ ಕಟ್ ಬೇಲ್ತೂರು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಅಶೋಕ ವಿ.ಆಚಾರ್ಯ ನಾವುಂದ, ಸೇವಾ ಸಮಿತಿ ಅಧ್ಯಕ್ಷ ದಿನೇಶ ಆಚಾರ್ಯ ಮರವಂತೆ, ಶ್ರೀಕಾಳಿಕಾಂಬಾ ಮಹಿಳಾ ಸಮಿತಿ ಅಧ್ಯಕ್ಷೆ ಶ್ರೀಮತಿ ಶೈಲಾ ರಾಮಕೃಷ್ಣ ಆಚಾರ್ಯ ಅಂಬಾಗಿಲು, ಶ್ರೀ ಕಾಳಿಕಾಂಬಾ ಎಜುಕೇಶನ್ ಟ್ರಸ್ಟ್ ಅಧ್ಯಕ್ಷೆ ಯು.ಕೆ ಎಸ್.ಸೀತಾರಾಮ ಆಚಾರ್ಯ, ಶ್ರೀಕಾಳಿಕಾಂಬಾ ಆರೋಗ್ಯ ನಿಧಿ ಅಧ್ಯಕ್ಷೆ ದಿವಾಕರ ಆಚಾರ್ಯ ಮಾರಣಕಟ್ಟೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!