Wednesday, October 30, 2024

ʼಕಾಂಗ್ರೆಸ್‌ ಸುಪ್ರೀಂʼ ಸೋನಿಯಾ ಗಾಂಧಿ ರಾಜಸ್ಥಾನದಿಂದ ಮೇಲ್ಮನೆಗೆ ಅವಿರೋಧ ಆಯ್ಕೆ

ಜನಪ್ರತಿನಿಧಿ (ನವ ದೆಹಲಿ) : ಕಾಂಗ್ರೆಸ್ ನಾಯಕಿ, ʼಕಾಂಗ್ರೆಸ್‌ ಸುಪ್ರೀಂʼ ಸೋನಿಯಾ ಗಾಂಧಿ ಇಂದು(ಮಂಗಳವಾರ) ರಾಜಸ್ಥಾನದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದರುವ ವಿಧಾನಸಭೆ ಕಾರ್ಯದರ್ಶಿ ಮಹಾವೀರ್ ಪ್ರಸಾದ್ ಶರ್ಮಾ,  ಕಾಂಗ್ರೆಸ್ ಅಭ್ಯರ್ಥಿ ಸೋನಿಯಾ ಗಾಂಧಿ ಸೇರಿದಂತೆ ಬಿಜೆಪಿಯ ಚುನ್ನಿಲಾಲ್ ಗರಾಸಿಯಾ ಹಾಗೂ ಮದನ್ ರಾಥೋಡ್ ಕೂಡ ರಾಜಸ್ಥಾನದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಲೋಕಸಭೆಯಲ್ಲಿ ಆರು ಅವಧಿಗೆ ಸೇವೆ ಸಲ್ಲಿಸಿರುವ ʼಕಾಂಗ್ರೆಸ್‌ ಸುಪ್ರೀಂʼ ಸೋನಿಯಾ ಗಾಂಧಿ ಇದೇ ಮೊದಲ ಬಾರಿಗೆ ಸಂಸತ್ತಿನ ಮೇಲ್ಮನೆ (ರಾಜ್ಯ ಸಭೆಗೆ) ಆಯ್ಕೆಯಾಗಿದ್ದಾರೆ.

ಇಂದು(ಮಂಗಳವಾರ) ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿತ್ತು. ಬೇರೆ ಯಾವುದೇ ಅಭ್ಯರ್ಥಿಗಳು ಸ್ಪರ್ಧಿಸದ ಕಾರಣ ಮೂವರು ನಾಯಕರು ಅವಿರೋಧವಾಗಿ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇನ್ನು, ರಾಜಸ್ಥಾನದಿಂದ ಆಯ್ಕೆಯಾಗಿರುವ ಮನಮೋಹನ್ ಸಿಂಗ್ ಸೇರಿದಂತೆ 15 ರಾಜ್ಯಗಳ ಒಟ್ಟು 56 ರಾಜ್ಯಸಭಾ ಸದಸ್ಯರು ಏಪ್ರಿಲ್‌ನಲ್ಲಿ ನಿವೃತ್ತರಾಗಲಿದ್ದಾರೆ.

ಇನ್ನು, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಆಗಸ್ಟ್ 1964 ರಿಂದ ಫೆಬ್ರವರಿ 1967 ರವರೆಗೆ ರಾಜ್ಯಸಭೆ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಈಗ ಅವರ ಸೊಸೆ ಸೋನಿಯಾ ಗಾಂಧಿ ಅವರು ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ಈ ಮೂಲಕ ರಾಜ್ಯಸಭೆಗೆ ಪ್ರವೇಶಿಸಿದ ಗಾಂಧಿ ಕುಟುಂಬದ ಎರಡನೇ ಸದಸ್ಯೆಯಾಗಿದ್ದಾರೆ ಎನ್ನುವುದು ಇಲ್ಲಿ ಉಲ್ಲೇಖಾರ್ಹ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!