spot_img
Wednesday, January 22, 2025
spot_img

‘ಬಳ್ಕೂರು ಯಕ್ಷ ಕುಸುಮ’ ಪುರಸ್ಕಾರ ಪ್ರದಾನ


ಮಂಗಳೂರು: ಯಕ್ಷರಂಗವು ನನ್ನ ಬದುಕಿಗೆ ಅಭಿಮಾನಗಳ ಪ್ರೀತಿ ಮತ್ತು ಹೊಸತನದ ಸ್ಪೂರ್ತಿಯನ್ನು ನೀಡಿದೆ‌ ಅದು ಮರೆಯಲಾದ‌ ಅವಿಸ್ಮರಣೀಕ್ಷಣಗಳು ಎಂದು ರಾಷ್ಟ್ರ ಪ್ರಶಸ್ತಿ ವಿಜೇತ ಯಕ್ಷಗಾನ ಕಲಾವಿದ 96 ವಯಸ್ಸಿನ ಸೂರಿಕುಮೇರು ಕೆ ಗೋವಿಂದ ಭಟ್ ಹೇಳಿದರು.

ಅವರು ಬಳ್ಕೂರು ಯಕ್ಷ ಕುಸುಮ ಪ್ರತಿಷ್ಠಾನ ಮತ್ತು ರಂಗಸ್ಥಳ ಮಂಗಳೂರು (ರಿ) ಇವರ‌ ಆಶ್ರಯದಲ್ಲಿ ಶ್ರೀಕ್ಷೇತ್ರ ಕುದ್ರೋಳಿ ಭಗವತೀ ದೇವಸ್ಥಾನದಲ್ಲಿ ನಡೆದ ಯಕ್ಷಗಾನ ಕಾರ್ಯಕ್ರಮದಲ್ಲಿ ‘ಬಳ್ಕೂರು ಯಕ್ಷ ಕುಸುಮ’ ಪುರಸ್ಕಾರವನ್ನು ಸ್ವೀಕರಿಸಿ ಮಾತನಾಡಿದರು.

ಇದೇ ಸಂದಂರ್ಭದಲ್ಲಿ ’ಯಕ್ಷ ಕುಸುಮ ಯುವ ಪುರಸ್ಕಾರ’ವನ್ನು ಯುವ ಕಲಾವಿದ ಸಾತ್ವಿಕ್ ನೆಲ್ಲಿತೀರ್ಥ‌ ಇವರಿಗೆ ನೀಡಿ ಗೌರವಿಸಲಾಯಿತು.

ವೇದಿಕೆಯಲ್ಲಿ ಮಂಗಳೂರಿನ ಹಿರಿಯ ಲೆಕ್ಕ ಪರಿಶೋಧಕರಾದ ಎಸ್‌ಎಸ್ ನಾಯಕ್, ಮಂಗಳೂರು ರಂಗಸ್ಥಳ ಮಂಗಳೂರು (ರಿ) ಸಂಸ್ಥೆಯ ಎಸ್‌ಎಲ್ ನಾಯಕ್ ಮತ್ತು ದಿನೇಶ್ ಪೈ, ಎಕ್ಸ್‌ಪರ್ಟ್ ಶಿಕ್ಷಣ ಸಂಸ್ಥೆಯ‌ ಅಧ್ಯಕ್ಷರಾದ ನರೇಂದ್ರ‌ ಎಲ್ ನಾಯಕ್, ಶ್ರೀ ಕ್ಷೇತ್ರ ಹಟ್ಟಿಯಂಗಡಿ ಮೇಳ ಯಜಮಾನರಾದ ರಂಜಿತ್‌ಕುಮಾರ್ ವಕ್ವಾಡಿ, ಶ್ರೀಪತಿ ಆಚಾರ್ಯ, ಯಕ್ಷ ಕುಸುಮ ಪ್ರತಿಷ್ಠಾನ ಅಧಕ್ಷರಾದ ಕರುಣಾಕರ ಬಳ್ಕೂರು, ಅಥರ್ವ ಕೆ.ಬಳ್ಕೂರು ಉಪಸ್ಥಿತರಿದ್ಧರು. ಬಳಿಕ ಶ್ರೀಕ್ಷೇತ್ರ ಹಟ್ಟಿಯಂಗಡಿ ಮೇಳ, ಇವರಿಂದ ಕಾಲಮಿತಿ ಯಕ್ಷಗಾನ ಪ್ರದರ್ಶನವಾಗಿ ’ಚಂದ್ರಹಾಸ’ ಮತ್ತು’ಶ್ರೀನಿವಾಸ ಕಲ್ಯಾಣ’ ಎಂಬ ಕಥಾನಕ ಪ್ರದರ್ಶನವು ನಡೆಯಿತು.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!