spot_img
Thursday, March 5, 2026
spot_img

ʼದೆಹಲಿ ಚಲೋʼಗೆ ಮತ್ತೆ ಮುಂದಾದ ರೈತರು : ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತೆ

ಜನಪ್ರತಿನಿಧಿ (ನವ ದೆಹಲಿ) :  ಪ್ರತಿಭಟನಾ ನಿರತ ರೈತರು ಕೇಂದ್ರದ ಪ್ರಸ್ತಾವವನ್ನು ತಿರಸ್ಕರಿಸಿ ಮತ್ತೆ ಇಂದಿನಿಂದ(ಬುಧವಾರ) ದೆಹಲಿ ಚಲೋ ಪ್ರತಿಭಟನೆಯನ್ನು ಮುಂದುವರಿಸಲು ತಯಾರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಬಿಗಿ ಭದ್ರತೆ ಮಾಡಲಾಗಿದೆ. ಟಿಕ್ರಿ, ಸಿಂಘು ಹಾಗೂ ಗಾಜಿಪುರ ಗಡಿಗಳಲ್ಲಿ ಪೊಲೀಸರು ಹೆಚ್ಚಿನ ಭದ್ರತಾ ಸಿಬ್ಬಂದಿಗಳನ್ನು ನಿಯೋಜನೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ರಾಷ್ಟ್ರೀಯ ಸುದ್ದಿ ಸಂಸ್ಥೆಗಳಿಗೆ ಮಾಹಿತಿ ನೀಡಿದ ಅಧಿಕಾರಿಯೊಬ್ಬರು, ಕಾನೂನು ಹಾಗೂ ಸುವ್ಯವಸ್ಥೆಯನ್ನು ಕಾಪಾಡಲು ದೆಹಲಿಯ ಕೇಂದ್ರ ಭಾಗಕ್ಕೆ ಹೋಗುವ ವಿವಿಧ ರಸ್ತೆಗಳಲ್ಲಿ ವಾಹನಗಳನ್ನು ತಪಾಸಣೆ ಮಾಡುವುದರಿಂದಾಗಿ ರಸ್ತೆ ಸಂಚಾರದಲ್ಲಿ ವ್ಯತ್ಯಾಸ ಆಗಬಹುದಾದ ಸಾಧ್ಯತೆಗಳಿವೆ. ಪ್ರಯಾಣಿಕರು ಸಂಚಾರ ದಟ್ಟಣೆಯನ್ನು ಎದುರಿಸಬೇಕಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಒಬ್ಬ ಪ್ರತಿಭಟನಾಕಾರ ಅಥವಾ ಒಂದು ವಾಹನವೂ ದೆಹಲಿಗೆ ಪ್ರವೇಶಿಸದಂತೆ ಭದ್ರತಾ ಸಿಬ್ಬಂದಿಗೆ ನಿರ್ದೇಶನ ನೀಡಲಾಗಿದೆ. ಈಗಾಗಲೇ ಮೂವತ್ತು ಸಾವಿರ ಅಶ್ರುವಾಯು ಶೆಲ್‌ಗಳನ್ನು ಈಗಾಗಲೆ ರಾಜಧಾನಿ ದೆಹಲಿಯ ಪೊಲೀಸರು ಸಂಗ್ರಹಿಸಿದ್ದಾರೆ ಎಂದು ಅವರು ಭದ್ರತಾ ವ್ಯವಸ್ಥೆಯ ಬಗ್ಗೆ ಮಾಹಿತಿ ನೀಡಿದ್ದಾರೆ.

ಕನಿಷ್ಠ ಬೆಂಬಲ ಬೆಲೆಗೆ ಒತ್ತಾಯಿಸಿ ಸಂಯುಕ್ತ ಕಿಸಾನ್‌ ಮೋರ್ಚಾ ಹಾಗೂ ಕಿಸಾನ್‌ ಮಜ್ದೂರ್‌ ಮೋರ್ಚಾ ದೆಹಲಿ ಚಲೋ ಪ್ರತಿಭಟನಾ ಮೆರವಣಿಗೆಯನ್ನು ಮುನ್ನಡೆಸುತ್ತಿವೆ. ಸಾವಿರಾರು ರೈತರು ರಾಜಧಾನಿ ದೆಹಲಿಯ ಗಡಿಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರ ನೀಡಿದ್ದ ದ್ವಿದಳ ಧಾನ್ಯಗಳು, ಮೆಕ್ಕೆಜೋಳ ಹಾಗೂ ಹತ್ತಿ ಬೆಳೆಗಳನ್ನು ಸರ್ಕಾರಿ ಸಂಸ್ಥೆಗಳ ಮೂಲಕ ಕನಿಷ್ಠ ಬೆಂಬಲ ಬೆಲೆಯಲ್ಲಿ ಐದು ವರ್ಷಗಳವರೆಗೆ ಖರೀದಿಸುವ ಪ್ರಸ್ತಾವವನ್ನೂ ತಿರಸ್ಕರಿಸಿದ ರೈತ ಮುಖಂಡರು ಇಂದು ಮತ್ತೆ ದೆಹಲಿ ಪ್ರವೇಶಿಸಲು ಮುಂದಾಗಿದ್ದಾರೆ.   

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!