spot_img
Thursday, March 5, 2026
spot_img

ಸೌಜನ್ಯ ಅತ್ಯಚಾರ ಹಾಗೂ ಕೊಲೆ ಪ್ರಕರಣವನ್ನು ಹೊಸದಾಗಿ ತನಿಖೆ ನಡೆಸುವಂತೆ ಕೋರಿ ಅರ್ಜಿ : ಸಿಬಿಐ, ರಾಜ್ಯ ಪೊಲೀಸ್‌ ಮುಖ್ಯಸ್ಥರಿಗೆ ಹೈಕೋರ್ಟ್‌ ನೋಟಿಸ್‌

ಜನಪ್ರತಿನಿಧಿ (ಬೆಂಗಳೂರು) : ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸದಾಗಿ ತನಿಖೆ ನಡೆಸುವಂತೆ ಸಿಬಿಐಗೆ ನಿರ್ದೇಶನ ನೀಡುವಂತೆ ಕೋರಿ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ಚಂದಪ್ಪ ಗೌಡ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ ರಾಜ್ಯ ಹೈಕೋರ್ಟ್, ರಾಜ್ಯ ಪೊಲೀಸ್ ಮುಖ್ಯಸ್ಥರು ಹಾಗೂ ಸಿಬಿಐಗೆ ನೋಟಿಸ್ ಜಾರಿ ಮಾಡಿದೆ.

ಅರ್ಜಿಯಲ್ಲಿ ಚಂದ್ರಪ್ಪ ಗೌಡ, 2012 ರಲ್ಲಿ ತನ್ನ ಅಪ್ರಾಪ್ತ ಮಗಳು ಸೌಜನ್ಯಳ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆಗೆ ಸಂಬಂಧಿಸಿದಂತೆ ಅಪರಾಧಿಗಳ ವಿರುದ್ಧ ಪ್ರಕರಣ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳುವಂತೆ ಹಾಗೂ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಅವರು ಕೋರಿದ್ದರು. ಈ ಅರ್ಜಿಯನ್ನು ವಿಚಾರಣೆ ಮಾಡಿ ರಾಜ್ಯ ಹೈಕೋರ್ಟ್‌ ನಿಬಿಐ ಹಾಗೂ ರಾಜ್ಯ ಪೊಲೀಸ್‌ ಮುಖ್ಯಸ್ಥರಿಗೆ ನೋಟಿಸ್‌ ಜಾರಿ ಮಾಡಿದೆ.

ಆರೋಪಿ ಸಂತೋಷ್ ರಾವ್ ಅವರನ್ನು ಖುಲಾಸೆಗೊಳಿಸುವ ಸಂದರ್ಭದಲ್ಲಿ ಪ್ರಕರಣದ ಅಪರಾಧಿಗಳನ್ನು ಪತ್ತೆ ಹಚ್ಚಲು ವಿಫಲರಾದ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೆಷನ್ಸ್ ನ್ಯಾಯಾಲಯವು ಶಿಫಾರಸು ಮಾಡಿದೆ. ಈ ಸಂಬಂಧ ಅಗತ್ಯ ಆದೇಶ ನೀಡಲು ಸಮಿತಿಗೆ ನಿರ್ದೇಶನ ನೀಡುವಂತೆ ಅರ್ಜಿದಾರರು ನ್ಯಾಯಾಲಯವನ್ನು ಕೋರಿದ್ದು, ಉಚ್ಛ ನ್ಯಾಯಾಲಯವು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಹಾಗೂ ಪೊಲೀಸ್ ಮಹಾನಿರ್ದೇಶಕರಿಗೆ (ಅಪರಾಧ ಮತ್ತು ತಾಂತ್ರಿಕ ಸೇವೆಗಳು), ಖುಲಾಸೆ ಸಮಿತಿಯ ಮುಖ್ಯಸ್ಥರಿಗೆ ನೋಟಿಸ್ ಜಾರಿ ಮಾಡಿದೆ.

ನೋಟಿಸ್ ಜಾರಿ ಮಾಡುವಾಗ ನ್ಯಾಯಮೂರ್ತಿ ಕೆ. ನಟರಾಜನ್, ಸಾರಾಂಶದಲ್ಲಿ, ನ್ಯಾಯಮೂರ್ತಿ ಕೆ.ನಟರಾಜನ್ ಅವರು ಸೆಷನ್ಸ್ ನ್ಯಾಯಾಲಯವು ಆರೋಪಿಯನ್ನು ಖುಲಾಸೆಗೊಳಿಸಿರುವುದನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಮೇಲ್ಮನವಿಯ ಜೊತೆಯಲ್ಲಿಯೇ ತಮ್ಮ ಪ್ರಕರಣವನ್ನೂ ಆಲಿಸಬೇಕೆಂಬ ಅರ್ಜಿದಾರರ ಕೋರಿಕೆಯನ್ನು ಪುರಸ್ಕರಿಸಬೇಕೇ ಎಂಬುದನ್ನು ತೀರ್ಮಾನಿಸಲು ಈ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿಗಳಿಗೆ ರವಾನಿಸಲು ಸೂಚಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!