spot_img
Thursday, March 5, 2026
spot_img

ಮೈತ್ರಿ ಮೂಲಕವೇ ಲೋಕಸಭೆ ಚುನಾವಣೆ ಎದುರಿಸುತ್ತೇವೆ, ಎಲ್ಲವೂ ಚೆನ್ನಾಗಿಯೇ ಇದೆ : ಅಖಿಲೇಶ್‌ ಯಾದವ್‌

ಜನಪ್ರತಿನಿಧಿ (ಲಕ್ನೋ) : ಕಾಂಗ್ರೆಸ್‌ ಪಕ್ಷದೊಂದಿಗೆ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಖಂಡಿತ ಇರಲಿದೆ ಮತ್ತು ಎಲ್ಲಾ ಗೊಂದಲಗಳನ್ನು ಶೀಘ್ರದಲ್ಲೇ ಅಂತಿಮ ಮಾಡಲಾಗುವುದು ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದಾರೆ.

ಕಾಂಗ್ರೆಸ್ ನ ರಾಜಕೀಯ ಬಲ ಇರುವ, ಗಾಂಧಿ ಕುಟುಂಬದ ಕ್ಷೇತ್ರಗಳು ಎಂದು ಪರಿಗಣಿಸಲ್ಪಟ್ಟಿರುವ ಅಮೇಥಿ ಮತ್ತು ರಾಯ್‌ಬರೇಲಿಯಲ್ಲಿ ರಾಹುಲ್ ಗಾಂಧಿಯವರ ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ಗೈರು ಹಾಜರಾಗಿರುವ ಬಗ್ಗೆ ವರದಿಗಾರರೊಬ್ಬರು ಕೇಳಿದ ಪ್ರಶ್ನೆಗೆ ಅಖಿಲೇಶ್ ಯಾದವ್ ಪ್ರತಿಕ್ರಿಯಿಸಿದ್ದು, “ಎಲ್ಲವೂ ಚೆನ್ನಾಗಿದೆ, ಚೆನ್ನಾಗಿಯೇ ಕೊನೆಗೊಳ್ಳುತ್ತದೆ, ಯಾವುದೇ ವಿವಾದವಿಲ್ಲ’ ಎಂದು ಪ್ರತಿಕ್ರಿಯಿಸಿದ್ದಾರೆ.

ಕಾಂಗ್ರೆಸ್ ʼಇಂಡಿಯಾʼ ಮೈತ್ರಿಕೂಟದಿಂದ ಒಂದೊಂದೇ ಪಕ್ಷಗಳು ತೊರೆದ ನಂತರ ಅಖಿಲೇಶ್ ಯಾದವ್ ಮೈತ್ರಿ ಮುರಿದುಕೊಳ್ಳುತ್ತಾರೆ ಎಂಬ ಊಹಾಪೋಹಗಳಿದ್ದವು. ಆದರೇ ಈ ಏಲ್ಲಾ ಊಹಾಪೋಹಗಳಿಗೆ ಅಖಿಲೇಶ ಯಾದವ್‌, ಮೈತ್ರಿಯೊಂದಿಗೆ ಚುನಾವಣೆಗೆ ಮುಂದುವರೆಯುತ್ತೇವೆ ಎಂದು ಹೇಳುವ ಮೂಲಕ ತೆರೆ ಎಳೆದಿದ್ದಾರೆ.

ರಾಜಕೀಯವಾಗಿ ನಿರ್ಣಾಯಕ ರಾಜ್ಯ ಆಗಿರುವ ಉತ್ತರಪ್ರದೇಶದಲ್ಲಿ ಬಿಜೆಪಿಯೊಂದಿಗೆ ಸೆಣಸುವುದು ಸವಾಲಿನ ಪ್ರಶ್ನೆಯಾದ ಕಾರಣ ಮೈತ್ರಿ ಮಹತ್ವ ಪಡೆದುಕೊಂಡಿದೆ ಕಾಂಗ್ರೆಸ್ 17-19 ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನಲಾಗಿದ್ದು ಎಸ್ ಪಿ ಯಾವ ಲೋಕಸಭಾ ಕ್ಷೇತ್ರಗಳನ್ನು ಬಿಟ್ಟುಕೊಡಲಿದೆ ಎಂದು ನಿರೀಕ್ಷಿಸಲಾಗುತ್ತಿದೆ.

ಇನ್ನು, ಸೀಟು ಹಂಚಿಕೆ ವಿಚಾರ ಕೊನೆಗೊಂಡ ಬಳಿಕವೇ ರಾಹುಲ್ ಗಾಂಧಿ ಅವರ ಯಾತ್ರೆಯಲ್ಲಿ ಭಾಗಿಯಾಗುವುದಾಗಿ ಅಖಿಲೇಶ್ ಈ ಹಿಂದೆ ಹೇಳಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!