Sunday, September 8, 2024

ಅಮಿತ್‌ ಶಾ – ಎಚ್‌ಡಿಕೆ ಭೇಟಿ : ಮೈತ್ರಿ ಸೀಟು ಹಂಚಿಕೆಯ ಬಗ್ಗೆ ಚರ್ಚೆ

ಜನಪ್ರತಿನಿಧಿ (ನವ ದೆಹಲಿ) : ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಇಂದು (ಗುರುವಾರ) ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿ ಮಾಡಿದ್ದಾರೆ.

ತಮ್ಮ ಭೇಟಿಯ ವೇಳೆ ರಾಜ್ಯದ ರಾಜಕೀಯ ವಿದ್ಯಮಾನಗಳ ಬಗ್ಗೆ ಹಾಗೂ ಮೈತ್ರಿಯ ಸೀಟು ಹಂಚಿಕೆಯ ಬಗ್ಗೆ ಮಾತುಕತೆ ನಡೆಸಿದ್ದಾರೆ ಎಂದು ರಾಜಕೀಯ ಮೂಲಗಳು ಮಾಹಿತಿ ನೀಡಿವೆ.

ಎರಡು ತಿಂಗಳಲ್ಲಿ ಬರಲಿರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ  ಜೆಡಿಎಸ್‌ ನಡುವಿನ ಸೀಟು ಹಂಚಿಕೆ ಬಗ್ಗೆಯೆ ಹೆಚ್ಚಾಗಿ ಮಾತನ್ನಾಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿದ್ದು. ಆದರೇ, ಎಚ್‌ಡಿಕೆ ಬೇಡಿಕೆಗೆ ಅಮಿತ್‌ ಶಾ ಒಪ್ಪಿದ್ದಾರೆಯೇ ಇಲ್ಲವೇ ಅಥವಾ ಅಮಿತ್‌ ಶಾ ಪ್ರತಿಕ್ರಿಯೆ ಹೇಗಿತ್ತು ಮತ್ತು ಏನು ಎನ್ನುವುದು ಇನ್ನಷ್ಟೇ ತಿಳಿದು ಬರಬೇಕಿದೆ.

ಭೇಟಿಯ ಸಂದರ್ಭದಲ್ಲಿ ಜೆಡಿಎಸ್‌ ಯುವ ನಾಯಕ ನಿಖಿಲ್‌ ಕುಮಾರಸ್ವಾಮಿ ಕೂಡ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!