spot_img
Thursday, March 5, 2026
spot_img

ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಏಳನೇ ಬಾರಿಗೆ ಸಮನ್ಸ್ ಜಾರಿ

ಜನಪ್ರತಿನಿಧಿ (ನವ ದೆಹಲಿ) : ರದ್ದುಗೊಂಡಿರುವ ಮದ್ಯ ನೀತಿ ಪ್ರಕರಣದಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯ ಇಂದು(ಗುರುವಾರ) ಏಳನೇ ಬಾರಿಗೆ ಸಮನ್ಸ್ ಜಾರಿ ಮಾಡಿದೆ ಆದೇಶಿಸಿದೆ.

ಸೋಮವಾರ(ಫೆಬ್ರವರಿ 26)ದಂದು ಇಡಿ ಮುಂದೆ ಹಾಜರಾಗುವಂತೆ ಕೇಜ್ರಿವಾಲ್‌ ಅವರಿಗೆ ತಿಳಿಸಲಾಗಿದೆ ಎಂದು ಮೂಲಗಳು ಮಾಹಿತಿ ನೀಡಿದೆ.

ದೆಹಲಿ ಅಬಕಾರಿ ನೀತಿ 2021-22 ಪ್ರಕರಣದಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ತನಿಖೆಯಲ್ಲಿ ಫೆಬ್ರವರಿ 14 ರಂದು ಜಾರಿ ನಿರ್ದೇಶನಾಲಯ ದೆಹಲಿ ಮುಖ್ಯಮಂತ್ರಿಗೆ ಆರನೇ ಸಮನ್ಸ್ ನೀಡುವ ಮೂಲಕ ಫೆಬ್ರವರಿ 19 ರಂದು ವಿಚಾರಣೆಗೆ ಹಾಜರಾಗುವಂತೆ ಕೋರಿತ್ತು.  ಆರು ಬಾರಿಯೂ ವಿಚಾರಣೆಗೆ ಕೇಜ್ರಿವಾಲ್ ಹಾಜಾಗಿರಲಿಲ್ಲ.

ದೆಹಲಿ ಅಬಕಾರಿ ನೀತಿ 2021-22 ಪ್ರಕರಣದಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ತನಿಖೆಯಲ್ಲಿ ಫೆಬ್ರವರಿ 14 ರಂದು ಜಾರಿ ನಿರ್ದೇಶನಾಲಯ ದೆಹಲಿ ಮುಖ್ಯಮಂತ್ರಿಗೆ ಆರನೇ ಸಮನ್ಸ್ ನೀಡುವ ಮೂಲಕ ಫೆಬ್ರವರಿ 19 ರಂದು ವಿಚಾರಣೆಗೆ ಹಾಜರಾಗುವಂತೆ ಕೋರಿತ್ತು. ಆದರೆ, ಆರು ಬಾರಿಯೂ ವಿಚಾರಣೆಗೆ ಕೇಜ್ರಿವಾಲ್ ಗೈರಾಗಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!