Wednesday, September 11, 2024

ತನಿಖಾ ಸಂಸ್ಥೆಗಳ ದಾಳಿ ನಂತರ 30 ಸಂಸ್ಥೆಗಳು ಬಿಜೆಪಿಗೆ 335 ಕೋಟಿ ರೂಪಾಯಿಯಷ್ಟು ದೇಣಿಗೆ ನೀಡಿವೆ : ಕಾಂಗ್ರೆಸ್‌ ಗಂಭೀರ ಆರೋಪ

ಜನಪ್ರತಿನಿಧಿ (ನವ ದೆಹಲಿ) : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸುಲಿಗೆ ಹಾಗೂ ಆರ್ಥಿಕ ಭಯೋತ್ಪಾದನೆಯ ಮೂಲಕ ಪ್ರಜಾಪ್ರಭುತ್ವವನ್ನು ನಾಶ ಮಾಡುತ್ತಿದೆ ಎಂದು ಇಂದು (ಗುರುವಾರ) ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ಸಿಬಿಐ, ಇಡಿ ಹಾಗೂ ಆದಾಯ ತೆರಿಗೆ ಇಲಾಖೆಯಂತಹ ತನಿಖಾ ಸಂಸ್ಥೆಗಳ ದಾಳಿಯ ಬಳಿಕ ಕನಿಷ್ಠ 30 ಸಂಸ್ಥೆಗಳು ಬಿಜೆಪಿಗೆ ಭಾರಿ ಮೊತ್ತದ ದೇಣಿಗೆ ನೀಡಿವೆ ಎಂದು ಗಂಭೀರವಾಗಿ ಆರೋಪ ಮಾಡಿದೆ.

30 ಸಂಸ್ಥೆಗಳು ತನಿಖಾ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಂಡ ಬಳಿಕ ಮೋದಿ ನೇತೃತ್ವದ ಬಿಜೆಪಿಗೆ ಸುಮಾರು 335 ಕೋಟಿ ರೂಪಾಯಿಯಷ್ಟು ದೇಣಿಗೆ ನೀಡಿವೆ ಎಂದು ಕಾಂಗ್ರೆಸ್ ಮಾಧ್ಯಮಗಳ ವರದಿಗಳನ್ನು ಉಲ್ಲೇಖಿಸಿ ಗಂಭಿರವಾಗಿ ಆರೋಪಿಸಿದೆ. 2014ರಿಂದ ದಾಳಿ ನಡೆದ ವರ್ಷದವರೆಗೆ 23 ಕಂಪನಿಗಳು ಬಿಜೆಪಿಗೆ ಯಾವುದೇ ದೇಣಿಗೆ ನೀಡಿರಲಿಲ್ಲ ಎಂದು ವರದಿ ಹೇಳಿದೆ.

ಈ ಬಗ್ಗೆ ಮಾತನಾಡಿದ ರಾಷ್ಟ್ರೀಯ ಕಾಂಗ್ರೆಸ್ನ ಅಧ್ಯಕ್ಷ  ಮಲ್ಲಿಕಾರ್ಜುನ ಖರ್ಗೆ, ಸುಲಿಗೆ ಹಾಗೂ ಆರ್ಥಿಕ ಭಯೋತ್ಪಾದನೆಯ ಮೂಲಕ ನಿರಂಕುಶಾಧಿಕಾರದ ಮೋದಿ ಸರ್ಕಾರ ಪ್ರಜಾಪ್ರಭುತ್ವವನ್ನು ಹಾಳು ಮಾಡುತ್ತಿದೆ. ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ), ಜಾರಿ ನಿರ್ದೇಶನಾಲಯ(ಇಡಿ) ಹಾಗೂ ಐಟಿ ಇಲಾಖೆ ದಾಳಿ ನಡೆಸಿದ ನಂತರ ಕೆಲವೇ ತಿಂಗಳುಗಳಲ್ಲಿ ಈ ಸಂಸ್ಥೆಗಳು ಬಿಜೆಪಿಗೆ ದೊಡ್ಡ ಮೊತ್ತದ ದೇಣಿಗೆಯನ್ನು ನೀಡಿರುವುದಾಗಿ ವರದಿಗಳು ತೋರಿಸುತ್ತಿವೆ ಎಂದು ಖರ್ಗೆ ಬಯಲುಗೊಳಿಸಿದ್ದಾರೆ.

“ಒಂದೆಡೆ ಮೋದಿ ಸರ್ಕಾರವು ಪ್ರಾಮಾಣಿಕವಾಗಿ ಕಾಂಗ್ರೆಸ್ ಪಕ್ಷಕ್ಕೆ ದೇಣಿಗೆ ನೀಡಿದ ಜನರ ದುಡಿಮೆಯ ಹಣವನ್ನು ಕದಿಯಲು ಬಯಸುತ್ತಿದೆ, ಇನ್ನೊಂದೆಡೆ ಇಡಿ, ಸಿಬಿಐ, ಐ-ಟಿ ಇತ್ಯಾದಿಗಳ ಮೂಲಕ ಕಾರ್ಪೊರೇಟ್ ಸಂಸ್ಥೆಗಳಿಗೆ ಬೆದರಿಕೆ ಹಾಕಿ, ದೇಣಿಗೆ ಮೂಲಕ ತನ್ನ ಖಜಾನೆ ತುಂಬಿಸಿಕೊಳ್ಳುತ್ತಿದೆ ಎಂದು ಖರ್ಗೆ ಟೀಕಿಸಿದ್ದಾರೆ.

ಬಿಜೆಪಿಯ ಬೊಕ್ಕಸವನ್ನು ತುಂಬಿಸಲು ದಾನಿಗಳನ್ನು ಬ್ಲ್ಯಾಕ್‌ಮೇಲ್ ಮಾಡುವುದು ನಮ್ಮ ಪ್ರಜಾಪ್ರಭುತ್ವದ ಕರಾಳ ಘಟ್ಟ! ಇದರ ವಿರುದ್ಧ ನ್ಯಾಯಾಲಯದಲ್ಲಿ ಹಾಗೂ ಜನ ನ್ಯಾಯಾಲಯದಲ್ಲಿ ಹೋರಾಡುತ್ತೇವೆ” ಎಂದು ಎಐಸಿಸಿ ಅಧ್ಯಕ್ಷರು ಪರೋಕ್ಷವಾಗಿ ಮೋದಿ ಅವರಿಗೆ ಎಚ್ಚರಿಕೆ ನೀಡಿದ್ದಾರೆ.

ಇನ್ನು, ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್ ರಮೇಶ್, ನರೇಂದ್ರ ಮೋದಿ ಸರ್ಕಾರ, ಆದಾಯ ತೆರಿಗೆ ಇಲಾಖೆ ಹಾಗೂ ಇತರ ಏಜೆನ್ಸಿಗಳ ಮೂಲಕ 30 ಕಂಪನಿಗಳ ಮೇಲೆ ದಾಳಿ ಮಾಡುವ ಮೂಲಕ ಬಿಜೆಪಿಗೆ 335 ಕೋಟಿ ರೂ. ದೇಣಿಗೆ ನೀಡುವಂತೆ ಒತ್ತಾಯಿಸಿದೆ ಎಂದು ಆರೋಪಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!