Sunday, September 8, 2024

ಅಮಾಸೆಬೈಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯ

ಕುಂದಾಪುರ: ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಉಡುಪಿ ಜಿಲ್ಲೆ ಹಾಗೂ ನವಜೀವನ ಸಮಿತಿ ಅಮಾಸೆಬೈಲು, ಹಾಲಾಡಿ ವಲಯ, ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಪ್ರಗತಿಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಅಮಾಸೆಬೈಲು ವಲಯ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಮಾಸೆಬೈಲು ವಿದ್ಯಾರ್ಥಿಗಳ ಪಾಲಕರು ಸಹಭಾಗಿತ್ವದೊಂದಿಗೆ, ಅಮಾಸೆಬೈಲು ವ್ಯವಸಾಯ ಸೇವಾ ಸಂಘ, ಅಮಾಸೆಬೈಲು ಚಾರಿಟೇಬಲ್ ಟ್ರಸ್ಟ್, ಅಮಾಸೆಬೈಲು ಗ್ರಾಮ ಪಂಚಾಯತ್ ಹಾಗೂ ಶ್ರೀ ಶಾರದೋತ್ಸವ ಸಮಿತಿ ಅಮಾಸೆಬೈಲು ಇವರ ಆರ್ಥಿಕ ಸಹಕಾರ ನೀಡುವುದರೊಂದಿಗೆ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಮಾಸೆಬೈಲುನಲ್ಲಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತವಾಗಿ ಶ್ರಮದಾನ ಹಾಗೂ ಯಂತ್ರದ ಮೂಲಕ ಸ್ವಚ್ಛತಾ ಕಾರ್ಯ ನಡೆಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ರಟ್ಟಾಡಿ ಮಲ್ಲಿಕಾ ಕುಲಾಲ ವಹಿಸಿದ್ದರು.

ಉಡುಪಿ ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ನೇತೃತ್ವದಲ್ಲಿ ಹಾಗೂ ಇತರ ಸಂಘಗಳ ಸಹಕಾರದೊಂದಿಗೆ ೧ನೇ ಕಾರ್ಯಕ್ರಮವಾಗಿ ಸರಕಾರಿ ಪ್ರೌಢಶಾಲೆ ಅಮಾಸೆಬೈಲುವಿನಲ್ಲಿ ಈ ಹಿಂದೆ ನಡೆದಿದ್ದು, ೨ನೇ ಕಾರ್ಯಕ್ರಮವಾಗಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಮಾಸೆಬೈಲುವಿನಲ್ಲಿ ನಡೆಯಿತು. ಮುಂದಿನ ದಿನಗಳಲ್ಲಿ ಜನಹಿತವಾಗುವ, ಎಲ್ಲರಿಗೂ ಅನುಕೂಲವಾಗುವ ಕೆಲಸಗಳನ್ನು ಸರಕಾರಿ ಶಾಲೆಗಳಲ್ಲಿ, ದೇವಸ್ಥಾನಗಳಲ್ಲಿ ಮತ್ತು ಸಾರ್ವಜನಿಕ ಸ್ಥಳಗಳನ್ನು ಗುರುತಿಸಿ ಹೆಚ್ಚಿನ ಕಾರ್ಯ ಮಾಡಲಾಗುತ್ತದೆ. ಎಂದು ಉಡುಪಿ ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಅಧ್ಯಕ್ಷ ರಟ್ಟಾಡಿ ನವೀನಚಂದ್ರ ಶೆಟ್ಟಿ ಪ್ರಾಸ್ತಾವಿಕ ಮಾತುಗಳಲ್ಲಿ ತಿಳಿಸಿದರು. ಹಾಗೂ ಮದ್ಯವರ್ಜನ ಶಿಬಿರಗಳು, ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯಸಂಕಲ್ಪ, ವಿಪತ್ತು ಕಾರ್ಯ ತಂಡಗಳ ಕಾರ್ಯದ ಬಗ್ಗೆ ಅಂಕಿ‌ಅಂಶದೊಂದಿಗೆ ವಿವರಿಸಿದರು. ಹಾಗೂ ಸಹಕರಿಸಿದವರಿಗೆ ಅಭಿನಂದನೆ ಸಲ್ಲಿಸಿದರು.

ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಜನ್ಮ ದಿನಾಚರಣೆಯನ್ನು ಬಹಳ ವಿಶಿಷ್ಟವಾಗಿ ಆಚರಿಸುತ್ತಿರುವುದು ಬಹಳ ಸಂತೋಷದ ವಿಚಾರ ಎಂದು ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿದ ಹಳೆ ವಿದ್ಯಾರ್ಥಿ ಸಂಘದ ಗೌರವ ಅಧ್ಯಕ್ಷ ಶಂಕರ ಐತಾಳ ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಯೋಜನಾಧಿಕಾರಿ ನಾರಾಯಣ ಪಾಲನ್, ಜಿಲ್ಲಾ ಜನಜಾಗೃತಿ ಸದಸ್ಯ ರಟ್ಟಾಡಿ ಸತ್ಯನಾರಾಯಣ ರಾವ್, ಗ್ರಾಮ ಪಂಚಾಯತ್ ಸದಸ್ಯ ಕೃಷ್ಣ ಪೂಜಾರಿ, ಪುಷ್ಪಲತಾ ಕಾಮತ್, ಎಸ್.ಡಿ.ಎಂ.ಸಿ ಅಧ್ಯಕ್ಷ ಲಕ್ಷ್ಮಣ ಪೂಜಾರಿ, ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಭೋಜರಾಜ ಪೂಜಾರಿ, ಪ್ರಗತಿಪರ ಕೃಷಿಕ ಸತೀಶ ಹೆಗ್ಡೆ. ಶಾಲಾ ಪ್ರಭಾರ ಮುಖ್ಯ ಶಿಕ್ಷಕ ರತ್ನಾಕರ ಎಚ್, ಶೌರ್ಯ ತಂಡದ ಜ್ಯೋತಿ ಕುಲಾಲ್ತಿ ಮಂಡಾಡಿ ಹಾಗೂ ನಾಗೇಂದ್ರ ಹಟ್ಟಿಮನೆ ಉಪಸ್ಥಿತರಿದ್ದರು.

ಮೇಲ್ವಿಚಾರಕ ಪ್ರವೀಣ ಕುಮಾರ ಸ್ವಾಗತಿಸಿ ನಿರೂಪಿಸಿದರು. ಸೇವಾ ಪ್ರತಿನಿಧಿ ಗೀತಾ ವಂದಿಸಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!