spot_img
Wednesday, March 4, 2026
spot_img

ಫೆ.24: ನೆಂಪು ಶ್ರೀ ವಿನಾಯಕ ಯುವಕ ಸಂಘದ ರಜತ ಮಹೋತ್ಸವದ ಪ್ರಯುಕ್ತ “ನೆಂಪು ಉತ್ಸವ”

ಕುಂದಾಪುರ: ನೆಂಪು ಶ್ರೀ ವಿನಾಯಕ ಯುವಕ ಸಂಘ ನೆಂಪು ಪ್ರಾರಂಭಗೊಂಡು 25 ವರ್ಷಗಳು ಪೂರ್ಣಗೊಂಡಿವೆ. ಈ 25ನೇ ವರ್ಷದ ರಜತ ಮಹೋತ್ಸವದ ಸವಿ ನೆನಪಿಗಾಗಿ ನೆಂಪು ಉತ್ಸವ ಎನ್ನುವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಫೆಬ್ರವರಿ 24-2024 ಶನಿವಾರದಂದು ಕರ್ನಾಟಕ ಪಬ್ಲಿಕ್ ಸ್ಕೂಲ್ ನೆಂಪುವಿನಲ್ಲಿ ಅದ್ದೂರಿಯಾಗಿ ನೆಂಪು ಉತ್ಸವ ನೆರವೇರಲಿದೆ. ಈ ಕಾರ್ಯಕ್ರಮವು ಸಹಾಯ ಹಸ್ತ, ರಜತ ಪುರಸ್ಕಾರ, ಸಾಧಕರಿಗೆ ಸನ್ಮಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನೊಳಗೊಂಡಿದ್ದು ಸಹಾಯ ಹಸ್ತ ಎಂಬ ಸೇವಾ ಕಾರ್ಯದ ಮೂಲಕ ಹತ್ತು ಅಶಕ್ತ ಕುಟುಂಬಕ್ಕೆ ಆರ್ಥಿಕ ನೆರವಾಗುವುದು ಹಾಗೂ ವಿದ್ಯಾರ್ಥಿ ವೇತನ ವಿತರಿಸುವುದು ಜೊತೆಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಮಾರಣಕಟ್ಟೆ ಶ್ರೀ ಕೃಷ್ಣಮೂರ್ತಿ ಮಂಜರಿಗೆ ರಜತ ಪುರಸ್ಕಾರ ಅರ್ಪಿಸಿ ಗೌರವಿಸುವುದು. ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದಂತಹ ಹುಟ್ಟೂರ ಹಾಗೂ ಗ್ರಾಮದ ಸಾಧಕರನ್ನು ಗೌರವಿಸಿ ಸನ್ಮಾನಿಸುವುದು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನೊಳಗೊಂಡ ಬಹುದೊಡ್ಡ ವೇದಿಕೆಯ ಮನೋರಂಜನೆ ಕಾರ್ಯಕ್ರಮ ಇದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!