spot_img
Wednesday, March 18, 2026
spot_img

ರಾಜಧಾನಿ ದೆಹಲಿ, ಗುಜರಾತ್, ಗೋವಾ, ಹರಿಯಾಣದಲ್ಲಿ ಲೋಕಸಭೆ ಸೀಟು ಹಂಚಿಕೆ ಘೋಷಿಸಿದ ಆಪ್‌, ಕಾಂಗ್ರೆಸ್‌ | ಪಂಜಾಬ್‌ನಲ್ಲಿ ಪ್ರತ್ಯೇಕವಾಗಿ ಸ್ಪರ್ಧೆ !

ಜನಪ್ರತಿನಿಧಿ (ನವ ದೆಹಲಿ) : ʼಕಾಂಗ್ರೆಸ್‌ʼ ಮೈತ್ರಿಕೂಟ ಭಾರಿ ದೊಡ್ಡ ಮಟ್ಟದ ಅನಿಶ್ಚಿತತೆಯಲ್ಲಿದೆ, ಅಂಗ ಪಕ್ಷಗಳು ಮೈತ್ರಿ ತೊರೆದು ಹೋಗುತ್ತಿವೆ ಎನ್ನುವ ಮಾತುಗಳ ನಡುವೆ ಮುಂಬರುವ ಲೋಕಸಭೆ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಪಾಲುದಾರರಾಗಿರುವ ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಕ್ಷ (ಎಎಪಿ) ಸೀಟು ಹಂಚಿಕೆ ಕುರಿತು ಘೋಷಿಸಿದ್ದು, ದೆಹಲಿಯಲ್ಲಿ ಎಎಪಿ 4 ಮತ್ತು ಕಾಂಗ್ರೆಸ್ 3 ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಎಂದು ಉಭಯ ಪಕ್ಷಗಳು ಇಂದು(ಶನಿವಾರ) ತಿಳಿಸಿವೆ.

ದೆಹಲಿಯಲ್ಲಿ ಏಳು ಲೋಕಸಭಾ ಕ್ಷೇತ್ರಗಳಿದ್ದು, 2019ರ ಚುನಾವಣೆಯಲ್ಲಿ ಎಲ್ಲಾ ಸ್ಥಾನಗಳಲ್ಲಿ ಬಿಜೆಪಿ ಗೆದ್ದಿತ್ತು ಎನ್ನುವುದು ಇಲ್ಲಿ ಉಲ್ಲೇಖಾರ್ಹ.

ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನಾಯಕ ಮುಕುಲ್ ವಾಸ್ನಿಕ್, ಎಎಪಿ ನವದೆಹಲಿ, ಪಶ್ಚಿಮ ದೆಹಲಿ, ದಕ್ಷಿಣ ದೆಹಲಿ ಹಾಗೂ ಪೂರ್ವ ದೆಹಲಿ ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದರೆ, ತಮ್ಮ ಪಕ್ಷ ಚಾಂದಿನಿ ಚೌಕ್, ಈಶಾನ್ಯ ದೆಹಲಿ ಹಾಗೂ ವಾಯುವ್ಯ ದೆಹಲಿ ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಎಂದು ಮಾಹಿತಿ ನೀಡಿದ್ದಾರೆ.

ಗುಜರಾತ್‌ನಲ್ಲಿ ಎಎಪಿಯು ಭರೂಚ್ ಹಾಗೂ ಭಾವನಗರದಿಂದ ಸ್ಪರ್ಧಿಸಲಿದ್ದು, ರಾಜ್ಯದಲ್ಲಿ ಉಳಿದ 24 ಸ್ಥಾನಗಳಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಹರಿಯಾಣದ 10 ಕ್ಷೇತ್ರಗಳ ಪೈಕಿ ಎಎಪಿ ಕುರುಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸಲಿದ್ದರೆ, ಉಳಿದೆಡೆ ಕಾಂಗ್ರೆಸ್ ಸ್ಪರ್ಧಿಸಲಿದೆ. ಗೋವಾದಲ್ಲಿ ಕಾಂಗ್ರೆಸ್ ಎರಡೂ ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಲಿದೆ’ ಎಂದು ಅವರು ತಿಳಿಸಿದ್ದಾರೆ.

ಚಂಡೀಗಢದ ಏಕೈಕ ಲೋಕಸಭಾ ಕ್ಷೇತ್ರದಲ್ಲೂ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನೇ ಕಣಕ್ಕಿಳಿಸಲಿದೆ ಎಂದು ವಾಸ್ನಿಕ್ ಹೇಳಿದ್ದಾರೆ.

ಪಂಜಾಬ್‌ನಲ್ಲಿ ಪ್ರತ್ಯೇಕವಾಗಿ ಆಪ್‌ ಹಾಗೂ ಕಾಂಗ್ರೆಸ್‌ ಕಣಕ್ಕೆ :

ಲೋಕಸಭೆ ಚುನಾವಣೆಯಲ್ಲಿ ಪಂಜಾಬ್‌ನಲ್ಲಿ ಆಪ್ ಹಾಗೂ ಕಾಂಗ್ರೆಸ್ ಪ್ರತ್ಯೇಕವಾಗಿ ಸ್ಪರ್ಧಿಸಲು ನಿರ್ಧರಿಸಿವೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಸಂದೀಪ್ ಪಾಠಕ್ ಹೇಳಿದ್ದಾರೆ.

ಎರಡು ಪಕ್ಷಗಳು ವಿಭಿನ್ನ ಚುನಾವಣಾ ಚಿಹ್ನೆಗಳಿಂದ ಚುನಾಔಣೆ ಎದುರಿಸುತ್ತಿದ್ದರೂ, ರಾಷ್ಟ್ರ ರಾಜಧಾನಿ ದೆಹಲಿಯ ಎಲ್ಲಾ ಏಳು ಲೋಕಸಭಾ ಕ್ಷೇತ್ರಗಳನ್ನು ಗೆಲ್ಲಲು ಆಪ್‌ ಹಾಗೂ ಕಾಂಗ್ರೆಸ್ ಒಗ್ಗಟ್ಟಾಗಿ ಕಾರ್ಯ ನಿರ್ವಹಿಸುತ್ತದೆ ಎಂದು ವಾಸ್ನಿಕ್ ಮಾಹಿತಿ ನೀಡಿದ್ದಾರೆ.

ಇನ್ನು, ಈಗಾಗಲೇ ಆಪ್ ಗುಜರಾತ್‌ನ ಭರೂಚ್ ಹಾಗೂ ಭಾವನಗರ ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ‘ಇಂದು ದೇಶಕ್ಕೆ ಬಲಿಷ್ಠ ಪರ್ಯಾಯದ ಅಗತ್ಯವಿದೆ. ದೇಶದ ಹಿತದೃಷ್ಟಿಯಿಂದ ಈ ಮೈತ್ರಿಯನ್ನು ರಚಿಸಲಾಗಿದೆ. ಈ ಚುನಾವಣೆಯನ್ನು ಇಂಡಿಯಾ ಮೈತ್ರಿಕೂಟದಿಂದಲೇ ಎದುರಿಸಲಾಗುವುದು. ಮೈತ್ರಿಯಿಂದಾಗಿ ಬಿಜೆಪಿಯ ಲೆಕ್ಕಾಚಾರಗಳು ತಪ್ಪಾಗುತ್ತವೆ’ ಎಂದು ಪಾಠಕ್ ಹೇಳಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!