Sunday, September 8, 2024

ಇನ್ಮುಂದೆ ಬೆಳ್ಳಂಬೆಳಗ್ಗೆ 5:00 ಗಂಟೆಗೆ ಮೆಟ್ರೋ ಸೇವೆ ಆರಂಭ ! ಸಂಪೂರ್ಣ ಮಾಹಿತಿ ಇಲ್ಲಿದೆ.

ಜನಪ್ರತಿನಿಧಿ (ರಾಜಧಾನಿ, ಬೆಂಗಳೂರು ) : ರಾಜಧಾನಿ ಮಂದಿಗೆ ನಮ್ಮ ಮೆಟ್ರೋ ಸಿಹಿ ಸುದ್ದಿ ನೀಡಿದೆ. ಬೆಳ್ಳಂಬೆಳಗ್ಗೆ ಕೆಲಸ, ಕಾರ್ಯ, ಮಾರ್ನಿಂಗ್‌ ಶಿಫ್ಟ್ ಆಫೀಸು ಅಂತೆಲ್ಲಾ ಪ್ರಯಾಣಿಸುತ್ತಿದ್ದ ರಾಜಧಾನಿ ಮಂದಿಗೆ ಆಗುತ್ತಿದ್ದ ಸಮಸ್ಯೆ ನಿವಾರಣೆಗಾಗಿ ನಮ್ಮ ಮೆಟ್ರೋ ಹೆಚ್ಚುವರಿ ಮೆಟ್ರೋ ರೈಲು ಸೇವೆ ಒದಗಿಸಲು ಮುಂದಾಗಿದೆ ಎಂದು ಬಿಎಂಆರ್‌ಸಿಎಲ್‌ ಮಾಹಿತಿ ನೀಡಿದೆ.

ಈ ಬಗ್ಗೆ ಪ್ರಕಟಣೆ ಮೂಲಕ ಮಾಹಿತಿ ನೀಡಿರುವ ಬಿಎಂಆರ್‌ಸಿಎಲ್‌, ಪ್ರೈಮ್‌ ಅವರ್‌ಗಳಲ್ಲಿ ಪ್ರತಿ ಮೂರು ನಿಮಿಷಕ್ಕೆ ಮೆಟ್ರೋ ಸೇವೆ ಒದಗಿಸಲಾಗುವುದು ಎಂದು ತಿಳಿಸಿದೆ.

ದಿನಾಂಕ 26/02/2024 ಸೋಮವಾರದಿಂದಲೇ ಬೆಳ್ಳಂಬೆಳಗ್ಗಿನ ಪ್ರೈಮ್‌ ಅವರ್‌ ನಲ್ಲಿ ನಾಡಪ್ರಭು ಕೆಂಪೇಗೌಡ ಮೆಜೆಸ್ಟಿಕ್‌ ಹಾಗೂ ಗರುಡಾಚಾರ್ಯ ಪಾಳ್ಯ ಮೆಟ್ರೋ ನಿಲ್ದಾಣಗಳ ನಡುವೆ ಹೆಚ್ಚುವರಿ ಮೆಟ್ರೋ ರೈಲು ಸೇವೆಯನ್ನು ಒದಗಿಸಲಾಗುತ್ತದೆ ಎಂದು ತಿಳಿಸಿದೆ. ಇದು ಟ್ರಿನಿಟಿ, ಇಂದಿರಾನಗರ, ಬೆನ್ನಿಗಾನಹಳ್ಳಿ ಹಾಗೂ ಕೆ. ಆರ್‌ ಪುರ ಮೆಟ್ರೋ ನಿಲ್ದಾಣಗಳ ಕಡೆಗೆ ಸಾಗುವ ಪ್ರಯಾಣಿಕರ ಅವಶ್ಯಕತೆಗಳನ್ನು ನೀಗಿಸಲು ಸಹಕಾರಿಯಾಗಿದೆ.

ಈ ಮಾರ್ಗದಲ್ಲಿ ಬೆಳಗ್ಗೆ 8:45 ರಿಂದ 10:20 ಗಂಟೆಯವರೆಗೆ, ಪ್ರತಿ ಮೂರು ನಿಮಿಷಕ್ಕೆ ಮೆಟ್ರೋ ರೈಲು ಸೇವೆಗಳು ವಾರದ ಎಲ್ಲಾ ದಿನಗಳಲ್ಲಿ (ಶನಿವಾರ, ಆದಿತ್ಯವಾರ ಹಾಗೂ ಸಾಮಾನ್ಯ ರಜಾದಿನಗಳನ್ನು ಹೊರತಾಗಿ) ಲಭ್ಯವಿರಲಿದೆ. ಮಾತ್ರವಲ್ಲದೇ, ಬೇರೆಡೆಯಿಂದ ಬೆಂಗಳೂರು ನಗರಕ್ಕೆ ಮುಂಜಾನೆ ಆಗಮಿಸುವ ಪ್ರಯಾಣಿಕರ ಅನೂಕೂಲಕ್ಕಾಗಿ ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್‌ ನಿಂದ ಎಲ್ಲಾ ದಿಕ್ಕುಗಳಿಗೆ ಮೊದಲ ರೈಲು ಭಾನುವಾರ ಹೊರತುಪಡಿಸಿ ವಾರದ ಎಲ್ಲಾ ದಿನಗಳಲ್ಲಿ ಬೆಳ್ಳಂಬೆಳಗ್ಗೆ 5:00 ಗಂಟೆಗೆ ಸಂಚಾರ ಆರಂಭ ಮಾಡಲಿವೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!