Wednesday, October 30, 2024

ಉಪ್ರಳ್ಳಿ ಶ್ರೀ ಕಾಳಿಕಾಂಬಾ ದೇವಸ್ಥಾನ: ಸ್ವರ್ಣ ಮುಖವಾಡ ಸಮರ್ಪಣೆ, ಎನ್.ವಿ.ಕೆ ಸಭಾಂಗಣ ಉದ್ಘಾಟನೆ

ಬೈಂದೂರು: ಕರಸ್ಥಳ ಜಗದ್ಗುರು ಶ್ರೀ ನಾಗಲಿಂಗಸ್ವಾಮಿ ಹಾಗೂ ಶ್ರೀ ವಿಶ್ವಕರ್ಮೇಶ್ವರ ಸಾನಿಧ್ಯವಿರುವ ಶ್ರೀ ಕಾಳಿಕಾಂಬಾ ದೇವಸ್ಥಾನ ಉಪ್ರಳ್ಳಿ ಇಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ, ಸ್ವರ್ಣ ಮುಖವಾಡ ಸಮರ್ಪಣೆ, ಎನ್.ವಿ.ಕೆ ಸಭಾಂಗಣ ಉದ್ಘಾಟನೆ ಕಾರ್ಯಕ್ರಮ ಫೆ.೨೪ರಂದು ಜರಗಿತು.

ಪರಮಪೂಜ್ಯ ಜಗದ್ಗುರು ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಜಿ, ಆನೆಗುಂದಿ ಮಹಾಸಂಸ್ಥಾನ, ಸರಸ್ವತೀ ಪೀಠ ಬೆಳಗುತ್ತಿಮಠ, ಕಟಪಾಡಿ ಪಡುಕುತ್ಯಾರು ಆಶೀರ್ವಚನ ನೀಡಿದರು.

ಸಂಸದರಾದ ಬಿ.ವೈ.ರಾಘವೇಂದ್ರ ಕಾರ್ಯಕ್ರಮ ಕಾರ್ಯಕ್ರ ಉದ್ಘಾಟಿಸಿ, ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು ಆಗಿವೆ. 2047ಕ್ಕೆ ನೂರು ವರ್ಷಗಳನ್ನು ಪೂರೈಸುತ್ತದೆ. ಸ್ವಾತಂತ್ರ್ಯ ಭಾರತಕ್ಕೆ ನೂರು ವರ್ಷ ಆಗುವಾಗ ದೇಶ ಸಂಪೂರ್ಣ ಅಭಿವೃದ್ಧಿಶೀಲ ರಾಷ್ಟ್ರವಾಗಿ ಹೊರಹೊಮ್ಮಬೇಕಾಗಿದೆ. ಹಾಗಾಗಿ ಅಭಿವೃದ್ಧಿ ಕಾರ್ಯಗಳು ವೇಗವಾಗಿ ನಡೆಯುತ್ತಿದೆ. ಬೈಂದೂರು ಕ್ಷೇತ್ರದಲ್ಲಿ ಕೂಡಾ ಅಭಿವೃದ್ಧಿ ಕಾರ್ಯಗಳು ಭರದಿಂದ ಸಾಗುತ್ತಿದೆ. ಪ್ರತಿಮನೆಗೂ ಕುಡಿಯುವ ನೀರು ಕೊಡುವ ನಿಟ್ಟಿನಲ್ಲಿ 800 ಕೋಟಿ ವೆಚ್ಚದಲ್ಲಿ ಕಾಮಗಾರಿ ಪ್ರಗತಿಯಲ್ಲಿದೆ. ಅದರ ಜೊತೆಯಲ್ಲಿ ಮಠ ಮಂದಿರಗಳ ಮೂಲಕ ಸಮಾಜವನ್ನು ಸಶಕ್ತಗೊಳಿಸುವ ಕಾರ್ಯಗಳು ಆಗುತ್ತಿವೆ. ಬೈಂದೂರು ಕ್ಷೇತ್ರದ ಅಭಿವೃದ್ಧಿಗೆ ಇನ್ನೂ ಹೆಚ್ಚಿನ ಒತ್ತು ನೀಡಲಾಗುವುದು ಎಂದರು.

ಶ್ರೀ ಕಾಳಿಕಾಂಬಾ ದೇವಸ್ಥಾನ ಉಪ್ರಳ್ಳಿ ಆಡಳಿತ ಮೊಕ್ತೇಸರರಾದ ಚಂದ್ರಯ್ಯ ಆಚಾರ್ಯ ಕಳಿ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಶಾಸಕ ಗುರುರಾಜ್ ಗಂಟಿಹೊಳೆ, ಬಸ್ರೂರು ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಬಿ.ಅಪ್ಪಣ್ಣ ಹೆಗ್ಡೆ, ಉದ್ಯಮಿ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರು, ಆನೆಗುಂದಿ ಮಹಾಸಂಸ್ಥಾನ, ಸರಸ್ವತೀ ಪೀಠ ಬೆಳಗುತ್ತಿಮಠ, ಕಟಪಾಡಿ ಪಡುಕುತ್ಯಾರು ಇದರ ಅಧ್ಯಕ್ಷರಾದ ಶ್ರೀಧರ ಆಚಾರ್ಯ, ಕೆ.ನವೀನ ಕುಮಾರ್ ಆಚಾರ್ಯ ಕಿರಿಮಂಜೇಶ್ವರ, ಉ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾದ ರಾಧಾಕೃಷ್ಣ ಭಟ್ ಉಪ್ರಳ್ಳಿ, ಹೇರೂರು ಗ್ರಾ.ಪಂ. ಉಪಾಧ್ಯಕ್ಷ ಶ್ರೀನಿವಾಸ ಪೂಜಾರಿ, ದೀಪಕ್ ಕುಮಾರ್ ಶೆಟ್ಟಿ, ಮಂಜುನಾಥ ಭಟ್ ಉಪ್ರಳ್ಳಿ, ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ರಥಶಿಲ್ಪಿ ರಾಜ್‌ಗೋಪಾಲ ಆಚಾರ್ಯ ಕೋಟೇಶ್ವರ ಅವರನ್ನು ಸನ್ಮಾನಿಸಲಾಯಿತು.

ಆಡಳಿತ ಮೊಕ್ತೇಸರ ಚಂದ್ರಯ್ಯ ಆಚಾರ್ಯ ಕಳಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಪ್ರಭಾಕರ ಆಚಾರ್ಯ ಕೊಡ್ಲಾಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮಹಿಳಾ ಮಂಡಳಿ ಸದಸ್ಯರು ಪ್ರಾರ್ಥನೆ ಮಾಡಿದರು. ೨ನೇ ಮೊಕ್ತೇಸರ ಪ್ರಭಾಕರ ಆಚಾರ್ಯ ಚಿತ್ತೂರು ಕಾರ್ಯಕ್ರಮ ನಿರ್ವಹಿಸಿದರು.

ಈ ಸಂದರ್ಭದಲ್ಲಿ 3ನೇ ಮೊಕ್ತೇಸರ ಶ್ರೀಧರ ಆಚಾರ್ಯ ಆಲೂರು, ಜೊತೆ ಕಾರ್ಯದರ್ಶಿ ಕರುಣಾಕರ ಆಚಾರ್ಯ ಮರವಂತೆ, ಸ್ವರ್ಣ ಮುಖವಾಡ ಸಮಿತಿ ಕಾರ್ಯದರ್ಶಿ ಉದಯ ಆಚಾರ್ಯ ಕಟ್ ಬೇಲ್ತೂರು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಅಶೋಕ ವಿ.ಆಚಾರ್ಯ ನಾವುಂದ, ಸೇವಾ ಸಮಿತಿ ಅಧ್ಯಕ್ಷ ದಿನೇಶ ಆಚಾರ್ಯ ಮರವಂತೆ, ಶ್ರೀಕಾಳಿಕಾಂಬಾ ಮಹಿಳಾ ಸಮಿತಿ ಅಧ್ಯಕ್ಷೆ ಶ್ರೀಮತಿ ಶೈಲಾ ರಾಮಕೃಷ್ಣ ಆಚಾರ್ಯ ಅಂಬಾಗಿಲು, ಶ್ರೀ ಕಾಳಿಕಾಂಬಾ ಎಜುಕೇಶನ್ ಟ್ರಸ್ಟ್ ಅಧ್ಯಕ್ಷೆ ಯು.ಕೆ ಎಸ್.ಸೀತಾರಾಮ ಆಚಾರ್ಯ, ಶ್ರೀಕಾಳಿಕಾಂಬಾ ಆರೋಗ್ಯ ನಿಧಿ ಅಧ್ಯಕ್ಷ ದಿವಾಕರ ಆಚಾರ್ಯ ಮಾರಣಕಟ್ಟೆ ಉಪಸ್ಥಿತರಿದ್ದರು.


ಸುಮಾರು 55 ಲಕ್ಷ ವೆಚ್ಚದಲ್ಲಿ ಸ್ವರ್ಣ ಮುಖವಾಡವನ್ನು ದೇವರಿಗೆ ಸಮರ್ಪಿಸಲಾಯಿತು. ಪೆ.23ರಿಂದ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಯಿತು.

ಫೆ.24ರಂದು ಶನಿವಾರ ಬೆಳಿಗ್ಗೆ 8 ಗಂಟೆಗೆ ಕಲಾಹೋಮ, ಪಂಚಾಮೃತ, ಪವಮಾನ ಕಲಶಾಭಿಷೇಕ, ರುದ್ರಾಭಿಷೇಕ, ಮಹಾಪೂಜೆ, ಮಧ್ಯಾಹ್ನ ಅನ್ನಸಂತರ್ಪಣೆ, ಮಧ್ಯಾಹ್ನ ಓಂಕಾರ್ ಕಲಾವಿದರು ಕನ್ನುಕೆರೆ ತೆಕ್ಕಟ್ಟೆ ಇವರಿಂದ ನಾಟಕ ಪ್ರದರ್ಶನಗೊಂಡಿತು. ಸಂಜೆ ರಂಗಪೂಜೆ, ದೇವರ ಪಲ್ಲಕ್ಕಿ ಉತ್ಸವ, ಪುಷ್ಕರಣಿ ಪ್ರವೇಶ, ಪೂಜೆ ದೈವಗಳ ತಂಬಿಲ ಸೇವೆ, ವಸಂತ ಮಂಟಪದಲ್ಲಿ ಪೂಜೆ, ಪ್ರಸಾದ ವಿತರಣೆ ನಡೆಯಿತು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!