Sunday, September 8, 2024

ಗೋಳಿಯಂಗಡಿಯಲ್ಲಿ ಬೆಳ್ವೆ ವ್ಯವಸಾಯ ಸೇವಾ ಸಹಕಾರಿ ಸಂಘದ ಪ್ರಾಯೋಜಕತ್ವದಲ್ಲಿ ಜನೌಷಧಿ ಕೇಂದ್ರ ಉದ್ಘಾಟನೆ

ಬೆಳ್ವೆ: ಕೃಷಿ ಚಟುವಟಿಕೆಗಳ ವ್ಯವಹಾರಕ್ಕೆ ಸಿಮೀತವಾಗಿದ್ದ ಸಹಕಾರಿ ಸಂಘಗಳು ಆರ್ಥೀಕವಾಗಿ ಸದೃಡತೆಯನ್ನು ಹೊಂದಿ ಗ್ರಾಹಕರಿಗೆ ವಿವಿಧೋದ್ಧೇಶಗಳಿಗೆ ಪೂರಕವಾಗಿ ಸ್ಫಂದಿಸುವ ಮೂಲಕ ಹೆಚ್ಚಿನ ಸಾಧನೆಯನ್ನು ಹೊಂದುತ್ತಿವೆ.ಈ ನಿಟ್ಟಿನಲ್ಲಿ ಬೆಳ್ವೆ ವ್ಯವಸಾಯ ಸೇವಾ ಸಹಕಾರಿ ಸಂಘದ ಉತ್ತಮ ಕಾರ್ಯ ಸಾಧನೆ,ಸಮಾಜಿಕ ಸೇವಾ ಕಾಳಜಿ ಪ್ರಶಂಸನೀಯ ಎಂದು ಕುಂದಾಪುರ ಶಾಸಕ ಎ.ಕಿರಣ್‌ಕುಮಾರ್ ಕೊಡ್ಗಿ ಹೇಳಿದರು.

ಅವರು ಬೆಳ್ವೆ ವ್ಯವಸಾಯ ಸೇವಾ ಸಹಕಾರಿ ಸಂಘದ ಪ್ರಾಯೋಜಕತ್ವದಲ್ಲಿ ಗೋಳಿಯಂಗಡಿಯಲ್ಲಿ ನೂತನವಾಗಿ ಆರಂಭಗೊಂಡ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರವನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದರು.

ಸಹಕಾರಿ ಸಂಘವು ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರವನ್ನು ಆರಂಭಿಸುವ ಮೂಲಕ ಜನರಿಗೆ ಉತ್ತಮ ಸೌಲಭ್ಯ ನೀಡಲಿದೆ. ಜನೌಷಧಿ ಕೇಂದ್ರದಲ್ಲಿ ಕಡಿಮೆ ಬೆಲೆಯಲ್ಲಿ ಉತ್ತಮ ಗುಣ ಮಟ್ಟದಲ್ಲಿ ಸಿಗುವ ಔಷಧಿಗಳಿಗೆ ವೈದ್ಯರುಗಳು ಜನರಿಗೆ ಸರಿಯಾದ ಮಾಹಿತಿಗಳನ್ನು ನೀಡಬೇಕು.ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ರೈತರ ಹಿತ ಕಾಪಾಡುವಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ರೈತರಿಗೆ ಶೂನ್ಯ ಬಡ್ಡಿಯಲ್ಲಿ ನೀಡುತ್ತಿದ್ದ ರೂ ೩ ಲಕ್ಷ ಸಾಲವನ್ನು ರೂ ೫ ಲಕ್ಷಕ್ಕೆ ನೀಡುವ ಬಗ್ಗೆ ಘೋಷಣೆಯಾದರೆ ಸಾಲದು ಅನುಷ್ಠಾನಗೊಳ್ಳಬೇಕು ಎಂದರು.

ಬೆಳ್ವೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್.ಜಯರಾಮ ಶೆಟ್ಟಿ ಸೂರ್‍ಗೋಳಿ ಅಧ್ಯಕ್ಷತೆ ವಹಿಸಿದರು.

ಬೆಳ್ವೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಾಧ, ಆವರ್ಸೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಲಕ್ಷ್ಮಣ ಪೂಜಾರಿ, ಬೆಳ್ವೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ,ರಾಜೇಶ್ವರಿ ಎ.ಜಿ, ಆವರ್ಸೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಪ್ರಜ್ಞಾ ಶರ್ಮಾ. ಕಟ್ಟಡ ಮಾಲಕ ವೈ.ಬಾಲಕೃಷ್ಣ ಭಟ್, ಸಂಘದ ನಿರ್ದೇಶಕರುಗಳು ಹಾಗೂ ಇನ್ನೀತರರು ಉಪಸ್ಥಿತರಿದ್ದರು.

ಬೆಳ್ವೆ ವ್ಯವಸಾಯ ಸೇವಾ ಸಹಕಾರಿ ಸಂಘದ ವತಿಯಿಂದ ಕುಂದಾಪುರ ಶಾಸಕ ಎ.ಕಿರಣ್‌ಕುಮಾರ್ ಕೊಡ್ಗಿಯವರನ್ನು ಸನ್ಮಾನಿಸಲಾಯಿತು. ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಕೀರ್ತಿಕುಮಾರ್ ಶೆಟ್ಟಿ ಸ್ವಾಗತಿಸಿದರು. ಐಶ್ವರ್ಯ ಜೋಗಿ ಗೋಳಿಯಂಗಡಿ ಪ್ರಾರ್ಥಿಸಿದರು. ಸುಬ್ರಹ್ಮಣ್ಯ ಪಡುಕೋಣೆ ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷ ಬಿ.ಹರೀಶ್ ಕಿಣಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!