spot_img
Monday, March 16, 2026
spot_img

ಸ.ಹಿ.ಪ್ರಾ.ಶಾಲೆ ನೂಜಾಡಿ-2 ಬಗ್ವಾಡಿಯಲ್ಲಿ ವಿಜ್ಞಾನ ಮತ್ತು ಕಲಾ ಮೇಳ

ಕುಂದಾಪುರ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೂಜಾಡಿ 2 ಬಗ್ವಾಡಿ ಇಲ್ಲಿ ವಿಜ್ಞಾನ ಮತ್ತು ಕಲಾ ಮೇಳ ಇತ್ತೀಚೆಗೆ ನಡೆಯಿತು.

ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಬಿ ರಾಜೀವ ಶೆಟ್ಟಿ ವಿಜ್ಞಾನ ಮತ್ತು ಕಲಾ ಮೇಳವನ್ನು ಉದ್ಘಾಟಿಸಿದರು. ಮಕ್ಕಳು ತಯಾರಿಸಿದ ನೂರಕ್ಕೂ ಹೆಚ್ಚು ವಿಜ್ಞಾನ ಮಾದರಿ ಮತ್ತು ಕಲಾ ಚಟುವಟಿಕೆಗಳನ್ನು ವೀಕ್ಷಿಸಿ ಗ್ರಾಮೀಣ ಭಾಗದ ಮಕ್ಕಳ ಪ್ರತಿಭೆ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದರು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿ‌ಎಂಸಿ ಅಧ್ಯಕ್ಷರಾದ ಮಂಜುನಾಥ್ ಪುತ್ರನ್ ವಹಿಸಿದ್ದರು. ಸಭೆಯಲ್ಲಿ ಉಪಾಧ್ಯಕ್ಷರಾದ ಭಾವನ ಭಟ್ ಪಂಚಾಯತ್ ಪ್ರತಿನಿಧಿಗಳಾದ ಅಶೋಕ್ ಪೂಜಾರಿ ಮತ್ತು ಶಾರದ ಎಸ್‌ಡಿ‌ಎಂಸಿ ಹಿರಿಯ ಸದಸ್ಯರಾದ ಗೋಪಾಲ್ ಪೂಜಾರಿ, ಪ್ರಕಾಶ್ ಆಚಾರ್ಯ ಎಸ್‌ಡಿ‌ಎಂಸಿ ಸದಸ್ಯರು ಪೋಷಕರು ಶಿಕ್ಷಕವೃಂದ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಮುಖ್ಯೋಪಾಧ್ಯಾಯನಿ ಶೈಲಜಾ ಶೆಟ್ಟಿ ಸ್ವಾಗತಿಸಿ, ಸತ್ಯವತಿ ವಂದಿಸಿದರು. ಶಿಕ್ಷಕವೃಂದ ಸಹಕರಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!