spot_img
Wednesday, January 22, 2025
spot_img

ರಾಜ್ಯಸಭಾ ಚುನಾವಣೆ ಆರಂಭ | ಗೆಲುವಿನ ವಿಶ್ವಾಸದಲ್ಲಿ ಬಿಜೆಪಿ !

ಜನಪ್ರತಿನಿಧಿ (ಬೆಂಗಳೂರು) : ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಇಂದು(ಮಂಗಳವಾರ) ಬೆಳಿಗ್ಗೆ 9 ಗಂಟೆಯಿಂದ ಮತದಾನ ಆರಂಭವಾಗಿದ್ದು, ಬಿಜೆಪಿ ಶಾಸಕ ಸುರೇಶ್​ ಕುಮಾರ್​​ ಅವರು ಮೊದಲ ಮತದಾನ ಮಾಡಿದ್ದಾರೆ.

ರಾಜ್ಯಸಭೆ ಚುನಾವಣೆಗಾಗಿನ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. ನಾಲ್ಕು ಸ್ಥಾನಗಳಿಗೆ ಐವರು ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ. ರಾಜ್ಯದಿಂದ ಕಾಂಗ್ರೆಸ್ ಅಜಯ್ ಮಕೇನ್, ಸಯ್ಯದ್ ನಸೀರ್ ಹುಸೇನ್ ಹಾಗೂ ಜಿ.ಸಿ.ಚಂದ್ರಶೇಖರ್ ರನ್ನು ಕಣಕ್ಕಿಳಿಸಿದೆ. ಇತ್ತ ಬಿಜೆಪಿ ನಾರಾಯಣಸಾ ಬಾಂಡಗೆಯನ್ನು ಕಣಕ್ಕಿಳಿಸಿದೆ. ಇನ್ನು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಅವರನ್ನು ಕಣಕ್ಕಿಳಿಸಿದೆ. ಐದನೇ ಅಭ್ಯರ್ಥಿ ಕಣಕ್ಕಿಳಿಸಿರುವುದರಿಂದ ರಾಜ್ಯಸಭೆ ಚುನಾವಣಾ ಅಖಾಡ ಕಳೆಗಟ್ಟುವಂತೆ ಮಾಡಿದೆ.

ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಬಿಜೆಪಿ

ಈ ಬಗ್ಗೆ ವಿಧಾನಸೌಧದಲ್ಲಿ ಮಾತನಾಡಿದ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಎನ್​ಡಿಎ ಅಭ್ಯರ್ಥಿ ಗೆಲ್ಲಿಸುವ ಸಂಬಂಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಎಲ್ಲ ಶಾಸಕರೊಂದಿಗೆ ಮಾತನಾಡಿದ್ದಾರೆ. ನಮಗೆ ಗೆಲ್ಲುವ ವಿಶ್ವಾಸ ವ್ಯಕ್ತ ಪಡಿಸಿದರು.

ಬಿಜೆಪಿ ಶಾಸಕ, ಚುನಾವಣಾ ಏಜೆಂಟ್ ಟಿ.ಸುನೀಲ್ ಕುಮಾರ್ ಪ-ರತಿಕ್ರಿಯಿಸಿ, ರಾಜ್ಯಸಭಾ ಚುನಾವಣೆಯಲ್ಲಿ ಅಧಿಕೃತ ಅಭ್ಯರ್ಥಿ ನಾರಾಯಣ ಭಾಂಡಗೆ ಅವರಿಗೆ ನಮ್ಮ ಶಾಸಕರು ಮತ ಚಲಾಯಿಸುತ್ತಾರೆ ಎಂದು ತಿಳಿಸಿದರು.

ಹೆಚ್ಚುವರಿ ಮತಗಳನ್ನು ಎನ್​ಡಿಎ ಅಭ್ಯರ್ಥಿಗೆ ವರ್ಗಾಯಿಸಲಾಗುತ್ತದೆ. ಬಿಜೆಪಿ ಎಲ್ಲ ಶಾಸಕರು ಮಧ್ಯಾಹ್ನ 12 ಗಂಟೆ ಒಳಗೆ ಪೂರ್ಣವಾಗಿ ಮತದಾನದಲ್ಲಿ ಪಾಲ್ಗೊಳ್ಳುತ್ತಾರೆ. ನಮಗೆ 45 ಮತಗಳು ಗೆಲ್ಲಲು ಬೇಕಾಗುತ್ತದೆ. ಬಿಜೆಪಿಯಿಂದ ಯಾವುದೇ ಅಡ್ಡ ಮತದಾನ ಆಗುವುದಿಲ್ಲ ಎಂದರು.

ಎನ್​ಡಿಎ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಮಾತನಾಡಿ, ದುಡ್ಡು ಕೊಟ್ಟು ಕೊಂಡುಕೊಳ್ಳುವ ಮತಗಳನ್ನು ಕೇಳಿಲ್ಲ. ವಿಶ್ವಾಸದ ಮತಗಳನ್ನು ಕೇಳಿದ್ದೇನೆ. ಆ ಪಕ್ಷ ಈ ಪಕ್ಷ ಎಂದು ಕೇಳಿಲ್ಲ. ಎಲ್ಲ ಪಕ್ಷದವರನ್ನು ಮತ ಕೇಳಿದ್ದೇನೆ. ವಿಶ್ವಾಸದ ಮತಗಳಲ್ಲಿ ನನಗೆ ನಂಬಿಕೆ ಇದೆ. ಕಾಂಗ್ರೆಸ್ನವರು ಹೊಸ ಸಿಸ್ಟಮ್ ಅನ್ನು ತಂದಿದ್ದಾರೆ. ಅಡ್ಡ ಮತದಾನವಾಗುವ ಸಾಧ್ಯತೆಗಳಿವೆ ಎಂದು ಹೇಳಿದರು.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!