spot_img
Friday, March 13, 2026
spot_img

ಆನೆಗುಡ್ಡೆ : ವಿಕಸನ – 2024 ಕಾರ್ಯಕ್ರಮ ಉದ್ಘಾಟನೆ

ತೆಕ್ಕಟ್ಟೆ: ಕೊರ್ಗಿ ವಿಠಲ ಶೆಟ್ಟಿ ಪಬ್ಲಿಕ್ ಚಾರಿಟೆಬಲ್ ಟ್ರಸ್ಟ್ (ರಿ.) ಕುಂಭಾಶಿ ಇದರ ಇದರ ೬ನೇ ವರ್ಷದ ಸಂಭ್ರಮಾಚರಣೆಯ ಅಂಗವಾಗಿ ಆನೆಗುಡ್ಡೆ ಶ್ರೀ ವಿನಾಯಕ ಸಭಾಗೃಹದಲ್ಲಿ ನಡೆದ ವಿಕಸನ – 2024 ಅಶಕ್ತ ವಿಶೇಷ ಚೇತನ ವಿದ್ಯಾರ್ಥಿಗಳಿಗೆ ಸಹಾಯಧನ ವಿತರಣೆ , ಸಾಧಕ ಕೃಷಿಕರಿಗೆ ಸಮ್ಮಾನ ಕಾರ್ಯಕ್ರಮವನ್ನು ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಆಡಳಿತ ಧರ್ಮದರ್ಶಿ ಕೆ. ಶ್ರೀರಮಣ ಉಪಾಧ್ಯಾಯ ಅವರು ಫೆ 24 ರಂದು ಉದ್ಘಾಟಿಸಿದರು.

ಇದೇ ಸಂದರ್ಭದಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಅವರು ಸಾಧಕ ಕೃಷಿಕರಾದ ಕೆ.ಅನಂತಕೃಷ್ಣ ಉಪಾಧ್ಯಾಯ, ಉಷಾ ಆರ್. ಬಾಯರಿ, ಕೆ.ಕರುಣಾಕರ ಶೆಟ್ಟಿ ಕೆದೂರು, ರಥಶಿಲ್ಪಿ ಪ್ರಭಾಕರ ಆಚಾರ್ಯ ಗೋಪಾಡಿ, ಅಂತರಾಷ್ಟ್ರೀಯ ಮಟ್ಟದ ಈಜುಪಟು ಗೋಪಾಲ ಖಾರ್ವಿ, ಕನ್ನಡ ಪರ ಹೋರಾಟಗಾರ ನಾಗರಾಜ ಶೆಟ್ಟಿ ಕುಂದಾಪುರ, ಅಂತರಾಷ್ಟ್ರೀಯ ಖ್ಯಾತೀಯ ಜಾದೂ ಕಲಾವಿದ ಪ್ರಕಾಶ್ ಹೆಮ್ಮಾಡಿ ಅವರನ್ನು ಗುರುತಿಸಿ ಸಮ್ಮಾನಿಸಿದರು ಹಾಗೂ ಅಶಕ್ತ ವಿಶೇಷ ಚೇತನ ವಿದ್ಯಾರ್ಥಿಗಳಿಗೆ ಸಹಾಯಧನ ವಿತರಿಸಲಾಯಿತು.

ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಅವರು ಮಾತನಾಡಿ, ಅಶಕ್ತ ವಿಶೇಷ ಚೇತನರಿಗೆ ಸ್ವಾವಲಂಬಿಗಳಾಗಿ ಬದುಕುವ ಅವಕಾಶದ ಜತೆಗೆ z ಧೈರ್ಯ ತುಂಬುವ ಮಹತ್ವದ ಯೋಜನೆಗೆ ಸರಕಾರ ಹೆಚ್ಚು ಒತ್ತು ನೀಡಬೇಕಾಗುತ್ತದೆ. ಇದರಿಂದ ವಿಕಲಚೇತನ ಮಕ್ಕಳ ಪೋಷಕರ ಶಾಶ್ವತ ಸೇವೆಗೆ ಆಧಾರವಾಗುವುದು ಎಂದು ಹೇಳಿದರು.

ಕೊರ್ಗಿ ವಿಠಲ ಶೆಟ್ಟಿ ಪಬ್ಲಿಕ್ ಚಾರಿಟೆಬಲ್ ಟ್ರಸ್ಟ್ (ರಿ.) ಕುಂಭಾಸಿ ಇದರ ಪ್ರವರ್ತಕ ಕೊರ್ಗಿ ವಿಠಲ ಶೆಟ್ಟಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಭವಾನಿ ವಿ.ಶೆಟ್ಟಿ ಬಾಳೆಕೆರೆ, ತೆಕ್ಕಟ್ಟೆ ಗ್ರಾಮ ಪಂಚಾಯತ್ ಇದರ ಮಾಜಿ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ ,ಉದ್ಯಮಿ ಎಂ.ದಿನೇಶ್ ಹೆಗ್ಡೆ ಮೊಳಹಳ್ಳಿ ಕುಂದಾಪುರ, ಹಿರಿಯ ಪತ್ರಕರ್ತ ರಾಮಕೃಷ್ಣ ಹೇರ್ಳೆ , ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಮಾಜಿ ಧರ್ಮದರ್ಶಿ ಕೆ. ಕೃಷ್ಣಪ್ರಸಾದ್ ಅಡ್ಯಂತಾಯ, ಉದ್ಯಮಿ ಆನಂದ ಶೆಟ್ಟಿ ಕೊರ್ಗಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಗಣೇಶ ಶೆಟ್ಟಿ, ಆನೆಗುಡ್ಡೆ ಶ್ರೀ ವಿನಾಯಕ ಸಭಾಗೃಹ ಇದರ ಮಾಲಕ ಕೆ.ರವಿರಾಜ್ ಉಪಾಧ್ಯಾಯ ಉಪಸ್ಥಿತರಿದ್ದರು.

ರಾಜಗೋಪಾಲ ಪುರಾಣಿಕ್ ಸ್ವಾಗತಿಸಿ, ಕೆ.ರವಿರಾಜ್ ಉಪಾಧ್ಯಾಯ ಪ್ರಸ್ತಾವನೆಗೈದು, ರಂಜಿತ ಕುಮಾರ ಶೆಟ್ಟಿ ವಕ್ವಾಡಿ ನಿರೂಪಿಸಿ, ಡಾ| ಅರುಣ್ ಶೆಟ್ಟಿ ಕೊರ್ಗಿ, ಸುಧಾಕರ ಶೆಟ್ಟಿ ಸಮ್ಮಾನಿತರ ಪಟ್ಟಿ ವಾಚಿಸಿ, ವಂದಿಸಿದರು.ತದನಂತರ ಅಂತರಾಷ್ಟ್ರೀಯ ಜಾದೂ ಪ್ರಶಸ್ತಿ ವಿಜೇತ ಜಾದೂಗಾರ ಪ್ರಕಾಶ್ ಹೆಮ್ಮಾಡಿ ಮತ್ತು ನೇತ್ರಾವತಿ ಹೆಮ್ಮಾಡಿ ಇವರಿಂದ ಜಾದೂ ಪ್ರದರ್ಶನಗೊಂಡಿತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!