Wednesday, October 30, 2024

ನಿಗಮ ಮಂಡಳಿಗಳ ಅಧ್ಯಕ್ಷರ ಪಟ್ಟಿ ಬಿಡುಗಡೆ : ಉ-ಚಿ ಲೋಕಸಭಾ ಕ್ಷೇತ್ರದ ಟಿಕೇಟ್‌ ಆಕಾಂಕ್ಷಿಗೆ ಭದ್ರಾ ಕಾಡಾ ಅಧ್ಯಕ್ಷ ಸ್ಥಾನ !

ಜನಪ್ರತಿನಿಧಿ (ಬೆಂಗಳೂರು) : ಲೋಕಸಭೆ ಚುನಾವಣೆಗೂ ಸನಿಹವಾಗುತ್ತಿದ್ದಂತೆ, ಕಾಂಗ್ರೆಸ್‌ನ 44 ಪ್ರಮುಖ  ಹಾಗೂ ಕಾರ್ಯಕರ್ತರಿಗೆ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನ ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಆದೇಶಿಸಿದೆ. ಬಹಳಷ್ಟು ಸಮಯದಿಂದ ನನೆಗುದಿಗೆ ಬಿದ್ದಿದ್ದ ನಿಗಮ ಮಂಡಳಿಗಳ ನೇಮಕ ಪ್ರಹಸನಕ್ಕೆ ಕೊನೆಗೂ ಅಧ್ಯಕ್ಷರ ಆಯ್ಕೆ ಆಗುವುದರ ಮೂಲಕ ಅಂತಿಮ ಚುಕ್ಕಿ ಬಿದ್ದಿದೆ.

ನಿಗಮ ಮಂಡಳಿಗಳು ಹಾಗೂ ಅಧ್ಯಕ್ಷರುಗಳ ಪಟ್ಟಿ ಈ ಕೆಳಗಿನಂತಿವೆ :

ಮಮತಾ ಗಟ್ಟಿ – ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ

ಜಿ.ಪಲ್ಲವಿ – ಸಾಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ

ಹೆಚ್.ಸಿ.ಸುಧೀಂದ್ರ – ತೆಂಗು ಅಭಿವೃದ್ಧಿ ಮಂಡಳಿ ಅಧ್ಯಕ್ಷ

ಕಾಂತಾ ನಾಯ್ಕ – ಕೌಶಲ್ಯಾಭಿವೃದ್ಧಿ ನಿಗಮ ಅಧ್ಯಕ್ಷೆ

ಮುಂಡರಗಿ ನಾಗರಾಜು – ಬಾಬು ಜಗಜೀವನ್​ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ

ವಿನೋದ್ ಕೆ. ಅಸೂಟಿ – ಕರ್ನಾಟಕ ಕ್ರೀಡಾ ಪ್ರಾಧಿಕಾರ ಉಪಾಧ್ಯಕ್ಷ

ಬಿ.ಹೆಚ್​.ಹರೀಶ್ – ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮ ಅಧ್ಯಕ್ಷ

ಡಾ.ಅಂಶುಮಂತ್​ – ಭದ್ರಾ ಕಾಡಾ ಅಧ್ಯಕ್ಷ

ಜೆ.ಎಸ್​.ಆಂಜನೇಯಲು – ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ

ಡಾ.ಬಿ.ಯೋಗೇಶ್ ಬಾಬು – ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ

ಮರೀಗೌಡ ಯಾದಗಿರಿ – ರಾಜ್ಯ ತೊಗರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ

ದೇವೇಂದ್ರಪ್ಪ ವರ್ತೂರು – ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ಅಧ್ಯಕ್ಷ

ರಾಜಶೇಖರ್ ರಾಮಸ್ವರಂ – ಕರ್ನಾಟಕ ಜೈವಿಕ ಇಂಧನ ಮಂಡಳಿ ಅಧ್ಯಕ್ಷ

ಕೆ.ಮರೀಗೌಡ – ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ

ಎಸ್​.ಮನೋಹರ್ – ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್

ಅಯೂಬ್ ಖಾನ್ – ಬಣ್ಣ ಮತ್ತು ಅರಗು ಕಾರ್ಖಾನೆ ಅಧ್ಯಕ್ಷ

ಜಯಸಿಂಹ – ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ

ವಿಜಯ್ ಕೆ.ಮುಳುಗುಂದ್ – ಉಪನಗರ ವರ್ತುಲ ರಸ್ತೆ ಯೋಜನಾ ಪ್ರಾಧಿಕಾರ

ಮರಿಸ್ವಾಮಿ ಚಾಮರಾಜನಗರ – ಕಾಡಾ ಅಧ್ಯಕ್ಷ

ಸದಾಶಿವ ಉಲ್ಲಾಳ್ – ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ

ರಘುನಂದನ್ ರಾಮಣ್ಣ – ಬಿಎಂಐಸಿಎಪಿಎ ಅಧ್ಯಕ್ಷ

ಬಸವರಾಜ್ ಜಾಬಶೆಟ್ಟಿ – ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ

ಸಾಧು ಕೋಕಿಲ – ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ

ಆರ್‌.ಎಂ ಮಂಹುನಾಥ -ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷರು

ಜಯಣ್ಣ- ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗ

ಆರ್.‌ ಸಂಪತ್ ರಾಜ್- ಡಾ. ಬಿ ಆರ್‌ ಅಂಬೇಡ್ಕರ್‌ ಅಭಿವೃದ್ದಿ ನಿಗಮ

ಪದ್ಮಾವತಿ- ಮಹಿಳಾ ಅಭಿವೃದ್ಧಿ ನಿಗಮ ಅಧ್ಯಕ್ಷರು

ಶ್ರೀನಿವಾಸ್‌ – ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ

ಶಾಕಿರ್‌ ಸನದಿ- ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರು

ಸೋಮಣ್ಣ ಬೇವಿನಮರದ – ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರು

ಮೆಹಬೂಬ್‌ ಪಾಷಾ- ಕಂಠೀರವ ಸ್ಟುಡಿಯೋ

ಕೀರ್ತಿ ಗಣೇಶ್-‌ ಡಿ ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಅಧ್ಯಕ್ಷರು

ಮಜರ್‌ ಖಾನ್-‌ ದೇವರಾಜು ಅರಸು ಟ್ರಕ್‌ ಟರ್ಮಿನಲ್‌ ಅಧ್ಯಕ್ಷರು

ಸವಿತಾ ರಘು- ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರು

ಲಲಿತ್‌ ರಾಘವ್-‌ ಕರ್ನಾಟಕ ವಿದ್ಯುತ್‌ ಕಾರ್ಖಾನೆ ಅಧ್ಯಕ್ಷ

ಜಿ ಎಸ್‌ ಮಂಜುನಾಥ -ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ ಅಧ್ಯಕ್ಷರು

ಮಾಲಾ ನಾರಾಯಣರಾವ್-‌ ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷರು

ರಿಜ್ವಾನ್‌ – ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಮಗದ ಅಧ್ಯಕ್ಷರು

ಕೇಶವ ರೆಡ್ಡಿ- ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರ ತಾಜ್‌ ಪೀರ್-‌ ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರ

ಗಂಗಾಧರ್-‌ ಮೈಸೂರು ಸಕ್ಕರೆ ಕಾರ್ಖಾನೆ ಅಲ್ತಾಫ್-‌ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ

ಎನ್.ಎ.ಹ್ಯಾರಿಸ್, ಕೆಎಂ ಶಿವಲಿಂಗೇಗೌಡ, ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಜನವರಿ 26ರಂದು ರಾಜ್ಯ ಸರ್ಕಾರ ನೇಮಕ ಮಾಡಿತ್ತು

ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಆಕಾಂಕ್ಷಿಗೆ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನ :

ಉಡುಪಿ ಹಾಗೂ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಟಿಕೇಟ್‌ಗಾಗಿ ಚಿಕ್ಕಮಗಳೂರು ಕಾಂಗ್ರೆಸ್‌ ಅಧ್ಯಕ್ಷ ಡಾ.ಅಂಶುಮಂತ್​ ಪ್ರಯತ್ನದಲ್ಲಿದ್ದರು. ಈ ಹಿನ್ನೆಲೆಯಲ್ಲಿ ಅಂಶುಮಂತ್ ಈ ಭಾಗದ ‌ ಪ್ರಭಾವಿ ನಾಯಕರನ್ನು ಸಂಪರ್ಕ ಮಾಡಿ ಟಿಕೇಟ್‌ಗಾಗಿ ಕಾಂಗ್ರೆಸ್‌ ಹೈಕಮಾಂಡ್‌ ಅನ್ನು ಸೆಳೆಯುವ ಪ್ರಯತ್ನವೂ ಮಾಡಿದ್ದರು. ಆದರೇ, ಅವರನ್ನು ರಾಜ್ಯ ಸರ್ಕಾರ ಈಗ ಭದ್ರಾ ಕಾಡಾ ಅಧ್ಯಕ್ಷನ್ನಾಗಿ ನೇಮಕ ಮಾಡಿದೆ. ಈ ಮೂಲಕ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಟಿಕೇಟ್‌ ಮೇಲೆ ಅವರಿಗಿದ್ದ ಕನಸು ನನಸಾಗಿಯೇ ಸದ್ಯಕ್ಕಂತೂ ಉಳಿಯಲಿದೆ ಎನ್ನುವುದು ಖಚಿತ.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಜಯಪ್ರಕಾಶ್‌ ಹೆಗ್ಡೆ !? :

ವಿವಿಧ ವಿಷಯಗಳಿಗೆ ಸಂಬಂಧಿಸಿ ಈಗಿನ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಕೆ. ಜಯಪ್ರಕಾಶ್‌ ಹೆಗ್ಡೆ ಅವರ ನೇತೃತ್ವದಲ್ಲಿ ಹಲವು ಟಿಪ್ಪಣಿಗಳೊಂದಿಗೆ ೨೦೧೫ರ ಸಮೀಕ್ಷಾ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಂದು ಸಲ್ಲಿಸಲಿದೆ. ಆ ಬಳಿಕ ಜಯಪ್ರಕಾಶ್‌ ಹೆಗ್ಡೆ ಬಿಜೆಪಿಗೆ ಅಧಿಕೃತವಾಗಿ ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಲಾಗಿದೆ. ಉಡುಪಿ ಹಾಗೂ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಟಿಕೇಟ್‌ ನೀಡಲಿರುವುದು ಬಹುತೇಕ ನಿಶ್ಚಿತ ಎಂದು ಹೇಳಲಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಂತೂ ಜನರು ಪಕ್ಷಭೇದವಾಗಿ ಉಡುಪಿ ಚಿಕ್ಕಮಗಳೂರು ಸಂಸದರನ್ನಾಗಿ ಕೆ, ಜಯಪ್ರಕಾಶ್‌ ಹೆಗ್ಡೆಯವರನ್ನು ಬಯಸುತ್ತಿದ್ದಾರೆ ಎನ್ನುವುದು ಕಾಣಿಸುತ್ತಿದೆ. ಜಯಪ್ರಕಾಶ್‌ ಹೆಗ್ಡೆಯವರು ಈ ಬಗ್ಗೆ ಯಾವುದೇ ಮಾಹಿತಿಯನ್ನು ಈವರೆಗೆ ಬಿಟ್ಟುಕೊಟ್ಟಿಲ್ಲ. ಆದರೇ, ಅವರ ಬೆಂಬಲಿಗರು ಹಾಗೂ ಕಾಂಗ್ರೆಸ್‌ ವಲಯದಿಂದ ಜಯಪ್ರಕಾಶ್‌ ಹೆಗ್ಡೆ ಅವರಿಗೆ ಕಾಂಗ್ರೆಸ್‌ ಟಿಕೇಟ್‌ ನೀಡುವುದು ಪಕ್ಕಾ ಎಂಬ ಮಾತುಗಳು ಕೇಳಿ ಬರುತ್ತಿದೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!