Wednesday, September 11, 2024

ಬೈಲೂರು ಶಾಲೆಯಲ್ಲಿ ಕಲಿಕಾ ಹಬ್ಬ 2024: ಶತಸಿರಿ ಸಭಾಂಗಣ ಉದ್ಘಾಟನೆ ಮತ್ತು ರಾಷ್ಟ್ರೀಯ ವಿಜ್ಞಾನ ದಿನಾಚರಣೆ

ಕುಂದಾಪುರ: “ಮಕ್ಕಳೇ ನಮ್ಮ ಆಸ್ತಿ, ಅವರಿಗೆ ಎಲ್ಲಾ ಅವಕಾಶಗಳನ್ನು ಒದಗಿಸಿ ಕೊಡಬೇಕು. ಬೈಲೂರು ಶಾಲೆ ಎಲ್ಲಾ ತರದ ಮೂಲಭೂತ ಸೌಕರ್ಯಗಳನ್ನು ಹೊಂದಿದ್ದು ಇಲ್ಲಿ ಕಲಿಯುವ ಮಕ್ಕಳು ಅದೃಷ್ಟವಂತರು” ಎಂದು ಉಡುಪಿ ಜಿಲ್ಲಾ ವಿದ್ಯಾಂಗ ಉಪನಿರ್ದೇಶಕರಾದ ಗಣಪತಿ ಕೆ ಹೇಳಿದರು.

ಕುಂದಾಪುರ ಶೈಕ್ಷಣಿಕ ವಲಯದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೈಲೂರು ಇಲ್ಲಿ ಫೆ.28ರಂದು ನಡೆದ ಕಲಿಕಾ ಹಬ್ಬದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಶಾಲಾ ಶತಮಾನೋತ್ಸವ ನೆನಪಿಗಾಗಿ ಎಮ್ ಆರ್ ಪಿ ಎಲ್ ಸಂಸ್ಥೆ ಮಂಗಳೂರು ಇವರು ರೂಪಾಯಿ ೧೫ ಲಕ್ಷ ವೆಚ್ಚದಲ್ಲಿ ನಿರ್ಮಿಸಿ ಕೊಟ್ಟ “ಶತಸಿರಿ” ಸಭಾಂಗಣ ಉದ್ಘಾಟನೆ ಮತ್ತು ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಅಂಗವಾಗಿ ಮಕ್ಕಳ ಕಲಾ ಮತ್ತು ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ಶಂಕರನಾರಾಯಣ ಗ್ರಾಮಪಂಚಾಯತ್ ಅಧ್ಯಕ್ಷರಾದ ಉಮೇಶ ಶೆಟ್ಟಿ ಕಲ್ಗದ್ದೆ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಎಮ್ ಆರ್ ಪಿ ಎಲ್ ಸಂಸ್ಥೆಯ ಸಹಾಯಕ ವ್ಯವಸ್ಥಾಪಕರಾದ ಹರೀಶ್ ರಾವ್ ಶತಸಿರಿ ಸಭಾಂಗಣವನ್ನು ಉದ್ಘಾಟಿಸಿ ಶುಭಹಾರೈಸಿದರು.

ಇದೇ ಸಂದರ್ಭದಲ್ಲಿ “ಜ್ಞಾನ ಚಿಗುರು” ಪ್ರಶಸ್ತಿ ಪುರಸ್ಕೃತರಾದ ಅಂಗನವಾಡಿ ಕಾರ್ಯಕರ್ತೆ ಬಿ. ಆಶಾಲತಾ ಶೆಟ್ಟಿ, ನಿವೃತ್ತ ಶಿಕ್ಷಕರಾದ ರವೀಂದ್ರನಾಥ ಶೆಟ್ಟಿ, ಎಮ್ ಆರ್‌ಪಿಲ್ ಸಂಸ್ಥೆಯ ಸಹಾಯಕ ವ್ಯವಸ್ಥಾಪಕರಾದ ಹರೀಶ್ ರಾವ್, ಕಟ್ಟಡ ಗುತ್ತಿಗೆದಾರರಾದ ಪ್ರಕಾಶ ಹೆಗ್ಡೆ, ವಿದ್ಯಾಂಗ ಉಪನಿರ್ದೇಶಕರಾದ ಶ್ರೀ ಗಣಪತಿ ಕೆ. ಇವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಶಂಕರನಾರಾಯಣ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ವತ್ಸಲಾ ಶೆಟ್ಟಿ, ಸದಸ್ಯರಾದ ಶಂಕರನಾರಾಯಣ ಭಟ್ ಕೊಂಡಳ್ಳಿ, ಗೀತಾ, ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಜಯಕರ ಶೆಟ್ಟಿ ಮೂಡುಬೈಲೂರು, ಶಾಲಾ ವಿಜಯ ಬ್ಯಾಂಕ್ ನಿವೃತ್ತ ಮ್ಯಾನೆಜರ್ ಆದ ಶಿವರಾಮ ಶೆಟ್ಟಿ ಮೂಡುಬೈಲೂರು ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಮಮತಾ ಆರ್ ಶೆಟ್ಟಿ ಶಾಲಾ ಮಾಜಿ ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಸುಬ್ರಹ್ಮಣ್ಯ ಐತಾಳ್ ಮತ್ತು ಅಂಪಾರು ವೃತ್ತದ ಶಿಕ್ಷಣ ಸಂಯೋಜಕರಾದ ಶಂಕರ ಉಪಸ್ಥಿತರಿದ್ದರು.

ಶಾಲಾ ಎಸ್ ಡಿ ಎಮ್ ಸಿ ಅಧ್ಯಕ್ಷೆ ಶ್ರುತಿ ಶೆಟ್ಟಿ ಸ್ವಾಗತಿಸಿದರು. ಮುಖ್ಯ ಶಿಕ್ಷಕಿ ಗಿರಿಜಾ ಡಿ ಪ್ರಸ್ತಾವನೆಗೈದರು. ಪದವೀಧರ ಸಹಶಿಕ್ಷಕಿ ರಕ್ಷಿತಾ ಜಿ. ಸನ್ಮಾನ ಪತ್ರ ವಾಚಿಸಿದರು. ಅತಿಥಿ ಶಿಕ್ಷಕಿ ಪ್ರಮೀಳಾ ಮತ್ತು ಗೌರವ ಶಿಕ್ಷಕಿ ನಯನ ಸಹಕರಿಸಿದರು. ಸಹ ಶಿಕ್ಷಕಿ ಸಂಧ್ಯಾ ಕೆ ವಂದಿಸಿದರು. ಸಹ ಶಿಕ್ಷಕ ಆನಂದ ಕುಲಾಲ ಕಾರ್ಯಕ್ರಮ ನಿರೂಪಿಸಿದರು. ನಂತರದಲ್ಲಿ ಮಕ್ಕಳು ತಯಾರಿಸಿದ ವಿವಿಧ ವಿಜ್ಞಾನ ಮಾದರಿಗಳು ಮತ್ತು ಕ್ರಾಪ್ಟ್ ಚಟುವಟಿಕೆಗಳ ಪ್ರದರ್ಶನ ನಡೆಯಿತು. ಶಾಲಾ ಎಸ್ ಡಿ ಎಮ್ ಸಿ ಸದಸ್ಯರು ಪೋಷಕರು ಮತ್ತು ಹಳೆವಿದ್ಯಾರ್ಥಿಗಳು ಪ್ರದರ್ಶನವನ್ನು ವೀಕ್ಷಿಸಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!