spot_img
Friday, March 13, 2026
spot_img

ಸ.ಹಿ.ಪ್ರಾ.ಶಾಲೆ ಆಲೂರು: ವಿಜ್ಞಾನ ಮತ್ತು ಕಲಾಮೇಳ

ಕುಂದಾಪುರ: ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ಫೆ.28ರಂದು ಆಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಜ್ಞಾನ ಮತ್ತು ಕಲಾ ಮೇಳ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಗ್ರಾಮ ಪಂಚಾಯತಿ ಅಧ್ಯಕ್ಷರಾದ ರಾಜೇಶ್ ದೇವಾಡಿಗರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳ ಅನ್ವೇಷಣಾ ಕೌಶಲ್ಯ ಮತ್ತು ಕಲಾ ನೈಪುಣ್ಯತೆಗೆ ಮೆಚ್ಚುಗೆ ವ್ಯಕ್ತ ಪಡಿಸಿದರು.

ವಿದ್ಯಾರ್ಥಿಗಳಿಂದ ವಿಜ್ಞಾನ ರಂಗೋಲಿ, ಕಾರ್ಯನಿರ್ವಹಣಾ ಮಾದರಿಗಳು, ವಿಜ್ಞಾನ ಚಿತ್ರಗಳು ಮತ್ತು ಕಲಾ ಪ್ರದರ್ಶನ ನಡೆಯಿತು.

ಗ್ರಾಮ ಪಂಚಾಯತ್ ಸದಸ್ಯರಾದ ಪ್ರಸನ್ನ ಕುಮಾರ್ ಶೆಟ್ಟಿ, ರವಿ ಶೆಟ್ಟಿ, ಎಸ್.ಡಿ.ಎಂ.ಸಿ ಅಧ್ಯಕ್ಷರಾದ ದತ್ತಾತ್ರೇಯ ಭಟ್, ಪ್ರೌಢಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯರಾದ ಉದಯ ಕುಮಾರ್ ಶೆಟ್ಟಿ, ಪ್ರಭಾರ ಮುಖ್ಯೋಪಾಧ್ಯಾಯಿನಿ ಲಲಿತಾ ಉಪಸ್ಥಿತರಿದ್ದರು.

ವಿಜ್ಞಾನ ಶಿಕ್ಷಕಿ ವಿದ್ಯಾ ಪ್ರತಿಜ್ಞಾವಿಧಿ ಬೋಧಿಸಿದರು. ಲಲಿತಾ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕ ವೀರೇಂದ್ರ ಜೋಗಿ ವಂದಿಸಿದರು. ಕಾರ್ಯಕ್ರಮವನ್ನು ಸಹಶಿಕ್ಷಕ ದಿನಕರ ನಿರ್ವಹಿಸಿದರು. ಶಿಕ್ಷಕರಾದ ವಿಶ್ವನಾಥ, ವಿದ್ಯಾಗೌಡ ಮತ್ತು ಅತಿಥಿ ಶಿಕ್ಷಕರಾದ ಸುನಂದ, ಆಶಾರಾಣಿ, ಕಂಪ್ಯೂಟರ್ ಶಿಕ್ಷಕಿ ದೀಪಾ ಸಹಕರಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!