Saturday, October 12, 2024

ಪಾಕಿಸ್ತಾನ್‌ ಝಿಂದಾಬಾದ್‌ ಘೋಷಣೆ ಪ್ರಕರಣ : ಅಲ್ಪಸಂಖ್ಯಾತರ ಓಲೈಕೆಗಾಗಿ ಕಾಂಗ್ರೆಸ್ ನಾಯಕರು ಮೌನ ವಹಿಸಿದ್ದಾರೆ : ಜೆ. ಪಿ ನಡ್ಡಾ

ಜನಪ್ರತಿನಿಧಿ (ಬೆಳಗಾವಿ) : ಕರ್ನಾಟಕ ರಾಜ್ಯವು ಭಯೋತ್ಪಾದಕರ ಅಡ್ಡವಾಗಿದೆ. ಕರ್ನಾಟಕದ ಶಕ್ತಿ ಕೇಂದ್ರದಲ್ಲಿ ಬಾಂಬ್ ದಾಳಿ ಮಾಡಲು ಸಂಚು ರೂಪಿಸುವ ಭಯೋತ್ಪಾದಕರಿಗೆ ಕಾಂಗ್ರೆಸ್ ಸರಕಾರ ಆಶ್ರಯ ನೀಡುತ್ತಿದೆ ಎನ್ನುವುದು ಎಲ್ಲರಿಗೂ ಗೊತ್ತಾಗುತ್ತಿದೆ ಎಂದು ಬಿಜೆಪಿ ಅದ್ಯಕ್ಷ ಜೆ.ಪಿ ನಡ್ಡಾ ಗಂಭೀರ ಆರೋಪ ಮಾಡಿದ್ದಾರೆ.

ಇಂದು (ಮಂಗಳವಾರ ) ಚಿಕ್ಕೋಡಿಯಲ್ಲಿ ನಡೆದ ಬಿಜೆಪಿ ಬೂತ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದರು.

ವಿಧಾನಸೌಧದಲ್ಲಿ ಪಾಕಿಸ್ತಾನಕ್ಕೆ ಜೈಕಾರ ಹಾಕಿರುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೌನ ವಹಿಸಿರುವ ಉದ್ದೇಶ ಏನು ಎಂಬುವುದು ಸ್ಪಷ್ಟಪಡಿಸಬೇಕು. ಕಾಂಗ್ರೆಸ್ ನಾಯಕರು ಅಲ್ಪಸಂಖ್ಯಾತರ ಓಲೈಕೆಗಾಗಿ ಮೌನ ವಹಿಸಿದ್ದಾರೆ ಎಂದು ಕಟುವಾಗಿ ಟೀಕಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಸರಕಾರವು ಪಿಎಫ್ಐ ಬ್ಯಾನ್ ಮಾಡಿದೆ. ಆದರೆ ಕಾಂಗ್ರೆಸ್ ಸರಕಾರ ಪಿಎಫ್ಐ ಮೇಲಿನ ಕೇಸ್ ವಾಪಸ್ ಪಡೆಯುತ್ತಿದೆ. ಕಾಂಗ್ರೆಸ್ ಮುಖಂಡರಿಗೆ ಭಾರತದ ಮೇಲೆ ಪ್ರೀತಿ ಇದ್ದರೆ ಪಾಕಿಸ್ತಾನ ಜೈ ಎಂದವರ ಮೇಲೆ ಸೂಕ್ತ ಕ್ರಮ ಜರುಗಿಸಲಿ ಎಂದು ನಡ್ಡಾ ಸವಾಲು ಹಾಕಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!