Thursday, October 31, 2024

ಸೌಕೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ: ವೈಭವದ ಶ್ರೀ ಮನ್ಮಹಾರಥೋತ್ಸವ

ಕುಂದಾಪುರ: ’ಪುಷ್ಪ ಪವಾಡ’ ಖ್ಯಾತಿಯ ಸೌಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಶ್ರೀ ಮನ್ಮಹಾರಥೋತ್ಸವ ಮಾ. 5ರಂದು ವಿಜೃಂಭಣೆಯಿಂದ ನೆಡೆಯಿತು.

ರಥೋತ್ಸವದ ಅಂಗವಾಗಿ ಬೆಳಿಗ್ಗೆಯಿಂದಲೇ ವಿವಿಧ ಧಾರ್ಮಿಕ ವಿಧಿವಿಧಾನಗಳು ನಡೆದವು. ಶುಭ ಮಹೂರ್ತದಲ್ಲಿ ರಥಬಲಿ, ದೇವಿಯ ರಥಾರೋಹಣ, ಶ್ರೀ ದೇವಿಗೆ ರಥದಲ್ಲಿ ಪೂಜಾದಿಗಳು ನಡೆದವು. ಅಲಂಕೃತಳಾದ ರಥದಲ್ಲಿ ವಿರಾಜಮಾನಳಾದ ಶ್ರೀ ದುರ್ಗಾಪರಮೇಶ್ವರಿಗೆ ಭಕ್ತಾದಿಗಳು ಪೂಜೆ ಸಲ್ಲಿಸಿದರು. ಮಧ್ಯಾಹ್ನ ಮಹಾ ಅನ್ನಸಂತರ್ಪಣೆ ನಡೆಯಿತು.

ಸಂಜೆ ವೈಭವದ ರಥೋತ್ಸವ ನಡೆಯಿತು. ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ರಥೋತ್ಸವದಲ್ಲಿ ಭಾಗವಹಿಸಿ ಶ್ರೀ ದೇವರ ಕೃಪಾಕಟಾಕ್ಷಕ್ಕೆ ಪಾತ್ರರಾದರು. ರಥೋತ್ಸವದ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಎನ್.ಮಂಜಯ್ಯ ಶೆಟ್ಟಿ ಸಬ್ಲಾಡಿ, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಸೌಕೂರು ಅನಂತ ಅಡಿಗ, ಕುಪ್ಪ ಉದಯನಗರ, ರೀತಾ ದೇವಾಡಿಗ ಸೌಕೂರು, ಆಶಾ ಸಂತೋಷ್ ಪೂಜಾರಿ ಮುಕ್ಕೋಡು ನೇರಳಕಟ್ಟೆ, ಜಯರಾಮ ಶೆಟ್ಟಿ ಹಾಡಾಳಿ ಅಂಪಾರು, ಕೆ.ಸುಬ್ಬಣ್ಣ ಶೆಟ್ಟಿ , ಉಮೇಶ ಮೊಗವೀರ ಕಂಡ್ಲೂರು, ಜಿ.ಶೇಖರ ಪೂಜಾರಿ ಗುಲ್ವಾಡಿ ಉಪಸ್ಥಿತರಿದ್ದರು.

ಸೌಕೂರು ಶ್ರೀಮನ್ಮಹಾರಥೋತ್ಸವದ ಯಶಸ್ವಿಗೆ ಶ್ರಮಿಸಿದ ಎಲ್ಲರಿಗೂ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಎನ್.ಮಂಜಯ್ಯ ಶೆಟ್ಟಿ ಸಬ್ಲಾಡಿ ಕೃತಜ್ಞತೆ ಸಲ್ಲಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!