spot_img
Thursday, March 19, 2026
spot_img

ಕುಂದಾಪುರ ತಾಲೂಕು ಭೂ ನ್ಯಾಯಮಂಡಳಿಯ ಸದಸ್ಯರಾಗಿ ರಮೇಶ್‌ ಶೆಟ್ಟಿ ವಕ್ವಾಡಿ ನಾಮ ನಿರ್ದೇಶನ

ಜನಪ್ರತಿನಿಧಿ (ವಕ್ವಾಡಿ) : ಕರ್ನಾಟಕ ಭೂ ಸುಧಾರಣೆ ಕಾಯ್ದೆ ೧೯೬೧ರ ಕಲಂ ೪೮ರ ಉಪ ಕಲಂ(೧)ರಿಂದ (೩)ರ ಪ್ರದತ್ತಾದ ಆಧಿಕಾರವನ್ನು ಚಲಾಯಿಸಿ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ಭೂ ನ್ಯಾಯಮಂಡಳಿಗೆ ಸದಸ್ಯರನ್ನಾಗಿ ರಮೇಶ್‌ ಶೆಟ್ಟಿ ವಕ್ವಾಡಿ ಅವರನ್ನು ಆಯ್ಕೆ ಮಾಡಿ ಕರ್ನಾಟಕ ಸರ್ಕಾರದ ಕಂದಾಯ ಇಲಾಖೆ(ಭೂ ಸುಧಾರಣೆ) ಆದೇಶಿಸಿದೆ.

ಇತ್ತೀಚೆಗಷ್ಟೇ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶಗಳ ಕಾರ್ಯಕ್ರಮವೂ ಸೇರಿದಂತೆ) ಪರಿಣಾಮಕಾರಿ ಅನುಷ್ಠಾನದ ಪರಿಶೀಲನೆಗಾಗಿ ಉಡುಪಿ ಜಿಲ್ಲೆ ಕುಂದಾಪುರ ತಾಲೂಕು ಮಟ್ಟದ ತ್ರೈಮಾಸಿಕ ಪರಿಶೀಲನಾ ಕೆ.ಡಿ.ಪಿ ಸಮಿತಿಗೆ ಅಧಿಕಾರೇತರ ಸದಸ್ಯರನ್ನಾಗಿಯೂ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿತ್ತು.

ಕಾಳವಾರ ಗ್ರಾಮ ಪಂಚಾಯತ್‌ನ ಸದಸ್ಯರಾದ ರಮೇಶ್‌ ಶೆಟ್ಟಿ ವಕ್ವಾಡಿ ಸಕ್ರಿಯವಾಗಿ ತಮ್ಮನ್ನು ತಾವು ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡವರು. ಸ್ಥಳೀಯವಾಗಿ ಜನಪ್ರಿಯತೆ ಹೊಂದಿರುವ ಅವರು, ಸಂಘ ಸಂಸ್ಥೆಗಳಲ್ಲಿಯೂ ಗುರುತಿಸಿಕೊಂಡಿದ್ದಾರೆ. ನೇರ ನಿಷ್ಠುರ ನಡೆನುಡಿಯ ಅವರು ಕಾಂಗ್ರೆಸ್‌ನ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್‌ನ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿ, ಕುಂದಾಪುರ ಐಟಿ ಸೆಲ್‌ ವಿಭಾಗದ ಮಾಜಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಸದ್ಯ ಅವರು ಕುಂದಾಪುರ ತಾಲೂಕು ಪಂಚಾಯತ್‌ ರಾಜ್ ಒಕ್ಕೂಟ (ರಿ.) ಕುಂದಾಪುರ ವಲಯದ ಸಂಚಾಲಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.  

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!