spot_img
Wednesday, January 22, 2025
spot_img

‘ನಾರಿ ಶಕ್ತಿ’ ಪ. ಬಂಗಾಳದಲ್ಲಿ ಆಡಳಿತಾರೂಢ ಟಿಎಂಸಿಯನ್ನು ಛಿದ್ರಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ : ದೀದಿ ವಿರುದ್ಧ ಮೋದಿ ಗುಡುಗು 

ಜನಪ್ರತಿನಿಧಿ (ಬರಾಸತ್) :  ಪಶ್ಚಿಮ ಬಂಗಾಳದ ಮೂಲೆ ಮೂಲೆಗೂ ‘ಸಂದೇಶ್‌ಖಾಲಿ ಸುಂಟರಗಾಳಿ’ ತಲುಪಲಿದೆ ಹಾಗೂ ‘ನಾರಿ ಶಕ್ತಿ'(ಮಹಿಳಾ ಶಕ್ತಿ)  ರಾಜ್ಯದಲ್ಲಿ ಆಡಳಿತಾರೂಢ ಟಿಎಂಸಿಯನ್ನು ಛಿದ್ರಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಇಂದು(ಬುಧವಾರ) ಹೇಳಿದ್ದಾರೆ.

ಬರಾಸತ್ ನಲ್ಲಿ ಚುನಾವಣಾ ಪ್ರಚಾರ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಸಂದೇಶ್‌ಖಾಲಿಯಲ್ಲಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ನಾಚಿಕೆಗೇಡಿನ ಸಂಗತಿ ಎಂದು ದೀದಿ ಸರ್ಕಾರದ ವಿರುದ್ಧ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.

“ಟಿಎಂಸಿ ನಾಯಕರು ವಿವಿಧ ಸ್ಥಳಗಳಲ್ಲಿ ಬಡ, ದಲಿತ ಹಾಗೂ ಬುಡಕಟ್ಟು ಕುಟುಂಬಗಳ ಸಹೋದರಿಯರ ಮೇಲೆ ದೌರ್ಜನ್ಯ ಎಸಗುತ್ತಿದ್ದಾರೆ. ಇದರಿಂದ ಪಶ್ಚಿಮ ಬಂಗಾಳ ಹಾಗೂ ದೇಶದ ಮಹಿಳೆಯರು ಆಕ್ರೋಶಗೊಂಡಿದ್ದಾರೆ ಎಂದು ಮೋದಿ ಹೇಳಿದ್ದಾರೆ.

ಇನ್ನು, ಉತ್ತರ 24 ಪರಗಣ ಜಿಲ್ಲೆಯ ಸಂದೇಶ್‌ಖಾಲಿ ಎಂಬ ನದಿತೀರದ ದ್ವೀಪದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಎಸಗಿದ ಹಾಗೂ ಭೂಕಬಳಿಕೆ ಮಾಡಿದ ಆರೋಪದ ಮೇಲೆ ಅಮಾನತುಗೊಂಡಿರುವ ಟಿಎಂಸಿ ನಾಯಕ ಷಹಜಾಹನ್ ಶೇಖ್ ನನ್ನು ಬಂಧಿಸಲಾಗಿದೆ.

ಏತನ್ಮಧ್ಯೆ, ಅಮಾನತುಗೊಂಡಿರುವ ಟಿಎಂಸಿ ನಾಯಕ ಷಹಜಾಹನ್ ಶೇಖ್ ಅವರನ್ನು ಸಿಬಿಐಗೆ ಹಸ್ತಾಂತರಿಸುವ ಕಲ್ಕತ್ತಾ ಹೈಕೋರ್ಟ್ ಆದೇಶವನ್ನು ಪಶ್ನಿಸಿ ಪಶ್ಚಿಮ ಬಂಗಾಳ ಸರ್ಕಾರ ಸುಪ್ರೀಂ ಕೋರ್ಟ್ ಮೇಲ್ಮನವಿ ಸಲ್ಲಿಸಿದೆ. ಇದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ, ಇದು “ದೊಡ್ಡ ನಾಚಿಕೆಗೇಡಿನ ಸಂಗತಿ” ಎಂದು ತರಾಟೆಗೆ ತೆಗೆದುಕೊಂಡಿದೆ.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ, ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ತೆರಳುವ ರಾಜ್ಯ ಸರ್ಕಾರದ ನಿರ್ಧಾರವು “ಅದರ ಅವ್ಯವಸ್ಥೆಯನ್ನು ಎತ್ತಿ ತೋರಿಸುತ್ತದೆ” ಎಂದಿದ್ದಾರೆ.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!