Saturday, September 14, 2024

ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಪೋಟ ಪ್ರಕರಣ : ಬಾಂಬರ್‌ ಸುಳಿವು ಒದಗಿಸಿದವರಿಗೆ ಹತ್ತು ಲಕ್ಷ ಬಹುಮಾನ !

ಜನಪ್ರತಿನಿಧಿ (ಬೆಂಗಳೂರು) : ರಾಜಧಾನಿ ಬೆಂಗಳೂರಿನಲ್ಲಿ ಭಾರಿ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾದ ದಿ. ರಾಮೇಶ್ವರಂ ಕೆಫೆ ಬಾಂಬ್‌ ಸ್ಪೋಟ ಪ್ರಕರಣದ ಬಾಂಬರ್‌ ಮಾಹಿತಿ ಒದಗಿಸಿದವರಿಗೆ ಹತ್ತು ಲಕ್ಷ ನಗದು ಬಹುಮಾನವನ್ನು ನೀಡಲಾಗುವುದು ಎಂದು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಘೋಷಣೆ ಮಾಡಿದೆ.

ತನ್ನ ಅಧಿಕೃತ ʼಎಕ್ಸ್‌ʼ ಖಾತೆಯಲ್ಲಿ ಈ ಬಗ್ಗೆ ಹಂಚಿಕೊಂಡ ಎನ್‌ಐಎ, ಶಂಕಿತನ ಭಾವಚಿತ್ರದ ಜೊತೆಗೆ ಆರೋಪಿ ಬಗ್ಗೆ ಸುಳಿವು ನೀಡಿದವರ ಮಾಹಿತಿಯನ್ನು ಗೌಪ್ಯವಾಗಿ ಇಡಲಾಗುವುದು ಹಾಗೂ ಆರೋಪಿಯ ಮಾಹಿತಿ ನೀಡಿದವರಿಗೆ ಹತ್ತು ಲಕ್ಷ ನಗದು ನೀಡಲಾಗುವುದು ಎಂದು ಹೇಳಿದೆ.

ಮಾರ್ಚ್‌ ೧ ರಂದು ಬೆಂಗಳೂರಿನ ವೈಟ್‌ಫೀಲ್ಡ್‌ ಸಮೀಪದ ಬ್ರೂಕ್‌ ಫೀಲ್ಡ್‌ನಲ್ಲಿರುವ ʼದಿ ರಾಮೇಶ್ವರಂ ಕೆಫೆʼ ಹೋಟೇಲ್‌ನಲ್ಲಿ ಟೈಮರ್‌ ಚಾಲಿತ ಕಚ್ಚಾ ಬಾಂಬ್‌ (ಐಇಡಿ) ಸ್ಪೋಟಿಸಲಾಗಿತ್ತು. ಘಟನೆಯಲ್ಲಿ ಗ್ರಾಹಕರು ಸೇರಿದಂತೆ ಹತ್ತು ಮಂದಿಗೆ ಗಾಯವಾಗಿತ್ತು.

ದುಷ್ಕರ್ಮಿಗಳ ಕೃತ್ಯದ ವಿರುದ್ಧ ಕಾನೂನು ಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆಯಡಿ (ಯುಎಪಿಎ) ಪ್ರಕರಣ ದಾಖಲಾಗಿದ್ದು, ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಅಧಿಕಾರಿಗಳು ಹಾಗೂ ಸಿಸಿಬಿ ಪೊಲೀಸರು ಜಂಟಿಯಾಗಿ ತನಿಖೆ ಮುಂದುವರಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!