Thursday, October 31, 2024

ಬೆಂಗಳೂರಿನ ನಿಮ್ಹಾನ್ಸ್‌ನಲ್ಲಿ ಉದ್ಯೋಗ ಅವಕಾಶ : ಇಲ್ಲಿದೆ ಮಾಹಿತಿ.

ಜನಪ್ರತಿನಿಧಿ (ಬೆಂಗಳೂರು) : ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು(National Institute of Mental Health and Neuro Sciences) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಸೀನಿಯರ್ ರಿಸರ್ಚ್​ ಫೆಲೋ (ನ್ಯೂರೋ ಇಮೇಜಿಂಗ್​) ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮಾರ್ಚ್ 11, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಕೂಡಲೇ ತಮ್ಮ ರೆಸ್ಯೂಮ್​ನ್ನು ಈ ಕೆಳಗೆ ನೀಡಲಾಗಿರುವ ಇ-ಮೇಲ್ ವಿಳಾಸಕ್ಕೆ ಕಳುಹಿಸಿಕೊಡಬಹುದಾಗಿದೆ. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವವರಿಗೆ ಇದೊಂದು  ಸುವರ್ಣ ಅವಕಾಶವಾಗಿದೆ.

ಶೈಕ್ಷಣಿಕ ಅರ್ಹತೆ : ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಇ/ಬಿ.ಟೆಕ್, ಎಂ.ಟೆಕ್, ಬಯೋಟೆಕ್ನಾಲಜಿ/ಲೈಫ್​ ಸೈನ್ಸಸ್​​ನಲ್ಲಿ ಎಂ.ಎಸ್ಸಿ, ಸೈಕಾಲಜಿಯಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು ಎಂದು ನಿಮ್ಹಾನ್ಸ್‌ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ವಯೋಮಿತಿ : ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ. ಮಾಸಿಕ  43,500 ರೂ. ಸಂಬಳ ನೀಡಲಾಗುತ್ತದೆ.  

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ jpj@nimhans.ac.in ಅಥವಾ jpjmbial@gmail.com ಗೆ ಕಳುಹಿಸಬೇಕು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!