spot_img
Thursday, March 19, 2026
spot_img

ದಿ ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣ : ಬಳ್ಳಾರಿಯಲ್ಲಿ ರಾಷ್ಟ್ರೀಯ ತನಿಖಾ ದಳ ಪರಿಶೀಲನೆ

ಜನಪ್ರತಿನಿಧಿ (ಬಳ್ಳಾರಿ) : ದಿ ರಾಮೇಶ್ವರಂ ಕೆಫೆʼ ಬಾಂಬ್‌ ಸ್ಪೋಟಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ)  ಶಂಕಿತನ ಜಾಡು ಹಿಡಿದು ಬಳ್ಳಾರಿಗೆ ಪರಶೀಲನೆ ಆಗಮಿಸಿದೆ ಎಂದು ಮಾಹಿತಿ ಲಭ್ಯವಾಗಿದೆ.  

ಇಂದು(ಗುರುವಾರ) ಬೆಳ್ಳಂಬೆಳಗ್ಗೆ ಮೂರು ಗಂಟೆ ಜಾವದಲ್ಲಿ ರಾಷ್ಟ್ರೀಯ ತನಿಖಾ ದಳ ಆಗಮಿಸಿತ್ತು.  ಸ್ಥಳೀಯ ಪೊಲೀಸರ ಸಹಾಯದೊಂದಿಗೆ ಕೆಎಸ್‌ಆರ್‌ ಟಿಸಿ ಬಸ್‌ ನಿಲ್ದಾಣದಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು ಪರೀಶಿಲನೆ ಮಾಡಿದೆ ಎಂದು ತಿಳಿದು ಬಂದಿದೆ.

ʼದಿ ರಾಮೇಶ್ವರ ಕೆಫೆʼ ಅಲ್ಲಿ ಬಾಂಬ್‌ ಸ್ಫೋಟದ ಬಳಿಕ ಬಾಂಬರ್‌ ತುಮುಕೂರು ಬಸ್‌ ನಿಲ್ದಾಣಕ್ಕೆ ಬಂದಿದ್ದ ಎನ್ನಲಾಗಿದೆ. ಅಲ್ಲಿಂದ ಬಳ್ಳಾರಿಗೆ ಬಸ್‌ ಮೂಲಕ ಪ್ರಯಾಣ ಬೆಳೆಸಿರುವುದರ ಬಗ್ಗೆ ತನಿಖಾ ಸಂಸ್ಥೆಗೆ ಸುಳಿವು ಸಿಕ್ಕಿದೆ ಎಂದು ಹೇಳಲಾಗಿದೆ. ಆದರೇ, ಬಳ್ಳಾರಿಯಿಂದಲೂ ಮತ್ತೆ ಬೇರೆ ಕಡೆ ಪ್ರಯಾಣ ಬೆಳೆಸಿರಬಹುದು ಎಂಬ ಅನುಮಾನ ವ್ಯಕ್ತ ಪಡಿಸಿದ್ದಾರೆ.

ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ಇನ್ನು, ರಾಜಧಾನಿ ಬೆಂಗಳೂರಿನಲ್ಲಿ ಭಾರಿ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾದ ದಿ. ರಾಮೇಶ್ವರಂ ಕೆಫೆ ಬಾಂಬ್‌ ಸ್ಪೋಟ ಪ್ರಕರಣದ ಬಾಂಬರ್‌ ಮಾಹಿತಿ ಒದಗಿಸಿದವರಿಗೆ ಹತ್ತು ಲಕ್ಷ ನಗದು ಬಹುಮಾನವನ್ನು ನೀಡಲಾಗುವುದು ಎಂದು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಘೋಷಣೆ ಮಾಡಿದೆ.

ತನ್ನ ಅಧಿಕೃತ ʼಎಕ್ಸ್‌ʼ ಖಾತೆಯಲ್ಲಿ ಈ ಬಗ್ಗೆ ಹಂಚಿಕೊಂಡ ಎನ್‌ಐಎ, ಶಂಕಿತನ ಭಾವಚಿತ್ರದ ಜೊತೆಗೆ ಆರೋಪಿ ಬಗ್ಗೆ ಸುಳಿವು ನೀಡಿದವರ ಮಾಹಿತಿಯನ್ನು ಗೌಪ್ಯವಾಗಿ ಇಡಲಾಗುವುದು ಹಾಗೂ ಆರೋಪಿಯ ಮಾಹಿತಿ ನೀಡಿದವರಿಗೆ ಹತ್ತು ಲಕ್ಷ ನಗದು ನೀಡಲಾಗುವುದು ಎಂದು ಹೇಳಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!