spot_img
Friday, April 25, 2025
spot_img

ಲೋಕಸಭಾ ಚುನಾವಣೆಗೂ ಮುನ್ನಾ ಸಿಎಎ ಜಾರಿಗೊಳಿಸಿದ ಮೋದಿ ನೇತೃತ್ವದ ಕೇಂದ್ರ ಸರ್ಕಾರ !

ಜನಪ್ರತಿನಿಧಿ (ನವ ದೆಹಲಿ) : ಲೋಕಸಭೆ ಚುನಾವಣೆ ದಿನಾಂಕ ಘೋಷಣೆ ಆಗುವ ಮುನ್ನ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಜಾರಿಗೆ ತಂದಿದೆ.

ಸಂಸತ್ತಿನಲ್ಲಿ ಅಂಗೀಕರಿಸಲ್ಪಟ್ಟ ಐದು ವರ್ಷಗಳ ಬಳಿಕ ಮೋದಿ ನೇತೃತ್ವದ ಕೇಂದ್ರ ಸರಕಾರ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ( CAA) ಜಾರಿಗೆ ತಂದಿದೆ.

ಇನ್ನು,ಕಳೆದ ತಿಂಗಳು,ಕೇಂದ್ರ ಗೃಹ ಮಂತ್ರಿ ಅಮಿತ್ ಶಾ  ಈ ವಿಚಾರಕ್ಕೆ ಸಂಬಂಧಿಸಿದಂತೆ ನಿಯಮಗಳನ್ನು ಹೊರಡಿಸಿ ಲೋಕಸಭೆ ಚುನಾವಣೆಗೆ ಮುನ್ನ ಸಿಎಎ ಜಾರಿಗೆ ತರಲಾಗುವುದು ಎಂದು ಹೇಳಿದ್ದರು.

ಭಾರತದಾದ್ಯಂತ 2019 ಡಿಸೆಂಬರ್ 11 ರಂದು ಸಂಸತ್ತು ಜಾರಿಗೊಳಿಸಿದ ಸಿಎಎ, ತೀವ್ರ ಚರ್ಚೆ ಮತ್ತು ವ್ಯಾಪಕ ವಾದ ಪ್ರತಿವಾದಗಳಿಗೆ ಕಾರಣವಾಗಿತ್ತು ಎನ್ನುವುದು ಇಲ್ಲಿ ಉಲ್ಲೇಖಾರ್ಹ.

ಅಫ್ಘಾನಿಸ್ಥಾನ, ಬಾಂಗ್ಲಾದೇಶ ಮತ್ತು ಪಾಕಿಸ್ಥಾನದ ಹಿಂದೂ, ಸಿಖ್, ಜೈನ್, ಪಾರ್ಸಿ, ಬೌದ್ಧ ಮತ್ತು ಕ್ರಿಶ್ಚಿಯನ್ ಸಮುದಾಯಗಳಿಗೆ ಸೇರಿದ ವಲಸಿಗರಿಗೆ, 2014 ಡಿಸೆಂಬರ್ 31 ರಿಂದ ಮೊದಲು ತಾಯ್ನಾಡಿನಲ್ಲಿ ಧಾರ್ಮಿಕ ಕಿರುಕುಳವನ್ನು ಎದುರಿಸಿದ ಕಾರಣ ಭಾರತವನ್ನು ಪ್ರವೇಶಿಸಿದವರಿಗೆ ಭಾರತೀಯ ಪೌರತ್ವಕ್ಕೆ ತ್ವರಿತ ಮಾರ್ಗ ಒದಗಿಸಲು ಸಿಎಎ 1955 ರ ಪೌರತ್ವ ಕಾಯ್ದೆಯನ್ನು ತಿದ್ದುಪಡಿ ಮಾಡುತ್ತದೆ.

ಭಾರತದ ನೆರೆಯ ಪಾಕಿಸ್ತಾನ, ಅಫ್ಘಾನಿಸ್ತಾನ ಹಾಗೂ ಬಾಂಗ್ಲಾ ದೇಶದಲ್ಲಿ ಬಹುಸಂಖ್ಯಾತ ಮುಸ್ಲಿಮರಿಂದ ದೌರ್ಜನ್ಯಕ್ಕೆ ಒಳಗಾಗಿರುವ ಅಲ್ಪಸಂಖ್ಯಾತ ಹಿಂದೂಗಳೂ ಸೇರಿದಂತೆ ಹಲವು ಸಮುದಾಯದವರಿಗೆ ಭಾರತದ ಪೌರತ್ವ ನೀಡುವ ಕಾಯ್ದೆ ಇದಾಗಿದೆ. ಇದರಲ್ಲಿ ಮುಸ್ಲಿಂ ಸಮುದಾಯ ಒಳಗೊಂಡಿರದೆ ಇರುವುದು ಕಾಂಗ್ರೆಸ್ ಸೇರಿ ನೂರಾರು ಸಂಘಟನೆಗಳ ವಿರೋಧಕ್ಕೆ ಕಾರಣವಾಗಿದೆ.

Related Articles

Stay Connected

21,961FansLike
3,912FollowersFollow
22,300SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!