spot_img
Friday, January 17, 2025
spot_img

ಅಂಗನವಾಡಿ ಕಾರ್ಯಕರ್ತೆಯರ ವೇತನ ಹೆಚ್ಚಳಕ್ಕೆ ಸಚಿವರ ಮನವಿ  | ನಿಯೋಗದೊಂದಿಗೆ ಮುಖ್ಯಮಂತ್ರಿ ಭೇಟಿ ಮಾಡಿದ ಸಚಿವರು

ಜನಪ್ರತಿನಿಧಿ (ಬೆಂಗಳೂರು) : ಅಂಗನವಾಡಿ ಕಾರ್ಯಕರ್ತರಿಗೆ ಕನಿಷ್ಠ ಎರಡು ಸಾವಿರ ರೂಪಾಯಿ ವೇತನ ಹೆಚ್ಚಿಸುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದರು.

ವಿಧಾನಸೌಧದಲ್ಲಿ ಸೋಮವಾರ ನಡೆದ ಅಂಗನವಾಡಿ ಕಾರ್ಯಕರ್ತರ ಹಾಗೂ ವಿಕಲ ಚೇತನರ ಸಂಘಟನೆಗಳ ನಿಯೋಗದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಸಚಿವರು,  ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು ಅನುಭವಿಸುತ್ತಿರುವ ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದರು. ವಿಕಲಚೇತನರು, ಅಂಗನವಾಡಿ ಕಾರ್ಯಕರ್ತರ ಸಮಸ್ಯೆಗಳಿಗೆ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.

ಇದೇ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಸಂಘಟನೆಗಳ ಸದಸ್ಯರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!