spot_img
Friday, March 27, 2026
spot_img

ಲೋಕಸಭಾ ಚುನಾವಣಾ ತಯಾರಿ : ಮಾರ್ಚ್ 15 ರಿಂದ 19 ರವರೆಗೆ ಕರ್ನಾಟಕದಲ್ಲಿ ಮೋದಿ ಚುನಾವಣಾ ಪ್ರಚಾರ ಸಭೆ

ಜನಪ್ರತಿನಿಧಿ (ಬೆಂಗಳೂರು)  : ಲೋಕಸಭಾ ಛೂಣಾವಣೆಗೆ ಕ್ಷಣಗಣನೆ ಆರಂಭವಾಗಿದೆ. ಲೋಕಸಭಾ ಚುನಾವಣೆಗೆ ಇನ್ನೂ ದಿನಾಂಕ ಘೋಷಣೆ ಮಾಡಿಲ್ಲ. ಆದೆರೆ, ಈ ನಡುವೆ ಪ್ರಬಲ ರಾಜಕೀಯ ಪಕ್ಷಗಳು ಚುನಾವಣೆಗೆ ಅಂತಿಮ ಹಂತದ ಸಿದ್ಧತೆಯಲ್ಲಿವೆ.

ಚುನಾವಣೆ ಸಂದರ್ಭದಲ್ಲಿ ಹೆಚ್ಚು ಮತದಾರರ ಗಮನ ಸೆಳೆಯಲು ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಚಾರ ಮಾಡುತ್ತಿದ್ದಾರೆ.

ಮಾರ್ಚ್ 15 ರಿಂದ 19 ರವರೆಗೆ ದಕ್ಷಿಣದ 5 ರಾಜ್ಯಗಳಲ್ಲಿ ಮೋದಿ ಪ್ರವಾಸ ಕೈಗೊಳ್ಳಲಿದ್ದಾರೆ. ಈ ವೇಳೆ ಕರ್ನಾಟಕದ 12 ಲೋಕಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಪ್ರವಾಸ ನಡೆಸಲಿದ್ದಾರೆ. ಈ ಮೂಲಕ ಮತ್ತೊಮ್ಮೆ ಕೇಂದ್ರದಲ್ಲಿ ಬಿಜೆಪಿ ಸರ್ಕಾರವನ್ನು ಆಡಳಿತಕ್ಕೆ ತರಲು ಬಿಜೆಪಿ ತಂತ್ರ ಹೆಣೆಯುತ್ತಿದೆ.

ಪ್ರಧಾನಿ ನರೇಂದ್ರ ಮೋದಿ ಮಾ.15 ರಂದು ಕೋಲಾರಕ್ಕೆ ಭೇಟಿ ನೀಡಲಿದ್ದು, ಇದೇ ವೇಳೆ ತುಮಕೂರು, ಚಿಕ್ಕಬಳ್ಳಾಪುರ ಕ್ಷೇತ್ರಗಳ ಮೇಲೂ ಗಮನ ಹರಿಸಲಿದ್ದಾರೆ.

ಮಾ.17 ರಂದು ಶಿವಮೊಗ್ಗ ಕ್ಷೇತ್ರಕ್ಕೆ ಭೇಟಿ ನೀಡಲಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ-ಚಿಕ್ಕಮಗಳೂರು ಕ್ಷೇತ್ರಗಳ ಬಗ್ಗೆ ವಿಶೇಷ ಗಮನ ನೀಡಲಿದ್ದಾರೆ ಎಂದು ಹೇಳಳಾಗಿದೆ. ಇನ್ನು, ಮಾ.18 ರಂದು ಬೀದರ್ ಹಾಗೂ ಕಲಬುರಗಿ ಮತ್ತು ಮಾ.19 ರಂದು ಧಾರವಾಡಕ್ಕೆ ಪ್ರಧಾನಿ ಭೇಟಿ ನೀಡಲಿದ್ದು, ಬೆಳಗಾವಿ, ಹಾವೇರಿ ಜಿಲ್ಲೆಗಳನ್ನು ಕೇಂಧೃಈಕರಿಸಿಕೊಂಡು ಪ್ರಧಾನಿ ಅವರು ಚುನಾವಣಾ ಪ್ರಚಾರ ಮಾಡಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ರಾಜ್ಯ ಭೇಟಿಯ ಸಂದರ್ಭದಲ್ಲಿ ಕೆಲವು ಕಾಮಗಾರಿಗಳಿಗೆ ಚಾಲನೆ ನೀಡಲಿದ್ದು, ಕೆಲವು ಉದ್ಘಾಟನಾ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆಂದು ಮಾಹಿತಿ  ತಿಳಿದುಬಂದಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!