Wednesday, September 11, 2024

ಲೋಕಸಭಾ ಚುನಾವಣೆ : ನಳೀನ್‌ ಕುಮಾರ್‌ ಕಟೀಲ್‌, ಪ್ರತಾಪ ಸಿಂಹಗೆ ಕೋಕ್‌, ಶೋಭಾ, ಶೆಟ್ಟರ್‌ಗೆ ಟಿಕೇಟ್‌ ಫಿಕ್ಸ್‌ !?

ಜನಪ್ರತಿನಿಧಿ (ನವ ದೆಹಲಿ) : ಬಿಜೆಪಿ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಸಭೆ ಕರ್ನಾಟಕದ 22 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮ ಮಾಡಲಾಗಿದೆ ಎನ್ನಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿ ಅಂತಿಮ ಮಾಡಲಾಗಿದೆ. 

ರಾಜ್ಯದ ಎಲ್ಲಾ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರುಗಳನ್ನು ಒಂದು ಅಥವಾ ಎರಡು ದಿನಗಳಲ್ಲಿ ಎರಡು ಪಟ್ಟಿಗಳಲ್ಲಿ ಘೋಷಿಸುವ ನಿರೀಕ್ಷೆಯಿದೆ ಎಂದು ಹೇಳಲಾಗುತ್ತಿದೆ.

ಬೆಳಗಾವಿಯಿಂದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಹುಬ್ಬಳ್ಳಿ-ಧಾರವಾಡದಿಂದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಉಡುಪಿ-ಚಿಕ್ಕಮಗಳೂರಿನಿಂದ ಶೋಭಾ ಕರಂದ್ಲಾಜೆ ಹಾಗೂ ಶಿವಮೊಗ್ಗದಿಂದ ಬಿವೈ ರಾಘವೇಂದ್ರ ಸೇರಿದಂತೆ ಕೆಲವು ಹೆಸರುಗಳನ್ನು ಅನುಮೋದಿಸಲಾಗಿದೆ ಎಂದು ಬಿಜೆಪಿ ಮೂಲಗಳು ಮಾಹಿತಿ ನೀಡಿವೆ.

ಮೈಸೂರು-ಕೊಡಗು, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಸೇರಿದಂತೆ ಕೆಲವು ಕ್ಷೇತ್ರಗಳನ್ನು ತಡೆಹಿಡಿಯಲಾಗಿದೆ. ಪಕ್ಷದ ನಾಯಕರು ನಾಳೆ (ಬುಧವಾರ)ಯೊಳಗೆ ಈ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ತೆರವುಗೊಳಿಸುವ ನಿರೀಕ್ಷೆಯಿದೆ. ಚಿಕ್ಕೋಡಿಯಿಂದ ರಮೇಶ್ ಕತ್ತಿ, ಚಿಕ್ಕಬಳ್ಳಾಪುರದಿಂದ ಡಾ ಸುಧಾಕರ್, ವಿಜಯಪುರದಿಂದ ಗೋವಿಂದ್ ಕಾರಜೋಳ, ಬೆಂಗಳೂರು ದಕ್ಷಿಣದಿಂದ ತೇಜಸ್ವಿ ಸೂರ್ಯ, ಬೆಂಗಳೂರು ಸೆಂಟ್ರಲ್‌ನಿಂದ ಪಿಸಿ ಮೋಹನ್, ಬೆಂಗಳೂರು ಗ್ರಾಮಾಂತರದಿಂದ ಡಾ. ಸಿ.ಎನ್. ಮಂಜುನಾಥ್, ತುಮಕೂರಿನಿಂದ ವಿ ಸೋಮಣ್ಣ, ಹಾವೇರಿಯ ಬಸವರಾಜ ಬೊಮ್ಮಾಯಿ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮೈಸೂರು ಕ್ಷೇತ್ರದ ಸಂಸದ ಪ್ರತಾಪಸಿಂಹ ಅವರಿಗೆ ಟಿಕೆಟ್ ಕೈ ತಪ್ಪುವುದು ಬಹುತೇಕ ಖಚಿತವಾಗಿದ್ದು, ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಟಿಕೆಟ್ ದೊರೆಯುವುದು ಬಹುತೇಕ ಖಚಿತವಾಗಿದೆ ಎಂದು ಉನ್ನತ ಮೂಲಗಳಿಂದ ಮಾಹಿತಿ ಇತ್ತು. ಆದರೇ, ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ರಾಜಕೀಯ ಪ್ರವೇಶವನ್ನು ನಿರಾಕರಿಸಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು, ಪ್ರತಾಪ್‌ ಸಿಂಹ ಅವರಿಂದ ಕೈ ತಪ್ಪಿದ ಬಿಜೆಪಿಯ ಲೋಕಸಭಾ ಟಿಕೇಟ್‌ ಮಂಜುನಾಥ್‌ ಗೌಡ ಎನ್ನುವವರಿಗೆ ದೊರಕಲಿದೆ ಎಂದು ಹೇಳಳಾಗುತ್ತಿದೆ.  

ಇನ್ನು, ದಕ್ಷಿಣ ಕನ್ನಡ ಸಂಸದ ನಳಿನ್‌ಕುಮಾರ್ ಕಟೀಲ್ ಅವರಿಗೆ ಟಿಕೆಟ್ ಕೈ ತಪ್ಪುವ ಸಾಧ್ಯತೆ ಇದ್ದು, ಚಿತ್ರದುರ್ಗದಿಂದ ಕೇಂದ್ರ ಸಚಿವ ನಾರಾಯಣಸ್ವಾಮಿ ಅವರಿಗೆ ಟಿಕೆಟ್ ಸಿಗುವ ನಿರೀಕ್ಷೆ ಇದೆ ಎಂದು ಹೇಳಲಾಗುತ್ತಿದೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!