Thursday, October 31, 2024

ಹರ್ಯಾಣದಲ್ಲಿ ಮೈತ್ರಿ ಮುರಿದುಕೊಂಡ ಬಿಜೆಪಿ-ಜೆಜೆಪಿ | ಸಿಎಂ ಸ್ಥಾನಕ್ಕೆ ಮನೋಹರ್ ಲಾಲ್ ಖಟ್ಟರ್ ರಾಜೀನಾಮೆ

ಜನಪ್ರತಿನಿಧಿ (ನವ ದೆಹಲಿ) : ಹರ್ಯಾಣ ರಾಜ್ಯದಲ್ಲಿ ಮೈತ್ರಿ ಸರ್ಕಾರ ನಡೆಸಿದ್ದ ಬಿಜೆಪಿ ಹಾಗೂ ಜನನಾಯಕ್ ಜನತಾ ಪಕ್ಷ (ಜೆಜೆಪಿ) ನಡುವಲ್ಲಿ ಇದೀಗ ಭಿನ್ನಾಭಿಪ್ರಾಯ ಸೃಷ್ಟಿಯಾಗಿದ್ದು, ಈ ಹಿನ್ನಲೆಯಲ್ಲಿ ಅಲ್ಲಿ ಮೈತ್ರಿ ಮುರಿದು ಬಿದ್ದಿದೆ.

ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಇಂದು(ಮಂಗಳವಾರ) ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ರಾಷ್ಟ್ರೀಯ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

ಹರ್ಯಾಣದಲ್ಲಿ ಮೈತ್ರಿ ಪಕ್ಷಗಳಾಗಿದ್ದ ಬಿಜೆಪಿ ಮತ್ತು ಜೆಜೆಪಿ ನಡುವೆ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಸೀಟು ಹಂಚಿಕೆಯ ಮಾತುಕತೆಗಳ ನಡುವೆ ಭಿನ್ನಾಭಿಪ್ರಾಯಗಳ ಉಂಟಾಗಿರುವ ಕಾರಣದಿಂದಾಗಿ ಮೈತ್ರಿಯಿಂದ ಹೊರಬಂದಿವೆ ಎಂದು ತಿಳಿದು ಬಂದಿದೆ.

ಇನ್ನು, ಬಿಜೆಪಿಯು ಪಕ್ಷೇತರ ಅಭ್ಯರ್ಥಿಗಳ ಸಹಾಯದಿಂದ ಸರ್ಕಾರ ರಚಿಸಲಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಜೆಜೆಪಿ ನಾಯಕ ದುಷ್ಯಂತ್ ಚೌಟೇಲಾ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ನಿನ್ನೆ(ಸೋಮವಾರ) ಭೇಟಿಯಾಗಿ ಸೀಟು ಹಂಚಿಕೆ ಬಗ್ಗೆ ಚರ್ಚೆ ನಡೆಸಿದ್ದರು.

ನಾವು ಈಗಾಗಲೇ ಮುಖ್ಯಮಂತ್ರಿ ಮನೋಹರ್ ಲಾಲ್ ನೇತೃತ್ವದ ಸರ್ಕಾರಕ್ಕೆ ನಮ್ಮ ಬೆಂಬಲವನ್ನು ನೀಡಿದ್ದೇವೆ. ನಾವು ಲೋಕಸಭೆ ಚುನಾವಣೆಯ ಕಾರ್ಯತಂತ್ರದ ಬಗ್ಗೆಯೂ ಚರ್ಚಿಸಿದ್ದೇವೆ” ಎಂದು ಹರಿಯಾಣದ ಸ್ವತಂತ್ರ ಶಾಸಕ ನಯನ್ ರಾವತ್ ಹೇಳಿದ್ದಾರೆ.

2019ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 40 ಕ್ಷೇತ್ರಗಳಲ್ಲಿ ಜಯ ಗಳಿಸಿತ್ತು. 90 ಸೀಟುಗಳ ವಿಧಾನಸಭೆಯಲ್ಲಿ ಮ್ಯಾಜಿಕ್ ಸಂಖ್ಯೆ 46 ಆಗಿದೆ. ಹತ್ತು ಕ್ಷೇತ್ರಗಳಲ್ಲಿ ಜಯ ಗಳಿಸಿದ್ದ ಜೆಜೆಪಿ ಜತೆ ಸೇರಿ ಬಿಜೆಪಿ ಸರ್ಕಾರ ರಚಿಸಿತ್ತು. ಏಳು ಮಂದಿ ಪಕ್ಷೇತರರು ಬಿಜೆಪಿ ಬೆಂಬಲಕ್ಕೆ ಇದ್ದಾರೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!